CHITRADURGA NEWS | 24 APRIL 2026
ಚಿತ್ರದುರ್ಗ: ವಧು-ವರದಕ್ಷಿಣೆ ನಿಷೇಧ (ಕರ್ನಾಟಕ) ನಿಯಮಗಳು 2004ರ ಅನ್ವಯ, ಚಿತ್ರದುರ್ಗ ಜಿಲ್ಲೆಯಲ್ಲಿ ವರದಕ್ಷಿಣೆ ಪಿಡುಗನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ: SSLC RESULT | ಚಿತ್ರದುರ್ಗ ಜಿಲ್ಲೆಗೆ ಜಿಲ್ಲೆ ಶೇ.92.25 ರಷ್ಟು ಫಲಿತಾಂಶ
ಜಿಲ್ಲಾ ಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್. (9538993366) ಜಿಲ್ಲಾ ಮಟ್ಟದ ವಧು-ವರದಕ್ಷಿಣೆ ನಿಷೇಧ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ್.ಡಿ (8880219737) ಜಿಲ್ಲಾ ಮಟ್ಟದ ಹೆಚ್ಚುವರಿ ವಧು-ವರದಕ್ಷಿಣೆ ನಿಷೇಧ ಅಧಿಕಾರಿಯಾಗಿ ಜವಾಬ್ದಾರಿ ಹೊತ್ತಿದ್ದಾರೆ.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಾಲ್ಲೂಕು ಮಟ್ಟದ ವಧು-ವರದಕ್ಷಿಣೆ ನಿಷೇಧ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಭರಮಸಾಗರ ನಿರ್ಮಲ ಎಸ್. ಚಿಕ್ಕಣ್ಣವರ್ (9448167024),ಚಳ್ಳಕೆರೆ ರಾಜಾನಾಯ್ಕ ಎಸ್. (9036250749), ಚಿತ್ರದುರ್ಗ ವೀಣಾ ಎಂ.ಎಂ (9448873683), ಹೊಳಲ್ಕೆರೆ ಅಭಿಲಾಷ ಎ. (8867404421) ಹಿರಿಯೂರು ಹಾಗೂ ಹೊಸದುರ್ಗ ಆರ್.ರಾಘವೇಂದ್ರ (7892661086), ಮೊಳಕಾಲ್ಮುರು ನವೀನ್ ಕುಮಾರ್ ಎಸ್.ಎಂ (7353002417) ಅವರು ವರದಕ್ಷಿಣೆ ನಿಷೇಧ ಅಧಿಕಾರಿಯಾಗಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ವರದಕ್ಷಿಣೆ ಕಿರುಕುಳ ಅಥವಾ ಈ ಸಂಬಂಧಿತ ದೂರುಗಳಿದ್ದಲ್ಲಿ ಸಾರ್ವಜನಿಕರು ಚಿತ್ರದುರ್ಗ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಅಥವಾ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಬಹದು. ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
