CHITRADURGA NEWS | 26 APRIL 2026
ಆರೋಗ್ಯಕರ ಜೀವನಕ್ಕೆ ಒಮೆಗಾ-3 ಕೊಬ್ಬಿನಾಮ್ಲಗಳು ಅತ್ಯಗತ್ಯ. ಬೆಳವಣಿಗೆ ಮತ್ತು ಅನೇಕ ದೈಹಿಕ ಕಾರ್ಯಗಳಿಗೆ ಒಮೆಗಾ-3 ಕೊಬ್ಬಿನಾಮ್ಲಗಳು ಅಗತ್ಯವಾಗಿ ಬೇಕು. ಇವು ಹೃದಯದ ಆರೋಗ್ಯವನ್ನು ಸುಧಾರಿಸಲು, ಟ್ರೈಗ್ಲಿಸರೈಡ್ಗಳನ್ನು ಕಡಿಮೆ ಮಾಡಲು, ಉರಿಯೂತವನ್ನು ತಗ್ಗಿಸಲು ಮತ್ತು ಮೆದುಳಿನ ಕಾರ್ಯನಿರ್ವಹಣೆಗೆ ಸಹಕಾರಿಯಾಗಿವೆ. ಆದರೆ ಮಹಿಳೆಯರಿಗೆ ಪುರುಷರಿಗಿಂತ ಹೆಚ್ಚು ಒಮೆಗಾ-3 ಕೊಬ್ಬಿನಾಮ್ಲಗಳು ಬೇಕಾಗುತ್ತವೆಯಂತೆ. ಯಾಕೆ ಎಂಬುದನ್ನು ತಿಳಿದುಕೊಳ್ಳಿ.
ಋತುಚಕ್ರದ ನೋವು ಕಡಿಮೆಯಾಗುತ್ತದೆ
ಹೆಚ್ಚಿನ ಮಹಿಳೆಯರು ತಮ್ಮ ಮುಟ್ಟಿನ ಸಮಯದಲ್ಲಿ ಹೊಟ್ಟೆ ಸೆಳೆತ ಸೇರಿದಂತೆ ತೀವ್ರವಾದ ನೋವನ್ನು ಅನುಭವಿಸುತ್ತಾರೆ. ಒಮೆಗಾ-3 ಕೊಬ್ಬಿನಾಮ್ಲಗಳು ಈ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ವೈದ್ಯರು ಸೂಚಿಸಿದ್ದಾರೆ.
ಸಂಧಿವಾತ ಸಮಸ್ಯೆ
ಪುರುಷರಿಗಿಂತ ಮಹಿಳೆಯರಿಗೆ ಸಂಧಿವಾತ ಬರುವ ಅಪಾಯ ಹೆಚ್ಚು. 40 ವರ್ಷದ ನಂತರ ರುಮಟಾಯ್ಡ್ ಸಂಧಿವಾತ ಬರುವ ಅಪಾಯ ಹೆಚ್ಚಾಗುತ್ತದೆ. ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ಒಮೆಗಾ-3 ಕೊಬ್ಬಿನಾಮ್ಲಗಳು ಕೀಲು ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡುವಲ್ಲಿ ಪ್ರಯೋಜನಕಾರಿಯಾಗಿದೆ.
ಹಾರ್ಮೋನುಗಳನ್ನು ನಿಯಂತ್ರಿಸುತ್ತದೆ
ಮಹಿಳೆಯರಲ್ಲಿ ಹೆಚ್ಚಾಗಿ ಹಾರ್ಮೋನುಗಳ ಸಮಸ್ಯೆ ಕಾಡುತ್ತಿರುತ್ತದೆ. ಇದರಿಂದ ಅವರಲ್ಲಿ ಅನಿಯಮಿತ ಋತುಚಕ್ರದ ಸಮಸ್ಯೆ , ಪಿಸಿಓಡಿ, ಪಿಸಿಓಎಸ್ ಸಮಸ್ಯೆ ಕಮಡುಬರುತ್ತದೆ. ಒಮೆಗಾ-3 ಕೊಬ್ಬಿನಾಮ್ಲಗಳನ್ನು ಸೇವಿಸುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿರುತ್ತದೆ. ಹಾಗಾಗಿ ಮಹಿಳೆಯರು ಇದನ್ನು ಹೆಚ್ಚು ಸೇವಿಸಬೇಕು.
ಗರ್ಭಾಶಯದ ಆರೋಗ್ಯಕ್ಕೆ ಉತ್ತಮ
ಒಮೆಗಾ-3 ಕೊಬ್ಬಿನಾಮ್ಲಗಳನ್ನು ಸೇವಿಸುವುದರಿಂದ ಗರ್ಭಾಶಯಕ್ಕೆ ರಕ್ತದ ಹರಿವು ಸುಧಾರಿಸುತ್ತದೆ. ಆದ್ದರಿಂದ, ಮಹಿಳೆಯರು ತಮ್ಮ ಆಹಾರದಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳನ್ನು ಸೇರಿಸಿಕೊಳ್ಳಬೇಕು. ಅಲ್ಲದೇ ಒಮೆಗಾ 3 ಕೊಬ್ಬಿನಾಮ್ಲಗಳನ್ನು ಸೇವಿಸುವುದರಿಂದ ದೇಹದಲ್ಲಿ ಉರಿಯೂತ ಕಡಿಮೆಯಾಗುತ್ತದೆ. ಒಮೆಗಾ 3 ಕೊಬ್ಬಿನಾಮ್ಲಗಳು ಗರ್ಭಾಶಯದಲ್ಲಿ ಭ್ರೂಣದ ಬೆಳವಣಿಗೆಯ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ.
ಹೃದಯ ಆರೋಗ್ಯ
ಒಮೆಗಾ 3 ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಒಮೆಗಾ 3 ಸೇವನೆಯು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಅಪಧಮನಿಗಳಲ್ಲಿ ಅಡಚಣೆಯ ಅಪಾಯ ಕಡಿಮೆಯಾಗುತ್ತದೆ.
ಒಮೆಗಾ 3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಆಹಾರಗಳು
ಒಮೆಗಾ 3 ಕೊಬ್ಬಿನಾಮ್ಲಗಳು ಸಾಲ್ಮನ್, ಟ್ರೌಟ್, ಕಾಡ್, ಸೀಗಡಿ ಮತ್ತು ಸಿಂಪಿ ಮುಂತಾದ ಕೊಬ್ಬಿನ ಮೀನುಗಳಲ್ಲಿ ಸಮೃದ್ಧವಾಗಿದೆ. ಹಾಗೇ ವಾಲ್ನಟ್ಸ್ , ಚಿಯಾ ಬೀಜಗಳು, ಹಸಿರು ಸೊಪ್ಪು ತರಕಾರಿಗಳಲ್ಲಿ ಹೇರಳವಾಗಿ ಕಂಡುಬರುತ್ತದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
