CHITRADURGA NEWS | 28 APRIL 2026
ಚಿತ್ರದುರ್ಗ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕುರಿತಂತೆ ಆಡಿರುವ ಮಾತುಗಳಿಗೆ ಸುಧಾಕರ್ ಪುತ್ರ ಸುಹಾಸ್ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್.ಡಿ.ಕುಮಾರಸ್ವಾಮಿ
ನಮ್ಮ ತಂದೆಯ ಅನಾರೋಗ್ಯವನ್ನು ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಳ್ಳುವುದು ಬೇಡ. ಹೆಬ್ಬೆಟ್ಟು ವಿಚಾರಕ್ಕೆ ಅವರು ನೀಡಿರುವ ಹೇಳಿಕೆ ನಮ್ಮ ಕುಟುಂಬಕ್ಕೆ ಬೇಸರ ತರಿಸಿದೆ ಎಂದಿದ್ದಾರೆ.
ಮಾರ್ಚ್ 26 ರಂದು ನಮ್ಮ ತಂದೆ ಡಿ.ಸುಧಾಕರ್ ಮೊಣಕಾಲು ನೋವಿಗೆ ಶಸ್ತ್ರಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯ ಮೂರು ದಿನಗಳ ನಂತರ ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಂಡಿತು.
ಹೆಚ್ಚಿನ ಚಿಕಿತ್ಸೆಗಾಗಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇರುವ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಹಲವು ಸಚಿವರು, ಶಾಸಕರು ಆಸ್ಪತ್ರೆಗೆ ಬಂದು ವಿಚಾರಿಸಿಕೊಂಡು ಹೋಗಿದ್ದಾರೆ. ನಮ್ಮ ಸಂಪರ್ಕದಲ್ಲಿದ್ದಾರೆ.
ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ | ಶಾಸಕರಾದ ಟಿ.ರಘುಮೂರ್ತಿ, ವೀರೇಂದ್ರ(ಪಪ್ಪಿ)
ಆದಷ್ಟು ಬೇಗ ತಂದೆ ಗುಣಮುಖರಾಗಿ ಬರುತ್ತಾರೆ ಎನ್ನುವ ವಿಶ್ವಾಸವಿದೆ ಎಂದಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

