CHITRADURGA NEWS | 30 APRIL 2026
ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ನೇಕಾರ ಸಮ್ಮಾನ್ ಯೋಜನೆಯಡಿ 2025-26ನೇ ಸಾಲಿನಲ್ಲಿ ನೊಂದಣಿಯಾದ ನೇಕಾರರು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ(ಪಿ.ಎಂ.ಜೆ.ಜೆ.ಬಿ.ವೈ) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ (ಪಿ.ಎಂ.ಎಸ್.ಬಿ.ವೈ) ಅಡಿ ವಿಮಾ ಸೌಲಭ್ಯ ಪಡೆಯಲು ಆರ್ಥಿಕ ನೆರವು ನೀಡಲಾಗುವುದು.
ಇದನ್ನೂ ಓದಿ: ಅಭಿಮಾನೋತ್ಸವಕ್ಕೆ ಬರಲಿದೆ ಬಿಎಸ್‌ವೈ ಅಂಬಾಸೀಡರ್
ವಿಮೆ ಪಡೆಯುವುದು ಕಡ್ಡಾಯವಾಗಿದ್ದು, 18 ರಿಂದ 50 ವರ್ಷದ ಅರ್ಹ ನೇಕಾರರು ಪಿ.ಎಂ.ಜೆ.ಜೆ.ಬಿ.ವೈ ಯೋಜನೆಯಡಿ 18 ರಿಂದ 70 ವರ್ಷದ ಅರ್ಹ ನೇಕಾರರು ಪಿ.ಎಂ.ಎಸ್.ಬಿ.ವೈ ನೊಂದಾಯಿಸಿಕೊಳ್ಳಬಹುದು.
ಇವರಿಗೆ 2026-27ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ನೀಡಲು ಪರಿಗಣಿಸಲಾಗುವುದು.
ಅರ್ಹರು ವಿಮೆಯಡಿ ನೊಂದಾಯಿಸಿಕೊಂಡ ರಸೀದಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಬ್ಯಾಂಕ್ ಸ್ಟೇಟ್‌ಮೆಂಟ್ ಪ್ರತಿ, ಆಧಾರ್ ಕಾರ್ಡ್, ನೇಕಾರರ ಪೇಚ್ಹಾನ್ ಕಾರ್ಡ್ ದಾಖಲೆಗಳೊಂದಿಗೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿಯಲ್ಲಿರುವ ಕಚೇರಿಗೆ ಮೇ.31 ರೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ.
ಇದನ್ನೂ ಓದಿ: ಸಿಎಂ ಭೇಟಿಯಾದ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) | ಚಿತ್ರದುರ್ಗದ 8 ಕೆರೆಗಳಿಗೆ ಭದ್ರ ನೀರು ಹರಿಸುವಂತೆ ಮನವಿ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-221426 ಸಂಪರ್ಕಿಸಬಹುದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
