
CHITRADURGA NEWS | 01 MAY 2026
ಚಿತ್ರದುರ್ಗ: ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸಲು ಅಗತ್ಯ ಕ್ರಮ ಕೈಗೊಂಡು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಿ ಪಪ್ಪಿಸ್ ಸ್ಟೂಡೆಂಟ್ ವಿಂಗ್ ತಂಡದಿಂದ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಮೇ.22ರಂದು ಚಿತ್ರದುರ್ಗದಲ್ಲಿ 77 ಪಾಳೇಗಾರರ ನೆನಪಿನೊತ್ಸವ ಮತ್ತು ಪ್ರತಿಭಾ ಪುರಸ್ಕಾರ
ನಗರದ ಜೆಸಿಆರ್ ಬಡಾವಣೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಸಚಿವರಿಗೆ ಮನವಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆ ತನ್ನ ವೈಭವಮಯ ಇತಿಹಾಸ, ಕೋಟೆಗಳು ಹಾಗೂ ಸಂಸ್ಕೃತಿಗೆ ಪ್ರಸಿದ್ಧವಾಗಿದೆ. ಇಲ್ಲಿ ನಡೆಯುತ್ತಿದ್ದ ದುರ್ಗೋತ್ಸವವು ಹಂಪಿ ಉತ್ಸವಕ್ಕಿಂತಲೂ ಹಳೆಯ ಪರಂಪರೆ ಹೊಂದಿದೆ. ಈ ಉತ್ಸವವು ಜಿಲ್ಲೆ ಜನತೆಗೆ ಮಾತ್ರವಲ್ಲದೆ, ರಾಜ್ಯದ ಸಂಸ್ಕೃತಿ ವೈಭವವನ್ನು ಪ್ರತಿಬಿಂಬಿಸುವ ಮಹತ್ವದ ಕಾರ್ಯಕ್ರಮವಾಗಲಿದೆ ಎಂದು ತಿಳಿಸಿದರು.
2006ರಲ್ಲಿ ದುರ್ಗೋತ್ಸವ ಸಂಭ್ರಮದ ಊತ್ಸವ ನಡೆದಿತ್ತು. ಮೂರು ವರ್ಷಕ್ಕೊಮ್ಮೆ ಆಚರಿಸಲಾಗುತ್ತಿದ್ದ ಈ ಉತ್ಸವವು ನಂತರ ನಾನಾ ಕಾರಣಗಳಿಂದ ಸ್ಥಗಿತಗೊಂಡಿದೆ. ಪ್ರಸ್ತುತ ರಾಜ್ಯದ ವಿವಿಧ ತಾಲೂಕು ಮಟ್ಟದ ಉತ್ಸವಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. ಆದರೆ, ಚಿತ್ರದುರ್ಗದಂತಹ ಇತಿಹಾಸ ಪ್ರಸಿದ್ದ ಜಿಲ್ಲೆಯ ಉತ್ಸವಕ್ಕೆ ಅನುದಾನ ನೀಡದಿರುವುದು ಜಿಲ್ಲೆಯ ಜನರಿಗೆ ಬೇಸರ ತರಿಸಿದ ಎಂದು ವಿವರಿಸಿದರು.
ಭವ್ಯವಾದ ದುರ್ಗೋತ್ಸವ ಆಚರಿಸಲು ಅಂದಾಜು 10 ಕೋಟಿ ರೂ.ಗಳ ಅನುದಾನ ಮಂಜೂರು ಮಾಡುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿದ ಸಚಿವ ಸಿವರಾಜ್ ತಂಗಡಗಿ ಜಿಲ್ಲಾಧಿಕಾರಿ ವೆಂಕಟೇಶ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ದುರ್ಗೋತ್ಸವಕ್ಕೆ ಸಂಬಂಧಿಸಿದ ಖರ್ಚು ವೆಚ್ಚದ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಿಂದ ವಿಶೇಷ ಲೋಕಾದಾಲತ್ | ಸದುಪಯೋಗ ಪಡೆದುಕೊಳ್ಳಿ | ನ್ಯಾ.ರೋಣ ವಾಸುದೇವ
ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ), ಪಪ್ಪಿಸ್ ಸ್ಟೂಡೆಂಟ್ ವಿಂಗ್ ಅಧ್ಯಕ್ಷ ರವಿ ಚಿನ್ನು, ಕಾರ್ಯದರ್ಶಿ ಸಲೀಂ, ಸದಸ್ಯರಾದ ನಿಜಾಂ ಮತ್ತು ದರ್ಶನ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

