
CHITRADURGA NEWS | 02 MAY 2026
ಚಿತ್ರದುರ್ಗ: ದಲಿತರು ಹಾಗೂ ವಿಶೇಷವಾಗಿ ಬಲಗೈ ಸಂಬಂಧಿತ ಛಲವಾದಿ ಸಮುದಾಯಗಳು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಗಳಾಗಿವೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಆಯ್ಕೆ ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ದಲಿತರ ಶಾಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ದಲಿತ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಹೆಚ್.ಕೆ.ಬಸವರಾಜ್ ಒತ್ತಾಯಿಸಿದರು.
ಇದನ್ನೂ ಓದಿ: ಮೇ.31 ವರೆಗೆ ಲಿಡ್ಕರ್ ಉತ್ಪನ್ನಗಳ ಮೇಲೆ ಶೇ.15 ರಿಯಾಯಿತಿ ಮಾರಾಟ
ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಲಗೈ ಸಂಬಂಧಿತ ಛಲವಾದಿ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ನಾಯಕರನ್ನು ಹಾಗೂ ರಾಜ್ಯ ನಾಯಕರನ್ನು ಕೊಟ್ಟಿದೆ. ಪಕ್ಷದಲ್ಲಿ ಪ್ರತಿಷ್ಠಿತ ಸ್ಥಾನಮಾನಗಳನ್ನು ಕೊಟ್ಟಿರಬಹುದು ಆದರೆ, ಸಂವಿಧಾನಿಕ ಹಾಗೂ ನಿರ್ಣಾಯಕ ಹುದ್ದೆಗಳನ್ನು ಈವರೆಗೆ ಕೊಟ್ಟಿಲ್ಲ ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದಲ್ಲಿ ಶಿಸ್ತಿನ ಸಿಪಾಯಿಯಾಗಿ 60 ವರ್ಷಗಳ ಕಾಲ ನಿಷ್ಠೆಯಿಂದ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಮಾಡಿದ್ದಾರೆ. ಅವರು ಈಗಾಗಲೇ ಮುಖ್ಯಮಂತ್ರಿಯಾಗಿ ಇರಬೇಕಿತ್ತು. ಆದರೆ, ಪಕ್ಷ ಈವರೆಗೆ ಅವರನ್ನು ಪರಿಗಣಿಸಿಲ್ಲ, ಅವರಿಗೆ ಸಂವಿಧಾನಾತ್ಮಕವಾಗಿ ಸ್ಥಾನಮಾನಗಳನ್ನು ಬಿಟ್ಟು ಬೇರೆ ಹುದ್ದೆಗಳನ್ನು ನೀಡಲಾಗಿದೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಜ್ಯದ ಮುಖ್ಯಮಂತ್ರಿಯಾಗಲು ಈಗ ಸದಾವಕಾಶ ಒದಗಿ ಬಂದಿದೆ. ಯಾವುದೇ ಕಾರಣಕ್ಕೂ ಈ ಅವಕಾಶದಿಂದ ವಂಚಿತರಾಗಬಾರದು. ಒಂದು ಪಕ್ಷ ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡದಿದ್ದರೆ ದಲಿತರ ಕೋಪಕ್ಕೆ ಗುರಿಯಾಗುತ್ತದೆ. ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ವಿರುದ್ಧ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ. 02| ಹತ್ತಿ ರೇಟ್ ಎಷ್ಟಿದೆ?
75 ವರ್ಷಗಳ ಕಾಲ ದಲಿತ ಸಮುದಾಯ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದೆ. ಈಗ ಹೈಕಮಾಂಡ್ ದಲಿತರ ಪರವಾಗಿ ನಿಲ್ಲಬೇಕಾಗಿದೆ. ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗಲು ಕಾಂಗ್ರೆಸ್ ಪಕ್ಷದ ಬಹುತೇಕ ನಾಯಕರು ಸಮ್ಮತಿಸಿದ್ದಾರೆ. ಇದರೊಂದಿಗೆ ದಲಿತಪರ ಸಂಘಟನೆಗಳು ಸಹ ಒಪ್ಪಿಗೆ ಸೂಚಿಸಿವೆ.
ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗುವುದಾದರೆ ನನ್ನದೇನು ಅಭ್ಯಂತರವಿಲ್ಲ ಎಂದು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಹೇಳಿದ್ದಾರೆ. ಒಂದು ವೇಳೆ ಅವರಿಗೆ ಸಿಎಂ ಸ್ಥಾನ ಕೈ ತಪ್ಪಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಗಾಳಿ ಬೀಸುತ್ತಿದೆ. ಇದರ ಸದುಪಯೋಗವನ್ನು ಮಾಡಿಕೊಂಡು ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಗಳಾಗಬೇಕು. ಈಗ ಅವಕಾಶ ತಪ್ಪಿದರೆ ಮುಂದೆಂದೂ ಅವಕಾಶ ಇರುವುದಿಲ್ಲ.
ಇದನ್ನೂ ಓದಿ: ಬಿಎಸ್‌ವೈ ಅಭಿಮಾನೋತ್ಸವದ ಪೂರ್ವಭಾವಿ ಸಭೆ ನಾಳೆ | ಜಿ.ಎಚ್.ತಿಪ್ಪಾರೆಡ್ಡಿ
ಈ ಹಿನ್ನಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಧೈರ್ಯ ಮಾಡಿ ಮುಂದಿನ ಹೆಜ್ಜೆ ಇಡಬೇಕು. ಖರ್ಗೆ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳಿದರೆ ನಂತರದ ಸ್ಥಾನದಲ್ಲಿ ಡಾ.ಜಿ.ಪರಮೇಶ್ವರ್, ಮಹಾದೇವಪ್ಪ, ಮುನಿಯಪ್ಪ ಮತ್ತು ಸತೀಶ್ ಜಾರಕಿಹೊಳಿ ಇದ್ದಾರೆ. ಇವರಲ್ಲಿ ಯಾರನ್ನಾದರೂ ಮಾಡಬಹುದು.
ಈ ಸಂಬಂಧ ಶೀಘ್ರದಲ್ಲೇ ದಾವಣಗೆರೆ ಅಥವಾ ಚಿತ್ರದುರ್ಗದಲ್ಲಿ 5 ಲಕ್ಷಕ್ಕಿಂತ ಹೆಚ್ಚು ದಲಿತ ಸಮುದಾಯವರನ್ನು ಸೇರಿಸಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಕೊಡದಿದ್ದಲ್ಲಿ, ದಲಿತ ಸಮುದಾಯವೂ ಕಾಂಗ್ರೆಸ್ ಪಕ್ಷ ನಿಷ್ಠೆಯನ್ನು ತೊರೆಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಚಳ್ಳಕೆರೆ | ITI ಪ್ರವೇಶಕ್ಕೆ ಅರ್ಜಿ ಅಹ್ವಾನ
ಸುದ್ದಿಗೋಷ್ಟಿಯಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ನಿರಂಜನಮೂರ್ತಿ, ರಾಜ್ಯ ಕಾರ್ಯದರ್ಶಿ ರವಿಕುಮಾರ್, ರಾಜ್ಯ ನಿರ್ದೆಶಕರಾದ ಅಣ್ಣಪ್ಪ, ಕಾರ್ಯಾಧ್ಯಕ್ಷ ದಯಾನಂದ, ಶಿವಪ್ರಸಾದ್, ಜಯರಾಮ್, ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಪ್ಪ, ಪ್ರದೀಪ್ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

