
CHITRADURGA NEWS | 06 MAY 2026
ಚಿತ್ರದುರ್ಗ: ಮಲೇರಿಯಾ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಘವೇಂದ್ರ ಪ್ರಸಾದ್ ತಿಳಿಸಿದರು.
ಹೊಸದುರ್ಗ ತಾಲ್ಲೂಕಿನ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಮಲೇರಿಯಾ ದಿನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ಅಭಿಮಾನೋತ್ಸವದಲ್ಲಿ ಊಟದ ಕೊರತೆ ಇರುವುದಿಲ್ಲ | ಯಲಹಂಕ ಶಾಸಕ ವಿಶ್ವನಾಥ್
‘ಮಲೇರಿಯಾ ರೋಗವನ್ನು ಕೊನೆಗೊಳಿಸಲು ಅಗತ್ಯ ಕ್ರಮಗಳ ಚಾಲನೆಯನ್ನು ಈಗ ನಾವು ಮಾಡೋಣ ಮತ್ತು ಮಾಡುತ್ತೇವೆ’ ಎಂಬ ಘೋಷವಾಕ್ಯದೊಂದಿಗೆ ರೋಗ ತಡೆಗಟ್ಟುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಇಲಾಖೆಯ ಎಲ್ಲಾ ಯೋಜನೆಗಳನ್ನು ಸಮರ್ಥವಾಗಿ ಅನುಷ್ಠಾನಗೊಳಿಸಲು ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ಸಹನ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಮ್ಮ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಿಜಿಯಮ್ಮ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

