CHITRADURGA NEWS | 08 MAY 2026A
ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಾಳೆ ಆಯೋಜಿಸಿರುವ ಅಭಿಮಾನೋತ್ಸವದ ಅಂಗವಾಗಿ ಇಂದು ಸಂಜೆ ಬಿ.ಎಸ್.ಯಡಿಯೂರಪ್ಪ ಅವರ ಪುರಪ್ರವೇಶ ಅದ್ದೂರಿಯಾಗಿ ಜರುಗಿತು.
ಇದನ್ನೂ ಓದಿ: ಅಭಿಮಾನೋತ್ಸವಕ್ಕೆ ಕೋಟೆನಾಡು ಸಜ್ಜು | ಬಿಎಸ್ವೈ ಅಂಬಾಸಿಡರ್ ಕಾರು ಪ್ರದರ್ಶನ
50 ವರ್ಷಗಳ ಸುದೀರ್ಘ ರಾಜಕೀಯ ಪಣಯವನ್ನು ಕಂಡಿರುವ ರೈತ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಕೋಟೆನಾಡು ಚಿತ್ರದುರ್ಗದ ಜನತೆ ಸಂಭ್ರಮದಿಂದ ಸ್ವಾಗತಿಸಿದರು.
ದಕ್ಷಿಣ ಭಾರತದಲ್ಲಿಯೆ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಕಮಲವನ್ನು ಅರಳಿಸಿದ ಬಿ.ಎಸ್.ಯಡಿಯೂರಪ್ಪನವರು ಬಡವರ ಮನೆಯ ಹೆಣ್ಣು ಮಗುವಿಗೆ ಭಾಗ್ಯಲಕ್ಷಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರ ಸಂಜೀವಿನಿ ಏನಿಸಿಕೊಂಡರು.

ರೈತರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೈತ ನಾಯಕನ ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಪಟಾಕಿಗಳನ್ನು ಸಿಡಿಸಿ ಕುಣಿದು ಕುಪ್ಪಳಿಸಿದ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟುಂತಿತ್ತು.
ಇದನ್ನೂ ಓದಿ: ಕಾಗದರಹಿತ, ಮುಖರಹಿತ ನೋಂದಣಿಗೆ ವಿರೋಧ | ಹಳೇ ನೋಂದಣಿ ಮುಂದುವರೆಸಿ | ಜಿಲ್ಲಾ ದಸ್ತಾವೇಜು ಬರಹಗಾರರ ಸಂಘ
ಸಂಜೆ 6 ಗಂಟೆಗೆ ತಂಪು ಹೊತ್ತಿನಲ್ಲಿ ಕನಕ ವೃತ್ತದಿಂದ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಆರಂಭಗೊಂಡ ಮೆರವಣಿಗೆ ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿ ಸರ್ಕಲ್, ಎಸ್.ಬಿ.ಎಂ.ವೃತ್ತ, ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಮದಕರಿನಾಯಕನ ಪ್ರತಿಮೆ ಬಳಿ ಮುಕ್ತಾಯಗೊಂಡಿತು.
ಡೊಳ್ಳು, ಉರುಮೆ, ತಮಟೆ, ನಂದಿಕೋಲು, ವೀರಗಾಸೆ, ಗೊರವರ ಕುಣಿತ, ಕಹಳೆ, ಸೋಮನ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಕಳೆ ಕಟ್ಟಿದಂತಿತ್ತು. ತೆರೆದ ವಾಹನದಲ್ಲಿ ವಿರಾಜಮಾನರಾಗಿದ್ದ ಬಿ.ಎಸ್.ಯಡಿಯೂರಪ್ಪನವರು ರಸ್ತೆಯ ಎರಡು ಬದಿಗಳಲ್ಲಿ ನಿಂತಿದ್ದ ಜನತೆಯತ್ತ ಕೈಬೀಸಿ ಅಭಿಮಾನೋತ್ಸವಕ್ಕೆ ಪ್ರತಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದರು. ನಾನಾ ಬಗೆಯ ಸ್ಥಬ್ದ ಚಿತ್ರಗಳು ಮೆರವಣಿಗೆಯಲ್ಲಿ ಕಣ್ಮನ ಸೆಳೆಯುತ್ತಿದ್ದವು.
ಇದನ್ನೂ ಓದಿ: ಕೆ.ಆರ್. ಶಿವಪ್ರಕಾಶ್ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ, ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಚಿವರುಗಳಾದ ಶ್ರೀರಾಮುಲು, ಜನಾರ್ಧನರೆಡ್ಡಿ, ಬಿ.ಸಿ.ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಲಿಂಗಮೂರ್ತಿ, ಜಿ.ಹೆಚ್.ಮೋಹನ್‍ಕುಮಾರ್ ಸೇರಿದಂತೆ ಬಿಜೆಪಿಯ ಮುಖಂಡರುಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

