CHITRADURGA NEWS | 08 MAY 2026
ಚಿತ್ರದುರ್ಗ: ವೀರಶೈವ ಸಮಾಜದ ಮುಖಂಡ, ಉದ್ಯಮಿ ಕೆ.ಆರ್.ಶಿವಪ್ರಕಾಶ್ ಅವರ ನಿಧನಕ್ಕೆ ವಿವಿಧ ಮಠಾಧೀಶರು ಸಂತಾಪ ಸೂಚಿಸಿದ್ದಾರೆ. ನಗರದ ಆರ್‌ಟಿಓ ಕಚೇರಿ ರಸ್ತೆಯಲ್ಲಿರುವ ಅವರ ಮನೆಗೆ ಭೇಟಿ ನೀಡಿದ ಸ್ವಾಮೀಜಿಗಳು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು.
ಇದನ್ನೂ ಓದಿ: ಕೆ.ಆರ್. ಶಿವಪ್ರಕಾಶ್ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ
ಈ ವೇಳೆ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಕೆಲ್ಲೋಡು ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಯಾದವಾನಂದ ಸ್ವಾಮೀಜಿ, ಅಥಣಿ ಶ್ರೀ ಶಿವಬಸವ ಸ್ವಾಮೀಜಿ, ಶಿವಮೊಗ್ಗದ ಶ್ರೀ ಬಸವ ಮರಳುಸಿದ್ದ ಸ್ವಾಮೀಜಿ ಹಾಜರಿದ್ದು, ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಇದೇ ವೇಳೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಕೂಡಾ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕೆ.ಎಸ್.ನವೀನ್ ಹಾಗೂ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಇದನ್ನೂ ಓದಿ: MLC ನವೀನ್ ತಂದೆ ಕೆ.ಆರ್.ಶಿವಪ್ರಕಾಶ್ ನಿಧನ
ಈ ವೇಳೆ ಶಿವಪ್ರಕಾಶ್ ಅವರ ಪತ್ನಿ ಕೆ.ಎಸ್.ಸುಜಯ, ಪುತ್ರ ಎಂಎಲ್ಸಿ ಕೆ.ಎಸ್.ನವೀನ್ ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
