By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ಹಿರಿಯೂರು ಭಾಗದ 16 ಕೆರೆ, ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲು ₹244 ಕೋಟಿ ಯೋಜನೆಗೆ ಸಿಎಂ ಭೂಮಿಪೂಜೆ
    2 weeks ago
    ಭದ್ರಾ ಮೇಲ್ದಂಡೆ ಯೋಜನೆ | ಚಿತ್ರದುರ್ಗ ಶಾಖಾ ಕಾಲುವೆಗೆ ಹೆಚ್ಚುವರಿ 1 ಟಿಎಂಸಿ ಬಿಡುಗಡೆಗೆ ಕ್ರಮ | ಟಿ.ರಘುಮೂರ್ತಿ
    2 weeks ago
    ಅರ್ಜಿ ಅಹ್ವಾನ
    ಚಿತ್ರದುರ್ಗ ಜಿಲ್ಲೆಯಲ್ಲಿ 216 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
    2 weeks ago
    ಚರ್ಮ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ | ಅರ್ಜಿ ಆಹ್ವಾನ
    2 weeks ago
    Municipal Council
    ಲ್ಯಾಪ್‌ಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ
    2 weeks ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    2 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 month ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 month ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
    1 week ago
    today bhavishya
    ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
    1 week ago
    today bhavishya
    ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
    1 week ago
    today bhavishya
    ದಿನ ಭವಿಷ್ಯ | ನವೆಂಬರ್ 02 | ಶುಭವಾರ್ತೆ, ಹೊಸ ಉದ್ಯೋಗಾವಕಾಶಗಳು
    2 weeks ago
    today bhavishya
    ದಿನ ಭವಿಷ್ಯ | ನವೆಂಬರ್ 01 | ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ, ವಸ್ತ್ರಾಭರಣ ಖರೀಧಿ
    2 weeks ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 30 | ಮೆಕ್ಕೆಜೋಳ, ಶೇಂಗಾ ರೇಟ್….
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    2 weeks ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 month ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    2 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    2 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    2 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    2 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    2 weeks ago
Reading: ಸುಧಾಕರ್ ಅಂತಿಮ ದರ್ಶನ ಪಡೆದ ಡಿಕೆಶಿ ಭಾವುಕ ನುಡಿ ‌
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸುಧಾಕರ್ ಅಂತಿಮ ದರ್ಶನ ಪಡೆದ ಡಿಕೆಶಿ ಭಾವುಕ ನುಡಿ ‌

News Desk Chitradurga News
Last updated: 10 May 2026 20:55
News Desk Chitradurga News
6 months ago
Share
ಸಚಿವ ಡಿ.ಸುಧಾಕರ್ ಅಂತಿಮ ದರ್ಶನ ಪಡೆದ ಡಿಸಿಎಂ ಡಿಕೆಶಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನ ಪಡೆದ ಡಿಸಿಎಂ ಡಿಕೆಶಿ
SHARE

CHITRADURGA NEWS | 10 MAY 2026

ಚಿತ್ರದುರ್ಗ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಿ.ಸುಧಾಕರ್ ಗೆ ಸಂತಾಪ 

ಭಾನುವಾರ ಹಿರಿಯೂರು ನಗರದ ನೆಹರು ಮೈದಾನದಲ್ಲಿ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ನಾನು ಮತ್ತು ಸುಧಾಕರ್ ಅವರು ಆಪ್ತ ಸ್ನೇಹಿತರು. ಇಷ್ಟು ಚಿಕ್ಕ ವಯಸ್ಸಿನಲ್ಲೇ ಅವರು ನಮ್ಮನ್ನು ಅಗಲುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ,” ಎಂದು ಭಾವುಕರಾದರು.

ಆಸ್ಪತ್ರೆಗೆ ದಾಖಲಾಗುವ ಮುನ್ನ ಕೂಡ ಸುಧಾಕರ್ ಅವರು ಅತ್ಯಂತ ಆತ್ಮವಿಶ್ವಾಸದಿಂದ ಇದ್ದರು. ತಮ್ಮ ಕಾಲಿನ ಸಮಸ್ಯೆಯನ್ನು ಸರಿಪಡಿಸಿಕೊಂಡು ಬರುತ್ತೇನೆ ಎಂದು ಹೇಳಿಯೇ ಆಸ್ಪತ್ರೆಗೆ ಹೋಗಿದ್ದರು. ಆದರೆ ಕೊನೆಯ ಹಂತದಲ್ಲಿ ಲಂಗ್ ಇನ್ಫೆಕ್ಷನ್ (ಶ್ವಾಸಕೋಶದ ಸೋಂಕು) ಆದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿಸಿದರು.

ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗಾಗಿ, ಅದರಲ್ಲೂ ವಿಶೇಷವಾಗಿ ರೈತರ ಬದುಕಿನಲ್ಲಿ ಬದಲಾವಣೆ ತರಲು ನಿರಂತರವಾಗಿ ಶ್ರಮಿಸಿದವರು ಎಂದು ಡಿಕೆಶಿ ಸ್ಮರಿಸಿದರು ಅವರು, ಈ ಭಾಗದ ರೈತರ ಹಿತದೃಷ್ಟಿಯಿಂದ ಭದ್ರಾ ಮೇಲ್ದಂಡೆ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ಅವರು ಶ್ರಮಿಸಿದ್ದರು. 

ಟ್ರಯಲ್ ರನ್ ವೇಳೆ ನೀರು ಬಿಡಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ವೈ ಜಂಕ್ಷನ್ ಬಳಿಯ ದೀರ್ಘಕಾಲದ ಸಮಸ್ಯೆಯನ್ನು ಬಗೆಹರಿಸಲು ಶಾಸಕರನ್ನು ಒಟ್ಟುಗೂಡಿಸಿ ಹೋರಾಟ ಮಾಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡುವಾಗ ಯಾರಿಗೂ ಕಿರುಕುಳ ನೀಡದ, ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದರು ಎಂದರು.

ಇದನ್ನೂ ಓದಿ: ಡಿ.ಸುಧಾಕರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಜಾತಿ-ಧರ್ಮದ ಭೇದವಿಲ್ಲದೆ ಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದ ಸುಧಾಕರ್ ಅವರ ಸಾವು ಪಕ್ಷ ಹಾಗೂ ಸರ್ಕಾರಕ್ಕೆ ತುಂಬಲಾರದ ನಷ್ಟವಾಗಿದೆ. ಸುಧಾಕರ್ ಅವರ ಕುಟುಂಬಕ್ಕೆ ಸರ್ಕಾರ ಹಾಗೂ ಪಕ್ಷವು ಸಂಪೂರ್ಣ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು. ಇದೇ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಡಿ.ಕೆ.ಶಿವಕುಮಾರ್ ಅವರು ಮೊಬೈಲ್ ಕರೆ ಮಾಡಿ, ಸಚಿವ ಡಿ.ಸುಧಾಕರ್ ಅವರ ಪುತ್ರ ಸುಹಾಸ್ ಅವರಿಗೆ ಸಾಂತ್ವಾನ ಹೇಳಿದರು.

ಸಂಸದ ಗೋವಿಂದ ಎಂ. ಕಾರಜೋಳ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಿಧನದ ಸುದ್ದಿಯನ್ನು ನಂಬಲು ಅಸಾಧ್ಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಧಾಕರ್ ಅವರು ಒಬ್ಬ ಸಜ್ಜನ ರಾಜಕಾರಣಿಯಾಗಿದ್ದರು. ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು, ಜನರ ಪ್ರೀತಿಗೆ ಪಾತ್ರರಾಗಿದ್ದವರು. ಇಂತಹ ಜನಪ್ರಿಯ ವ್ಯಕ್ತಿ ಇಂದು ನಮ್ಮನ್ನು ಅಗಲಿರುವುದು ಇಡೀ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ ಎಂದರು.

ಸುಧಾಕರ್ ಅವರೊಂದಿಗೆ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡ ಕಾರಜೋಳ, “ನಾನು ಸಚಿವನಾಗಿದ್ದಾಗ ಅವರು ಕೂಡ ನನ್ನ ಸಹೋದ್ಯೋಗಿಯಾಗಿ ಕೆಲಸ ಮಾಡಿದ್ದರು. ಅವರ ಸೌಮ್ಯ ಸ್ವಭಾವ ಮತ್ತು ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿತ್ತು. ರಾಜಕಾರಣದಲ್ಲಿ ಇರುವವರು ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎನ್ನುವ ತತ್ವಕ್ಕೆ ಅವರು ಕನ್ನಡಿಯಂತಿದ್ದರು ಎಂದರು.

ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರ ಹಿರಿಯೂರಿಗೆ | ಅಂತಿಮ ದರ್ಶನಕ್ಕೆ ವ್ಯವಸ್ಥೆ | ನಾಳೆ‌ ಚಳ್ಳಕೆರೆಯಲ್ಲಿ ಅಂತ್ಯಕ್ರಿಯೆ

ಸಾವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಸುಧಾಕರ್ ಅವರು ಈ ವಯಸ್ಸಿನಲ್ಲೇ ನಮ್ಮನ್ನು ಅಗಲಬಾರದಿತ್ತು. ಅವರಿಗೆ ಕೇವಲ 62 ವರ್ಷ ವಯಸ್ಸಾಗಿತ್ತು. ಇದು ಸಾವು ಬರುವಂತಹ ವಯಸ್ಸಲ್ಲ ಎಂದು ಭಾವುಕರಾದರು.

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು. ಅವರು ಸಮಾಜಕ್ಕಾಗಿ ಹಾಕಿಕೊಟ್ಟ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಕಾರಜೋಳ ಅವರು ತಿಳಿಸಿದರು.

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬ ಆಘಾತವಾಗಿದೆ. ಅವರು ಜಿಲ್ಲೆಯ ಅಭಿವೃದ್ಧಿಗಾಗಿ ಅಹೋರಾತ್ರಿ ಶ್ರಮಿಸಿದ ಜನಪ್ರಿಯ ನಾಯಕರು ಎಂದು ಕಂಬನಿ ಮಿಡಿದರು.

ಸಚಿವರ ಅಗಲಿಕೆ ಚಿತ್ರದುರ್ಗ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರೊಬ್ಬ ಸರಳ ಸಜ್ಜನಿಕೆಯ ವ್ಯಕ್ತಿತ್ವದ ನಾಯಕರಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯ ಅನೇಕ ಕುಂಠಿತಗೊಂಡಿದ್ದ ಯೋಜನೆಗಳಿಗೆ ಚಾಲನೆ ನೀಡಿದ್ದರು. ಜನರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಗುಣ ಅವರಲ್ಲಿತ್ತು. ನನ್ನ ಮತ್ತು ಸುಧಾಕರ್ ಅವರ ನಡುವೆ ದಶಕಗಳ ಕಾಲದ ಒಡನಾಟವಿತ್ತು. ರಾಜಕೀಯ ಮೀರಿ ಅವರು ನನಗೆ ವೈಯಕ್ತಿಕವಾಗಿ ಆಪ್ತರಾಗಿದ್ದರು ಎಂದು ರಘುಮೂರ್ತಿ ಸ್ಮರಿಸಿದರು.

ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ ಇನ್ನಿಲ್ಲ | ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ

ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಡಿ.ಸುಧಾಕರ್ ಅವರು ಒಬ್ಬ ಸ್ನೇಹಜೀವಿ ಮತ್ತು ಅಭಿವೃದ್ಧಿ ಪರ ಚಿಂತನೆಯುಳ್ಳವರಾಗಿದ್ದರು. 40 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಹಂತ ಹಂತವಾಗಿ ಮುನ್ನೆಲೆಗೆ ಬಂದು ಜನಸೇವೆಯನ್ನು ಮಾಡಿದ್ದರು. ಜಿಲ್ಲೆಯ ಅಭಿವೃದ್ಧಿಯಲ್ಲಿ ಸದಾ ಆಸಕ್ತಿ ಹೊಂದಿದ್ದ ಅವರು ಭದ್ರಾ ಮೇಲ್ದಂಡೆ ಯೋಜನೆ, ಕೆರೆಗಳಿಗೆ ನೀರು ತುಂಬಿಸುವ ಕೆಲಸಗಳಿಗಾಗಿ ಸಾಕಷ್ಟು ಶ್ರಮಿಸಿದ್ದರು. 

ನಾವು ಬೇರೆ ಬೇರೆ ಪಕ್ಷಗಳಲ್ಲಿದ್ದರೂ ಜಿಲ್ಲೆಯ ಅಭಿವೃದ್ಧಿ ಕೆಲಸಗಳ ವಿಚಾರದಲ್ಲಿ ಒಂದೇ ಮನೆಯ ಸದಸ್ಯರಂತೆ ಚರ್ಚೆ ಮಾಡುತ್ತಿದ್ದೆವು. ಅಷ್ಟರಮಟ್ಟಿಗೆ ಅವರೊಂದಿಗೆ ನನಗೆ ಆತ್ಮೀಯ ಒಡನಾಟವಿತ್ತು. ಜಿಲ್ಲೆಯ ಒಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಭಗವಂತನು ಡಿ.ಸುಧಾಕರ್ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.

ಚಳ್ಳಕೆರೆಯಲ್ಲಿ ಅಂತ್ಯಕ್ರಿಯೆ: ಮುಖ್ಯಮಂತ್ರಿ ಹಾಗೂ ಗಣ್ಯರ ಭೇಟಿ

ಚಳ್ಳಕೆರೆಯಲ್ಲಿ ನಾಳೆ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ ನಡೆಯಲಿದ್ದು, ನಗರದ ಸುಧಾಕರ್ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಅಂತ್ಯಕ್ರಿಯೆ ಪಾಲ್ಗೊಳ್ಳಲಿದ್ದಾರೆ. ಅಗಲಿದ ನಾಯಕನಿಗೆ ಗೌರವ ಸಲ್ಲಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ಸುಗಮವಾಗಿ ದರ್ಶನ ಪಡೆಯಲು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವು ಬಿಗಿ ಬಂದೋಬಸ್ತ್ ಕೈಗೊಳ್ಳಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ಡಾ.ಚಾಂದಿನಿ ಖಲೀದ್‍ ಅವರ ಒಂದು ಬೊಗಸೆ ಪ್ರೀತಿ ಕವನ ಸಂಕಲನ ಬಿಡುಗಡೆ

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಜ್ಞಾನ ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವ ಬೋಸರಾಜು, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರ ಅಪಾರ ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsD.K. ShivakumarMinister D. Sudhakarಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿ.ಕೆ. ಶಿವಕುಮಾರ್ಸಚಿವ ಡಿ.ಸುಧಾಕರ್
Share This Article
Facebook Email Print
Previous Article ಡಾ.ಚಾಂದಿನಿ ಖಲೀದ್‍ ಅವರ ಒಂದು ಬೊಗಸೆ ಪ್ರೀತಿ ಕವನ ಸಂಕಲನ ಬಿಡುಗಡೆ ಡಾ.ಚಾಂದಿನಿ ಖಲೀದ್‍ ಅವರ ಒಂದು ಬೊಗಸೆ ಪ್ರೀತಿ ಕವನ ಸಂಕಲನ ಬಿಡುಗಡೆ
Next Article ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತವೆ | ಡಿಡಿಪಿಯು
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
Dina Bhavishya
today bhavishya
ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
Dina Bhavishya
today bhavishya
ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
Dina Bhavishya
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಹಿರಿಯೂರು ಭಾಗದ 16 ಕೆರೆ, ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲು ₹244 ಕೋಟಿ ಯೋಜನೆಗೆ ಸಿಎಂ ಭೂಮಿಪೂಜೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up