CHITRADURGA NEWS | 16 MAY 2026
ಚಿತ್ರದುರ್ಗ: ಸರ್ಕಾರಿ ನೌಕರರು ತಮ್ಮ ಹಕ್ಕುಗಳ ರಕ್ಷಣೆ ಹಾಗೂ ವೃತ್ತಿ ಬದುಕಿನ ಏಳಿಗೆಗಾಗಿ ಸಂಘಟಿತರಾಗುವುದು ಇಂದಿನ ಅಗತ್ಯವಾಗಿದೆ ಎಂದು ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್. ರಾಜಪ್ಪ ತಿಳಿಸಿದರು.
ಇದನ್ನೂ ಓದಿ: ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀಧಿ
ನಗರದ ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪದೋನ್ನತಿ ಹೊಂದಿದ ಶಿಕ್ಷಕರಿಗೆ ಹಾಗೂ ಸಂಘದ ನಿರ್ದೇಶಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2026ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ಹೊಂದಿದ ಪರಿಶಿಷ್ಟ ವರ್ಗದ 16 ಶಿಕ್ಷಕರನ್ನು ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಯ್ಕೆಯಾದ 13 ನಿರ್ದೇಶಕರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಎಸ್. ರಂಗಸ್ವಾಮಿ ಅವರು ಸಮಾರಂಭ ಉದ್ಘಾಟಿಸಿ, ಸಂಘಟನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸಂಘಟನೆ ಮತ್ತಷ್ಟು ಬಲಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಇದನ್ನೂ ಓದಿ: ಮೇ.18 ರಿಂದ SSLC ಪರೀಕ್ಷೆ-2 | ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ADC ಸೂಚನೆ
ಈ ಸಂದರ್ಭದಲ್ಲಿ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ ನಾಯಕ, ಆರ್. ಮಾರುತೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಮಹಾಂತೇಶ್, ಬಿಇಒ ನಾಗಭೂಷಣ್, ಎಲ್ಐಸಿ ಮಹೇಶ್ ಸೇರಿದಂತೆ ರಾಜಯ್ಯ, ವಸಂತ ಕುಮಾರ್, ಕೆ. ಸುದರ್ಶನ, ವಿಮಲಾಕ್ಷಿ, ಸಣ್ಣಸೂರಪ್ಪ, ಕರಿಯಣ್ಣ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
