
CHITRADURGA NEWS | 03 JUNE 2026
ಚಿತ್ರದುರ್ಗ: ನಗರದ ಭೀಮಸಮುದ್ರ ರಸ್ತೆಯ ಧವಳಗಿರಿ ಬಡಾವಣೆಯ ಎರಡನೇ ಹಂತದಲ್ಲಿರುವ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಇದೇ ಜೂನ್ 5 ಮತ್ತು 6ರಂದು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ
ಜೂನ್ 5ರಂದು ಶುಕ್ರವಾರ ಬೆಳಿಗ್ಗೆ 8 ರಿಂದ ಸ್ವಸ್ತಿ ಪುಣ್ಯಾಹವಾಚನ, ಆಚಾರ್ಯದಿ ಋತ್ವಿಗ್ವರಣ, ಪಂಚಗವ್ಯ ಹವನ, ಕ್ಷಿಪ್ರ ಪ್ರಸಾ ಮಹಾಗಣಪತಿಗೆ ಮಹಾನ್ಯಾಸ ಪೂರ್ವಕ ಲಘು ರುದ್ರಾಭಿಷೇಕ, ಮಹಾಭಿಷೇಕ ಪೂಜಾದಿಗಳು ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ.
ಸಂಜೆ 6.30 ರಿಂದ ಕೆ.ಗಂಗಾಧರ್ ಅವರ ಹಂಸಗಾನ ಕಲಾ ಬಳಗದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ತದನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
ಜೂನ್ 6ರಂದು ಶನಿವಾರ ಬೆಳಿಗ್ಗೆ 8 ರಿಂದ ಶ್ರೀ ಕ್ಷಿಪ್ತ ಪ್ರಸಾದ ಮಹಾಗಣಪತಿಗೆ ಪಂಚಾಮೃತ ಸಹಿತ ರುದ್ರಾಭಿಷೇಕ ಹಾಗೂ ನವಗ್ರಹ ಪುರಸ್ಸರ ಅಷ್ಟದ್ರವ್ಯ ಮಹಾಗಣಪತಿ ಹೋಮ, ಪೂರ್ಣಾಹುತಿ, ಅಲಂಕಾರ ಮಧ್ಯಾಹ್ನ 12.30 ರಿಂದ ಅಷ್ಟಾವಧಾನ ಮಹಾಮಂಗಳಾರತಿ ನಂತರ ಮಧ್ಯಾಹ್ನ 1 ರಿಂದ ಅನ್ನ ಸಂತರ್ಪಣೆ ನಡೆಯಲಿದೆ.
ಇದನ್ನೂ ಓದಿ: ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ
ಸಂಜೆ 6 ರಿಂದ ಧವಳಗಿರಿ ಬಡಾವಣೆಯ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದೆ.
ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ 9880466192, 9449145416 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
