
CHITRADURGA NEWS | 03 JUNE 2026
ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘುರವರ ಅಭಿಮಾನಿಗಳು ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ | DC ಟಿ.ವೆಂಕಟೇಶ್
ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಜೈಕಾರ ಕೂಗಿದರು.
ಪಿ.ರಘು ಫೋಟೋಗಳುಳ್ಳ ಪೋಸ್ಟರ್ಗಳನ್ನು ಎತಿಹಿಡಿದು ಘೋಷಣೆಗಳನ್ನು ಕೂಗುತ್ತಿದ್ದ ಅಭಿಮಾನಿಗಳು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಾರಥ್ಯದಲ್ಲಿ ಮುನ್ನಡೆಯುವ ಸರ್ಕಾರ ಅಭಿವೃದ್ದಿಯತ್ತ ಸಾಗಲಿ ಎಂದು ಹಾರೈಸಿದರು.
ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲಪ್ರದೇಶ, ಕೇರಳ, ತೆಲಂಗಾಣ ಮುಖ್ಯಮಂತ್ರಿಗಳು, ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಟರು ಸೇರಿದಂತೆ ಅನೇಕ ಗಣ್ಯರು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಕ್ಯಾಬಿನೆಟ್ ದರ್ಜೆ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದವರಿಗೆ ಅಭಿನಂದಿಸಿದರು.
ಇದನ್ನೂ ಓದಿ: ಜೂನ್ 04 ರಂದು ನಿಗದಿಯಾಗಿದ್ದ KDP ಸಭೆ ಮುಂದೂಡಿಕೆ
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ, ಸಾಧಿಕ್ ಫೈಲ್ವಾನ್, ಅಣ್ಣಿ, ಕೋಟಿ, ಲೋಕೇಶ್, ಕೆ.ರಾಜಣ್ಣ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಂಜುನಾಥ್ಬಳ್ಳೆಕಟ್ಟೆ, ಸತೀಶ್ ಜೆಜೆಹಟ್ಟಿ, ಎಂ.ಕೆ.ಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್, ಸುನಿಲ್ಕುಮಾರ್, ಪ್ರಕಾಶ್ ಭರಮಸಾಗರ ಸೇರಿ ಇತರರು ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

