
CHITRADURGA NEWS | 04 JUNE 2026
ಚಿತ್ರದುರ್ಗ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ವಿಕಾಸ ಯೋಜನೆಯಡಿ ಹಿರಿಯೂರು ತಾಲ್ಲೂಕು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜೂನ್ 05ರಂದು ಜಿಲ್ಲೆಯ ಆಸಕ್ತ ರೈತ ಬಾಂಧವರಿಗಾಗಿ ‘ಸಾವಯವ ಕೃಷಿ‘ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇದನ್ನೂ ಓದಿ: ಡಿಕೆಶಿ ನೂತನ ಸಿಎಂ | ಪಿ.ರಘು ಅಭಿಮಾನಿಗಳಿಂದ ದುರ್ಗದಲ್ಲಿ ಸಂಭ್ರಮಾಚರಣೆ
ಈ ತರಬೇತಿ ಕಾರ್ಯಾಗಾರದಲ್ಲಿ ಬ್ಯಾಡರಹಳ್ಳಿಯ ಪ್ರಗತಿಪರ ಕೃಷಿಕರಾದ ಇಂದೂಧರ ಅವರು ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಸಾವಯವ ಪದ್ಧತಿಯನ್ನು ಅನುಸರಿಸುವ ವಿಧಾನಗಳು, ನೀರು ಮತ್ತು ಪೋಷಕಾಂಶಗಳ ಸಮರ್ಪಕ ನಿರ್ವಹಣೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.
ಹಿರಿಯೂರಿನ ಪ್ರಗತಿಪರ ಕೃಷಿಕರಾದ ಶ್ರೀನಿವಾಸ್ ಅವರು ಜೇನು ಕೃಷಿಯ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬದ ನಿರ್ವಹಣೆಯ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕರಾದ ರಜನಿಕಾಂತ ಆರ್ ಅವರು ಲಾಭದಾಯಕ ಹಾಗೂ ಸುಸ್ಥಿರ ಸಮಗ್ರ ಕೃಷಿ ಪದ್ಧತಿಯ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ | DC ಟಿ.ವೆಂಕಟೇಶ್
ಈ ತರಬೇತಿಯಲ್ಲಿ ಜಿಲ್ಲೆಯ ಆಸಕ್ತ 50 ಜನ ರೈತರು ಮಾತ್ರ ಭಾಗವಹಿಸಲು ಅವಕಾಶವಿದ್ದು, ಆಸಕ್ತರು 8277931058 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ತಮ್ಮ ಆಧಾರ್ ಕಾರ್ಡ್ ಅಥವಾ ಎಫ್.ಐ.ಡಿಯೊಂದಿಗೆ ತರಬೇತಿಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಆರ್.ರಜನಿಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
