
CHITRADURGA NEWS | 06 JUNE 2026
ಚಿತ್ರದುರ್ಗ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿರವರ ನಿವಾಸದಲ್ಲಿ ತಾಯಿ ಹೆಸರಿನಲ್ಲಿ ಒಂದು ಸಸಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿ, ಸಸಿ ನೆಡಲಾಯಿತು.
ಇದನ್ನೂ ಓದಿ: ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
ಈ ವೇಳೆ ಮಾತನಾಡಿದ ಜಿ.ಹೆಚ್.ತಿಪ್ಪಾರೆಡ್ಡಿ, ಪರಿಸರ ಉಳಿಸುವುದು ಪ್ರತಿಯೊಬ್ಬ ವ್ಯಕ್ತಿ ಕರ್ತವ್ಯವಾಗಿದೆ. ಪರಿಸರದಿಂದ ಶುದ್ದ ಗಾಳಿಯನ್ನು ಪಡೆಯಬಹುದು ಪರಿಸರ ಎಂದರೆ ಗಾಳಿ, ಬೆಳಕು, ಪರ್ವತಗಳು ಹಾಗೂ ಇನ್ನು ಮುಂತಾದವುಗಳು ಇದೆ.
ಮನುಷ್ಯನಿಗೆ ಪರಿಸರ ಸ್ವಚ್ಚವಾಗಿದ್ದರೆ ಆರೋಗ್ಯವಂತವಾಗಿ ಇರುತ್ತಾನೆ. ನಮ್ಮ ಸುತ್ತಮುತ್ತಲಿನ ಪರಿಸರನ್ನು ಉಳಿಸಿಕೊಳ್ಳೋಬೇಕು. ಉತ್ತಮಗಾಳಿಯನ್ನು ಪಡೆಯಬೇಕಾದರೆ ಗಿಡ, ಮರಗಳನ್ನು ಬೆಳಸಬೇಕು ಎಂದು ಹೇಳಿದರು.
ಇದನ್ನೂ ಓದಿ: ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ನಗರಾಧ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಜಿಲ್ಲಾ ಉಪಾಧ್ಯಕ್ಷ ಗಾ.ನ.ಲಿಂಗರಾಜು, ಪಲ್ಲವಿ ಪ್ರಸನ್ನ, ಮಹಾಂತೇಶ್, ಸುಮಾ, ನಾಗರಾಜ್, ವಸಂತಚಾರ್ ಸೇರಿದಂತೆ ನಗರ ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
