
CHITRADURGA NEWS | 06 JUNE 2026
ಚಿತ್ರದುರ್ಗ: ಮುಂಬರುವ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ವತಿಯಿಂದ ಕ್ಷೇತ್ರ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ತಾಯಿಯ ಹೆಸರಿನಲ್ಲಿ ಸಸಿ ನೆಟ್ಟ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ
ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕ್ಷೇತ್ರ ಸಂಯೋಜಕರಾಗಿ ಎಸ್.ಕೇಶವ ಪ್ರಸಾದ್, ಜಿಲ್ಲಾ ಉಸ್ತುವಾರಿಗಳಾಗಿ ಚಿತ್ರದುರ್ಗ ಜಿಲ್ಲೆಗೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ದೇವರಾಜು ವಿದ್ಯಾಸಂಸ್ಥೆಯ ಸಿಇಓ ರಘುಚಂದನ್ ಅವರನ್ನು ನೇಮಕ ಮಾಡಿ ಆದೇಶ ನೀಡಿದ್ದಾರೆ.
ಇದೇ ರೀತಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದ ಉಳಿದ ನಾಲ್ಕು ಜಿಲ್ಲೆಗಳಿಗೂ ಸಹಾ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
