
CHITRADURGA NEWS | 07 JUNE 2026
ಚಿತ್ರದುರ್ಗ: ಮನೆಗೊಂದು ಮರ, ಊರಿಗೊಂದು ವನವಿರಬೇಕು. ಮರ ಆರೋಗ್ಯಕ್ಕೆ, ಮಠ ಸಮಾಜಕ್ಕೆ ಪೂರಕವಾಗಿರುತ್ತದೆ. ಶ್ರೀ ಮುರುಘಾಮಠವು ಇಡೀ ವಿಶ್ವದಲ್ಲೆ ಸರ್ವಜನಾಂಗದವರ 20 ರಿಂದ 25 ಸಾವಿರ ಉಚಿತ ಸಾಮೂಹಿಕ ಸರಳ ವಿವಾಹಗಳನ್ನು ನೆರವೇರಿಸಿದ ಏಕೈಕ ಮಠವಾಗಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
ನಗರದ ಬಸವ ಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ ವಿಶ್ವಪರಿಸರ ದಿನಾಚರಣೆ ಹಾಗೂ 36ನೇ ವರ್ಷದ 6ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 12 ಜೋಡಿಗಳ ವಿವಾಹ ನೆರವೇರಿಸಿ ಮಾತನಾಡಿದ ಶ್ರೀಗಳು,
ಇಂದು ವಿವಾಹ ಆಗುತ್ತಿರುವ ವಧು-ವರರು ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಸಾಮೂಹಿಕ ವಿವಾಹದಲ್ಲಿ ಮದುವೆಯಾಗುತ್ತಿರುವುದು ಇತರರಿಗೆ ಮಾದರಿಯಾಗಿದೆ. ಶ್ರೀಮಠದ ಕೊಡುಗೆ ಕಡಿಮೆ ಇರಬಹುದು ಆದರೆ ಆಶೀರ್ವಾದ ದೊಡ್ಡದಾಗಿರುತ್ತದೆ.
ನೂತನ ವಧುವರರು ವಿಶ್ವಪರಿಸರ ದಿನಾಚರಣೆ ಸಂದರ್ಭದಲ್ಲಿ ನಿಮ್ಮ ವಿವಾಹದ ಗುರುತ್ತಾಗಿ ಒಂದೊಂದು ಗಿಡ ನೆಡಿ. ಮುಂದಿನ ದಿನದಲ್ಲಿ ಇಲ್ಲಿಗೆ ಬಂದಾಗ ಅದು ಸದಾ ನೆನಪಿನಲ್ಲಿರುತ್ತದೆ. ಇಲ್ಲಿ ಸನ್ಮಾನಗೊಂಡಿರುವ ಸಿದ್ಧರಾಜು ಮಾಡಿರುವ ಸಾಧನೆ ಅಸಾಧಾರಣವಾದುದು. ಅವರು ಸುಮಾರು 41 ಸಾವಿರ ಗಿಡ ನೆಟ್ಟಿದ್ದಾರೆ ಎಂದರು.
ಇದನ್ನೂ ಓದಿ: ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
ದಾವಣಗೆರೆ ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಮಾತನಾಡಿ, ಇಂದು ವಿಶ್ವಪರಿಸರ ದಿನ. ಭೂಮಿಯನ್ನು ಕಾಪಾಡಿಕೊಳ್ಳಬೇಕು. ಇರುವುದೊಂದೇ ಭೂಮಿಯಾಗಿರುವುದರಿಂದ ಅವಶ್ಯಕ. ಮಾನವ ಅನೇಕ ಗ್ರಹಗಳಿಗೆ ಹೋಗಿದ್ದಾನೆ. ಆದರೆ ಅಲ್ಲಿ ಮಾನವ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಜೀವಿಸಲು ಭೂಮಿ ಮುಖ್ಯ.
ಜನಸಂಖ್ಯೆ ಹೆಚ್ಚಾಗುತ್ತಿದೆ ಆದರೆ ಮರಗಳ ಸಂಖ್ಯೆ ಕಡಿಮೆಯಾಗುತ್ತಿವೆ. ಮನುಷ್ಯನಿಗೆ ಮರ ಮುಖ್ಯ. ಅದೇರೀತಿ ಅಂತಹ ಮರ ಗಿಡಗಳನ್ನು ಪೋಷಿಸುವ ಕಾರ್ಯವನ್ನು ಶ್ರೀಮಠ ಮಾಡುತ್ತಾ ಬಂದಿದೆ. ಶ್ರೀಮಠದಲ್ಲಿ 20 ಸಾವಿರ ಜೋಡಿ ಮದುವೆ ಮಾಡಿಕೊಡಲಾಗಿದೆ. ಇದೊಂದು ದಾಖಲೆ.
ಶ್ರೀಮಠವು ಹಸಿದು ಬಂದವರಿಗೆ ಅನ್ನದಾಸೋಹ ಸದಾ ಮಾಡುತ್ತಿದೆ. ಪ್ರತಿಯೊಬ್ಬರು ತಮ್ಮ ತಮ್ಮ ಮೊಬೈಲ್‌ಗಳ ಸ್ಟೇಟಸ್‌ನಲ್ಲಿ ಪರಿಸರ ದಿನದ ಪೋಸ್ಟರ್ ಹಾಕುತ್ತೀರಿ. ಆದರೆ ಮುಂದಿನ ದಿನದಲ್ಲಿ ಸ್ಟೇಟಸ್ ಬದಲಾಗಿ ನಿಮ್ಮ ನಿಮ್ಮ ಜಾಗಗಳಲ್ಲಿ ಗಿಡ ನೆಟ್ಟು ಪರಿಸರ ಸಮತೋಲನವನ್ನು ಕಾಪಾಡಿ ಎಂದು ಕರೆ ನೀಡಿದರು.
ಇದನ್ನೂ ಓದಿ: ಜಮೀರ್ ಅಹಮ್ಮದ್ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಶಿರಸಂಗಿಯ ಶ್ರೀ ಬಸವ ಮಹಾಂತ ಸ್ವಾಮೀಜಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಗೋಪ್ಯಾನಾಯ್ಕ ಮಾತನಾಡಿದರು.
ಇದೇ ಸಂದರ್ಭದಲ್ಲಿ 47 ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಪರಿಸರ ಕಾಳಜಿಯನ್ನು ವ್ಯಕ್ತಪಡಿಸಿರುವ ಸಿದ್ಧರಾಜು ಜೋಗಿ ಅವರನ್ನು ಸನ್ಮಾನಿಸಲಾಯಿತು. ನವಜೋಡಿಗಳು ವಿಶ್ವಪರಿಸರ ದಿನಾಚರಣೆ ಅಂಗವಾಗಿ ಮಠದ ಅಂಗಳದಲ್ಲಿ ಗಿಡಗಳನ್ನು ನೆಟ್ಟರು.
ನಿಪ್ಪಾಣಿಯ ಶ್ರೀ ಬಸವ ಮಲ್ಲಿಕಾರ್ಜುನ ಸ್ವಾಮೀಜಿ, ಮಹಂತೇಶ್ ಆರ್. ಕಮ್ಮಾರ್ ಇತರರು ಭಾಗವಹಿಸಿದ್ದರು.
ಜಾನಪದ ಕಲಾವಿದ ಗಂಜಿಗಟ್ಟೆ ಕೃಷ್ಣಮೂರ್ತಿ ಜಾನಪದ ಹಾಡುಗಳನ್ನು ಹಾಡಿದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಶಿಕ್ಷಕ ಗಿರೀಶಾಚಾರ್ ಸ್ವಾಗತಿಸಿದರು. ಟಿ.ಪಿ. ಜ್ಞಾನಮೂರ್ತಿ ನಿರೂಪಿಸಿ, ವಂದಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
