
CHITRADURGA NEWS | 07 JUNE 2026
ಚಿತ್ರದುರ್ಗ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಸವೇಶ್ವರ ಕಾಲೇಜ್ ಆಫ್ ಫಿಸಿಯೋಥೆರಪಿ ಕಾಲೇಜು ಆವರಣದಲ್ಲಿ ಗಿಡ ನೆಡುವ ಮತ್ತು ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಸಸಿಗಳಿಗೆ ನೀರೆರೆಯುವ ಹಾಗೂ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಇದನ್ನೂ ಓದಿ: ಅಡಿಕೆ ಧಾರಣೆ | 6 ಜೂನ್ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್
ಈ ವೇಳೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ರಾಜನ್, ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ಹಸಿರು ವಾತವರಣ ನಿರ್ಮಾಣ ಮತ್ತು ಸ್ವಚ್ಚ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿದರು.
ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ಪ್ರತಿಜ್ಞೆ ಸ್ವೀಕರಿಸಿದರು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಕನಿಷ್ಠ ಒಂದು ಗಿಡವನ್ನು ನೆಟ್ಟು ಪೋಷಿಸಬೇಕು ಎಂಬ ಸಂದೇಶವನ್ನು ನೀಡಲಾಯಿತು.
ಇದನ್ನೂ ಓದಿ: ಜಮೀರ್ ಅಹಮ್ಮದ್ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಕಚೇರಿ ಉಸ್ತುವಾರಿಗಳಾದ ಸಿ.ಅಮೃತಲಕ್ಷಿ, ಉಪನ್ಯಾಸಕರಾದ ಕೆ.ಸುನೀತ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
