CHITRADURGA NEWS | 15 JUNE 2026
ಚಿತ್ರದುರ್ಗ: ಈ ಹಿಂದೆ ಮನಮೋಹನ್ಸಿಂಗ್ ಪ್ರಧಾನಿಯಾಗಿದ್ದಾಗ ದೇಶದಲ್ಲಿದ್ದ ಪರಿಸ್ಥಿತಿ ಹಾಗೂ ಈಗ ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದಲ್ಲಿ ಆಗಿರುವ ಬದಲಾವಣೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಶಿವಮೊಗ್ಗ ಹೊರಹೊಲಯದ ಖಾಸಗಿ ಹೋಟೆಲ್ನಲ್ಲಿ 2 ದಿನಗಳ ಕಾಲ ಹಮ್ಮಿಕೊಂಡಿರುವ ಪಂಡಿತ್ ದೀನದಾಯಳ್ ಉಪಾಧ್ಯಯ ಪ್ರಶಿಕ್ಷಣ ಮಹಾಭಿಯಾನ-2026 ಅಂಗವಾಗಿ ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ಆಗುತ್ತಿರುವ ದುರಾಡಳಿತದ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬೀನ್ ರವರ ಸೂಚನೆಯಂತೆ ದೇಶದ್ಯಾಂತ ಮಂಡಲ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರಿಗೆ ಪ್ರಶಿಕ್ಷಣ ನೀಡಲಾಗುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ 100 ವರ್ಷಗಳು ಪೂರೈಸಿದ ಈ ಸಂದರ್ಭದಲ್ಲಿ ನಾವು ಸಂಘಟತ್ಮಕವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
2014ರ ಮೊದಲು ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ 2ಜಿ ಸ್ಪೆಕ್ಟ್ರಂ, ಕಾಮನ್ ವೇಲ್ತ್, ಕಲ್ಲಿದ್ದಲು ಹಗರಣ ಸೇರಿದಂತೆ ಸಾಕಷ್ಟು ಭ್ರಷ್ಟಾಚಾರಗಳಿಂದ ಕೂಡಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಿತಿ ಯಾವ ರೀತಿಯಲ್ಲಿತ್ತು ಎಂಬುದು ಎಲ್ಲರಿಗೂ ಗೊತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ್ದಾರೆ. 3 ಬಾರಿ ಪ್ರಧಾನಿಯಾಗಿ ಅಧಿಕಾರ ನಡೆಸುತ್ತಾ ಭಾರತವನ್ನು ವಿಶ್ವದಲ್ಲಿ 4ನೇ ಆರ್ಥಿಕ ಬಲಿಷ್ಠ ರಾಷ್ಟ್ರವಾಗಿ ನಿರ್ಮಾಣ ಮಾಡಿರುವ ಹೆಮ್ಮೆಗೆ ಪಾತ್ರರಾಗಿರುತ್ತಾರೆ ಎಂದರು.
ನರೇಂದ್ರ ಮೋದಿ ಅವರಿಗೆ ವಿಶ್ವದ್ಯಾಂತ 25 ದೇಶಗಳು ಅತ್ಯುನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದಾರೆ. ಬಿಜೆಪಿ ದೇಶದ 23 ರಾಜ್ಯಗಳಲ್ಲಿ ಆಡಳಿತದಲ್ಲಿದ್ದು, ಕೇಂದ್ರ ಸರ್ಕಾರದಲ್ಲಿ 25 ಹಿಂದುಳಿದ ವರ್ಗದ ಸಚಿವರಿದ್ದು 20 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಚಿವರಿದ್ದಾರೆ ಎಂದು ವಿವರಿಸಿದರು.
ಸಂಸದ ಗೋವಿಂದ ಕಾರಜೋಳ ಮಾತನಾಡಿ, ವಿಶ್ವದಲ್ಲಿಯೇ ಅತೀ ಹೆಚ್ಚು ಸದಸ್ಯತ್ವ ಹೊಂದಿದ ಬಿಜೆಪಿ ನಮ್ಮೆಲ್ಲರ ತಾಯಿಯಂತೆ. ಪಕ್ಷದ ತತ್ವ, ಸಿದ್ಧಾಂತಗಳನ್ನು ಎಲ್ಲರೂ ಪಾಲಿಸಬೇಕು ಎಂದರು.
ಇದನ್ನೂ ಓದಿ: ಶಾಲೆಗೆ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ
ಕಳೆದ ಮೂರು ಅವಧಿಯ ನರೇಂದ್ರ ಮೋದಿಜೀ ಸರ್ಕಾರದ ಜನಪರ ಕಲ್ಯಾಣ ಯೋಜನೆಗಳಾದ ಜನ ಧನ್, ಮುದ್ರಾ, ಕಿಸಾನ್ ಸನ್ಮಾನ್ ಅಯುಷ್ಮಾನ್ ಭಾರತ್, ಫಸಲ್ ಭೀಮ್ ಯೋಜನೆ, ಜಲ್ ಜೀವನ್ ಮಿಷನ್, ಉಜ್ವಲ್ ಯೋಜನೆ ಸೇರಿದಂತೆ ನೂರಾರು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾಡುವಂತೆ ಕರೆ ನೀಡಿದರು.
ವರ್ಗದಲ್ಲಿ ಶಾಸಕ ಡಾ.ಎಂ.ಚಂದ್ರಪ್ಪ, ಎಂಎಲ್ಸಿ ಕೆ.ಎಸ್.ನವೀನ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಪ್ರಶಿಕ್ಷಣ ಅಭಿಯಾನದ ರಾಜ್ಯ ಸಂಚಾಲಕ ಎಂಎಲ್ಸಿ ಡಿ.ಎಸ್.ಅರುಣ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಜಿ.ಎಚ್.ಮೋಹನ್, ಡಾ.ಮಂಜುನಾಥ್, ವೆಂಕಟೇಶ್ ಯಾದವ್, ಮಾಜಿ ಅಧ್ಯಕ್ಷರಾದ ಎ.ಮುರುಳಿ, ಟಿ.ಜಿ.ನರೇಂದ್ರನಾಥ್ ಮತ್ತಿತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

