
CHITRADURGA NEWS | 16 JUNE 2026
ಚಿತ್ರದುರ್ಗ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ವಿವಿಧ ಯೋಗ ಸಂಸ್ಥೆಗಳು, ಸಂಘಟನೆಯವರು ಮತ್ತು ಸಾರ್ವಜನಿಕರು ಒಟ್ಟಾಗಿ ಕೈಜೋಡಿಸಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕರೆ ನೀಡಿದರು.

ಇದನ್ನೂ ಓದಿ: ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಬಾರಿ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ ಮೈದಾನದಲ್ಲಿ ಖಾಸಗಿ ಕಾರ್ಯಕ್ರಮದ ಪೆಂಡಾಲ್ ಹಾಕಿರುವುದರಿಂದ, ಈ ಬಾರಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು.
ಶಿಷ್ಟಚಾರದಂತೆ ಗಣ್ಯರಿಗೆ ಹಾಗೂ ಯೋಗ ಪ್ರದರ್ಶನಕ್ಕೆ ಅನುಕೂಲವಾಗುವಂತೆ ಸುಸಜ್ಜಿತ ವೇದಿಕೆ ಹಾಗೂ ಮ್ಯಾಟ್ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೂ ಮುನ್ನ ನಗರ ಸಭೆ ವತಿಯಿಂದ ಮೈದಾನ ಸ್ವಚ್ಛತೆಗೊಳಿಸಬೇಕು. ತೋಟಗಾರಿಕೆ ಇಲಾಖೆಯಿಂದ ವೇದಿಕೆಯನ್ನು ಅಲಂಕಾರಿ ಸಸಿಗಳ ಕುಂಡಗಳಿಂದ ಅಲಂಕರಿಸಬೇಕು. ಮುಂಜಾಗ್ರತೆಯಾಗಿ ಅಗತ್ಯ ವೈದ್ಯಕೀಯ ಸಿಬ್ಬಂದಿಯೊಂದಿಗೆ ಸುಸಜ್ಜಿತ ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳನ್ನು ಕಾರ್ಯಕ್ರಮದ ಸ್ಥಳದಲ್ಲಿ ನಿಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಯೋಗದ ಮಹತ್ವ ಸಾರಲು ಜಾಗೃತಿ ಜಾಥ:
ಅಂತರಾಷ್ಟ್ರಿಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಜನರಲ್ಲಿ ಯೋಗದ ಮಹತ್ವ ಸಾರಲು ಜೂನ್ 20 ಶನಿವಾರದಂದು ಬೃಹತ್ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಾಥಕ್ಕೆ ಚಾಲನೆ ನೀಡಲಾಗುವುದು.
ಇದನ್ನೂ ಓದಿ: ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD
ಜಿಲ್ಲೆಯ ಯೋಗ ಸಂಸ್ಥೆಗಳು, ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು ಹಾಗೂ ಚಿತ್ರದುರ್ಗ ನಗರದಲ್ಲಿನ ಎಲ್ಲಾ ಸರ್ಕಾರಿ ಕಚೇರಿ ಸಿಬ್ಬಂದಿ ಜಾಗೃತಿ ಜಾಥದಲ್ಲಿ ಪಾಲ್ಗೊಳ್ಳುವರು. ಓನಕೆ ಒಬವ್ವ ವೃತ್ತ, ಮದಕರಿ ನಾಯಕ ವೃತ್ತ, ಜಿಲ್ಲಾ ಆಸ್ಪತ್ರೆ, ಎಲ್.ಐ.ಸಿ ಕಚೇರಿ ಮೂಲಕ ನಗರದ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಾಥ ಸಂಪನ್ನಗೊಳ್ಳಲಿದೆ.
ಜೂನ್ 21 ರಂದು ವಿಜ್ಞಾನ ಕಾಲೇಜು ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಲಕ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಅಂದು ಬೆಳಿಗ್ಗೆ 7.00 ಗಂಟೆಯಿಂದ 7.45 ರವರೆಗೆ ಸಾವಿರಕ್ಕೂ ಅಧಿಕ ಯೋಗಾಸಕ್ತರು ಸಾಮೂಹಿಕ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ಎಸ್ ನಾಗಸಮುದ್ರ ಹೇಳಿದರು.
ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲು ಭರದ ಸಿದ್ಧತೆಗಳು ನಡೆಯುತ್ತಿದ್ದು, ಈಗಾಗಲೇ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಘೋಷವಾಕ್ಯ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬುದಾಗಿದೆ.
ಹಿರಿಯ ನಾಗರಿಕರಿಗೆ ಯೋಗ ತರಬೇತಿ ನೀಡುವ ಸಲುವಾಗಿ ವಿಶೇಷ ಆಪ್ ಸಿದ್ದಪಡಿಸಲಾಗಿದೆ. ಇದರೊಂದಿಗೆ ಆಯ್ಯುಷ್ ಇಲಾಖೆ ವತಿಯಿಂದ ಈಗಾಗಲೇ ಜಿಲ್ಲೆಯ ಪ್ರಮುಖ ಹೈಸ್ಕೂಲ್ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ಯೋಗಾಭ್ಯಾಸವನ್ನು ಮಾಡಿಸಲಾಗುತ್ತಿದೆ.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್.ರವಿಶಂಕರ್ ನಿಯುಕ್ತಿ
ಜೂನ್ ಮೊದಲ ವಾರದಿಂದಲೇ ಆರಂಭವಾಗಿರುವ ಈ ತರಬೇತಿಯು ಜೂನ್ 21ರವರೆಗೂ ನಿರಂತರವಾಗಿ ನಡೆಯಲಿದೆ. ಯೋಗ ಶಿಕ್ಷಣದ ಮಹತ್ವವನ್ನು ಅರಿತಿರುವ ಶಾಲೆ-ಕಾಲೇಜುಗಳ ಆಡಳಿತ ಮಂಡಳಿಯು, ಕೇವಲ ಜೂನ್ 21ರವರೆಗೆ ಮಾತ್ರವಲ್ಲದೆ ಮುಂದಿನ ದಿನಗಳಲ್ಲೂ ಈ ಯೋಗ ತರಬೇತಿಯನ್ನು ನಿರಂತರವಾಗಿ ಮುಂದುವರಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ಆಯುಷ್ ವೈದ್ಯಾಧಿಕಾರಿ ಡಾ.ನಾರದಮುನಿ.ಜಿ.ಬಿ ತಿಳಿಸಿದರು.
ಸಭೆಯಲ್ಲಿ ಜಿ.ಪಂ.ಉಪಕಾರ್ಯದರ್ಶಿ ಎಂ.ಬಾಬು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಕಾಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
