CHITRADURGA NEWS | 30 JUNE 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಸೇವಾಸಿಂಧು ಫೋರ್ಟಲ್ ಮೂಲಕ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಪಾಸಿನ ಮೊತ್ತ ಮರುಪಾವತಿ ಮಾಡಲು ಕ್ರಮ ಕೈಗೊಂಡಿದೆ.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆ | ಪ್ರತಿ ತಿಂಗಳ ಮೊದಲನೇ ಬುಧವಾರ ಮಕ್ಕಳ ಉಚಿತ ಹೃದಯ ತಪಾಸಣೆ
ರಾಜ್ಯ ಸರ್ಕಾರದ ಆದೇಶದನ್ವಯ, ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಪ್ರಯಾಣಿಸುವ ಶಾಲಾ-ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ, ಈಗಾಗಲೇ ದಿನಾಂಕ 29-05-2026 ರಿಂದ ಶುಲ್ಕ ಪಾವತಿಸಿ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಹಣವನ್ನು ಮರುಪಾವತಿ ಮಾಡಲು ಇಲಾಖೆ ಅನುಮೋದನೆ ನೀಡಿದೆ.
ಇದಕ್ಕಾಗಿ ವಿದ್ಯಾರ್ಥಿಗಳು ಸರ್ಕಾರದ ಸೇವಾಸಿಂಧು ಫೋರ್ಟಲ್ ಲಿಂಕ್ (https://sevasindhuservices.
ನಂತರ ಆಧಾರ್ ಆಧಾರಿತ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ತಮ್ಮ ಅಥವಾ ತಮ್ಮ ಪೋಷಕರ ಬ್ಯಾಂಕ್ ಖಾತೆಯ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು.
ಇದನ್ನೂ ಓದಿ: ಹವಾಮಾನ ಆಧಾರಿತ ಬೆಳೆ ವಿಮೆ | ನೋಂದಣಿಗೆ ಜುಲೈ 31 ಕೊನೆದಿನ
ಅರ್ಜಿ ಸಲ್ಲಿಸಿದ 7 ದಿನಗಳ ಒಳಗಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹಣ ಜಮೆಯಾಗಲಿದೆ ಹಾಗೂ ಈ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಸಂದೇಶ ಬರಲಿದೆ.
ಹಣವು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗುವುದರಿಂದ ವಿದ್ಯಾರ್ಥಿಗಳು ಈ ಸಂಬಂಧ ಯಾವುದೇ ಕೌಂಟರ್ಗಳಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ ಎಂದು ಕೆಎಸ್ಆರ್ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

