CHITRADURGA NEWS | 03 JULY 2026
ಚಿತ್ರದುರ್ಗ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್. ಅವರನ್ನು ನೇಮಕ ಮಾಡಿ ಹೊರಡಿಸಲಾಗಿದ್ದ ವರ್ಗಾವಣೆ ಆದೇಶಕ್ಕೆ ರಾಜ್ಯ ಸರ್ಕಾರ ತಡೆ ನೀಡಿದೆ.
ಇದನ್ನೂ ಓದಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವರ್ಗಾವಣೆ | ರಮ್ಯಾ ಎಸ್ ನೂತನ ಜಿಲ್ಲಾಧಿಕಾರಿ
ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮ್ಯಾ ಎಸ್ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿರುವ ವೆಂಕಟೇಶ್ ಟಿ. ಅವರ ಜಾಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿತ್ತು.
ಆದರೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಜುಲೈ 3ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ, ರಮ್ಯಾ ಅವರ ವರ್ಗಾವಣೆ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
