CHITRADURGA NEWS | 05 JULY 2026
ಚಿತ್ರದುರ್ಗ: ರಾಜ್ಯದಲ್ಲಿ ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಗೆ ಸರ್ಕಾರವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ರೂಪಾಯಿಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಇದನ್ನೂ ಓದಿ: ಈ ಜನರಿಗೆ ಮೂತ್ರಪಿಂಡದ ಕ್ಯಾನ್ಸರ್ ಬರುವ ಅಪಾಯ ಹೆಚ್ಚಂತೆ
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಕೃತಿ ವಿಕೋಪ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು.
ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಯ ಒಟ್ಟಾರೆ ಜವಾಬ್ದಾರಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೇಲಿರುತ್ತದೆ. ಜಿಲ್ಲಾಧಿಕಾರಿಗಳ ರೂ. 5 ಕೋಟಿ ಹಣವನ್ನು ಬರ ಮತ್ತು ಪ್ರಕೃತಿ ವಿಕೋಪದ ತುರ್ತು ಕಾರ್ಯಗಳಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು.
ಹೆಚ್ಚುವರಿ ಅನುದಾನದ ಅಗತ್ಯವಿದ್ದಲ್ಲಿ ತಕ್ಷಣವೇ ಪ್ರಸ್ತಾವನೆ ಸಲ್ಲಿಸಬೇಕು. ಅದಕ್ಕೆ ತಕ್ಷಣವೇ ಅನುಮೋದನೆ ನೀಡಲಾಗುವುದು. ಈ ಬಗ್ಗೆ ಯಾವುದೇ ಆತಂಕ ಬೇಡ. ಬರ ಪರಿಹಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಿ, ಶೀಘ್ರದಲ್ಲೇ ರಾಜ್ಯದ ಒಟ್ಟಾರೆ ವರದಿಯನ್ನು ಮುಖ್ಯಮಂತ್ರಿಗಳು ಹಾಗೂ ನಾವು ಸಲ್ಲಿಸಲಿದ್ದೇವೆ.
ಜಿಲ್ಲಾಧಿಕಾರಿ ಹಾಗೂ ಸಿಇಒ ಅವರೇ ಈ ಕಾರ್ಯದ ನೋಡಲ್ ಅಧಿಕಾರಿಗಳಾಗಿದ್ದು, ಅವರು ನೀಡುವ ಪ್ರತಿಯೊಂದು ಆದೇಶ ಹಾಗೂ ಸೂಚನೆಗಳಿಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸ್ಪಂದಿಸಬೇಕು.
ಇದನ್ನೂ ಓದಿ: ನಿಮ್ಮ ಕೂದಲು ಕಪ್ಪಾಗಿ ದಪ್ಪವಾಗಿ ಬೆಳೆಯಲು ಈ ಯೋಗಾಸನ ಮಾಡಿ
ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಯಾವುದೇ ಅಧಿಕಾರಿ ಬರ ಕೆಲಸದಿಂದ ನುಣುಚಿಕೊಳ್ಳುವಂತಿಲ್ಲ. ಇಲಾಖೆಯ ಅಧಿಕಾರಿಗಳು ಸಹಕಾರ ನೀಡದಿದ್ದರೆ ಅಥವಾ ನಿರ್ಲಕ್ಷ್ಯ ವಹಿಸಿದರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳೂವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಎಚ್ಚರಿಕೆ ನೀಡಿದರು.
ಸಭೆಯಲ್ಲಿ,ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಆಯುಕ್ತೆ ಹೊನ್ನಾಂಭ, ಸಂಸದರಾದ ಗೋವಿಂದ ಕಾರಜೋಳ, ಶಾಸಕ ಡಾ. ಎಂ. ಚಂದ್ರಪ್ಪ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಶಾಸಕ ಬಿ.ಜಿ. ಗೋವಿಂದಪ್ಪ, ಶಾಸಕ ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಪರಿಷತ್ ಸದಸ್ಯರಾದ ಶ್ರೀನಿವಾಸ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ರಾಜ್ಯ ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ಡಾ.ಯೋಗೇಶ್ ಬಾಬು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ಉಸ್ತವಾರಿ ಕಾರ್ಯದರ್ಶಿ ಆಮ್ಲಾನ್ ಅದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
