By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಇನ್ನಿಲ್ಲ
    3 hours ago
    ಮಾದಾರ ಚನ್ನಯ್ಯ ಸ್ವಾಮೀಜಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು
    ಸರ್ಕಾರದಿಂದ ನೀಡುವ ಶಿಕ್ಷಣ ಸೌಲಭ್ಯ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಮಾದಾರ ಚನ್ನಯ್ಯ ಸ್ವಾಮೀಜಿ
    3 hours ago
    SSLC, PUC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    SSLC, PUC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 
    3 hours ago
    ಟಿಇಟಿ ಪರೀಕ್ಷೆ ರದ್ದುಪಡಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಂಸದ ಗೋವಿಂದ ಕಾರಜೋಳಗೆ ಮನವಿ
    4 hours ago
    madara chanaya swamji
    ನಮ್ಮ ಜನ್ಮ ದಿನಾಚರಣೆ ಬೇಡ | ಮಠದ ವಾರ್ಷಿಕೋತ್ಸವ ಆಚರಿಸೋಣ | ಮಾದಾರ‌ ಚನ್ನಯ್ಯ ಶ್ರೀ
    8 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 months ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 days ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 12 | ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು, ದೂರ ಪ್ರಯಾಣದ ಸೂಚನೆ
    15 hours ago
    today bhavishya
    ದಿನ ಭವಿಷ್ಯ | ಜುಲೈ 11 | ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಜುಲೈ 10 | ಆತುರದ ನಿರ್ಧಾರ ಬೇಡ, ಶುಭ ಸುದ್ದಿ
    3 days ago
    today bhavishya
    ದಿನ ಭವಿಷ್ಯ | ಜುಲೈ 09 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಋಣಾತ್ಮಕ ವಾತಾವರಣ
    4 days ago
    today bhavishya
    ದಿನ ಭವಿಷ್ಯ | ಜುಲೈ 08 | ದೀರ್ಘಾವಧಿ ಸಾಲದ ಒತ್ತಡ, ಆರೋಗ್ಯದ ಬಗ್ಗೆ ಜಾಗೃತಿವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    1 day ago
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    1 week ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    2 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    Tip of the hair
    ಕೂದಲಿನ ತುದಿ ಕವಲೊಡೆಯುವುದನ್ನು ತಡೆಯಲು ಅಕ್ಕಿಯ ಜೊತೆ ಈ ಬೀಜವನ್ನು ಬೆರೆಸಿ ತಯಾರಿಸಿದ ಹೇರ್ ಟೋನರ್ ಬಳಸಿ
    14 hours ago
    Lychee fruit
    ಖಾಲಿ ಹೊಟ್ಟೆಯಲ್ಲಿ ಲಿಚಿ ತಿಂದರೆ ಏನಾಗುತ್ತದೆ ಗೊತ್ತಾ?
    15 hours ago
    kidney stone problems to eat banana
    ಕಿಡ್ನಿ ಕಲ್ಲಿನ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನುವುದು ಒಳ್ಳೆಯದೇ?
    2 days ago
    mango peel face packs for your glowing skin
    ನಿಮ್ಮ ಹೊಳೆಯುವ ಚರ್ಮಕ್ಕಾಗಿ ಮಾವಿನ ಸಿಪ್ಪೆಯ ಈ ಫೇಸ್ ಪ್ಯಾಕ್‌ಗಳನ್ನು ಹಚ್ಚಿ
    2 days ago
    thyroid
    ಕ್ಯಾನ್ಸರ್ ಥೈರಾಯ್ಡ್ ಗಂಟುಗಳ ಲಕ್ಷಣಗಳು ಯಾವುವು? ತಿಳಿಯಿರಿ
    3 days ago
Reading: ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲೆಯಲ್ಲಿ ಬರ ಅಧ್ಯಯನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲೆಯಲ್ಲಿ ಬರ ಅಧ್ಯಯನ 

News Desk Chitradurga News
Last updated: 11 July 2026 19:25
News Desk Chitradurga News
1 day ago
Share
SHARE

CHITRADURGA NEWS | 11 JULY 2026

ಚಿತ್ರದುರ್ಗ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆ, ಬಿಜೆಪಿ ರಾಜ್ಯ ಮತ್ತು ಜಿಲ್ಲಾ ರೈತ ಮೋರ್ಚಾದ ಜಂಟಿ ತಂಡವು ಜಿಲ್ಲೆಯ ಹಿರಿಯೂರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳ ಹಳ್ಳಿಗಳಿಗೆ ಭೇಟಿ ನೀಡಿ, ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…

ರಾಜ್ಯದ ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದ್ದು, ಬಿತ್ತನೆ ಕಾರ್ಯಗಳು ಸಮರ್ಪಕವಾಗಿ ನಡೆಯದೆ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. 

ರೈತ ಮೋರ್ಚಾದ ಪ್ರಮುಖರು, ಜಿಲ್ಲೆಯಲ್ಲಿ ಕೇವಲ ಶೇ. 6 ರಿಂದ 7 ರಷ್ಟು ಮಾತ್ರ ಬಿತ್ತನೆ ಕಾರ್ಯ ನಡೆದಿದೆ ಎಂದು ಸ್ಪಷ್ಟಪಡಿಸಿದರು. ಆದರೆ, ಅಧಿಕಾರಿಗಳು ಶೇ. 20 ರಷ್ಟು ಬಿತ್ತನೆಯಾಗಿದೆ ಎಂದು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇದು ಸರ್ಕಾರದ ಅಧಿಕಾರಿಗಳಿಂದ ಕೆಲಸ ಪ್ರಗತಿ ಸಾಧಿಸಲು ಯಾವುದೇ ಯೋಜನೆಗಳಿಲ್ಲದಿರುವುದನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು ಕಚೇರಿಗಳಲ್ಲೇ ಕುಳಿತು ವರದಿ ತಯಾರಿಸುತ್ತಿದ್ದಾರೆ ವಿನಃ ರೈತರ ಅಳಲನ್ನು ಕೇಳುತ್ತಿಲ್ಲ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: ಕಿಡ್ನಿ ಕಲ್ಲಿನ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನುವುದು ಒಳ್ಳೆಯದೇ?

ಕ್ಷೇತ್ರ ಭೇಟಿಯ ಪ್ರಮುಖ ಅಂಶಗಳು ಕಂಡು ಬಂದಿದ್ದು, ಇದರಲ್ಲಿ ಜಿಲ್ಲೆಯ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೆರೆಗಳು ಒಣಗುತ್ತಿವೆ. ಜನ ಜಾನುವಾರುಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈಗಾಗಲೇ ಬಿತ್ತನೆಯಾಗಿರುವ ಅಲ್ಪಸ್ವಲ್ಪ ಬೆಳೆಗಳು ಕೂಡ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. 

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರು ಜಿಲ್ಲೆಗೆ ಭೇಟಿ ನೀಡಿದ್ದರೂ, ಯಾವುದೇ ತಾಲೂಕುಗಳಿಗೆ ಭೇಟಿ ನೀಡಿ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿಲ್ಲ. ಕೇವಲ ಅಧಿಕಾರಿಗಳ ಸಭೆ ನಡೆಸಿ ಐದು ಕೋಟಿ ರೂಪಾಯಿ ಬಿಡುಗಡೆ ಮಾಡಿ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ. 

ಮೊಳಕಾಲ್ಮೂರು ತಾಲೂಕಿನ ಶಾಸಕರಾದ ಗೋಪಾಲಕೃಷ್ಣ ಅವರು ಒಮ್ಮೆಯೂ ಬರಪೀಡಿತ ಹಳ್ಳಿಗಳಿಗೆ ಭೇಟಿ ನೀಡಿಲ್ಲ ಅಥವಾ ಅಧಿಕಾರಿಗಳ ಸಭೆ ಕರೆದು ಸರ್ಕಾರಕ್ಕೆ ಒತ್ತಡ ಹೇರುವ ಪ್ರಯತ್ನ ಮಾಡಿಲ್ಲ. ರಾಜ್ಯದ ಕೃಷಿ ಸಚಿವರು ಮುಖ್ಯಮಂತ್ರಿಗಳಿಗೆ ಹೆದರಿಕೊಂಡು ಕೇವಲ ವರದಿ ನೀಡಲು ಸೀಮಿತವಾಗಿದ್ದಾರೆಯೇ ಹೊರತು, ಮುಂಗಾರು ಹಂಗಾಮಿನ ಬಿತ್ತನೆ ಬೀಜ ಮತ್ತು ಗೊಬ್ಬರ ನಿರ್ವಹಣೆಯ ಬಗ್ಗೆ ಯಾವುದೇ ಸಾಮಾನ್ಯ ಜ್ಞಾನ ಹೊಂದಿಲ್ಲ ಎಂದರು. 

ಇದನ್ನೂ ಓದಿ: ನವೋದಯ : 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

ರಾಜ್ಯದಲ್ಲಿ ಈಗಾಗಲೇ ಮೂರು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಸರ್ಕಾರದ ಬೇಜವಾಬ್ದಾರಿತನ ಮುಂದುವರಿದರೆ ಈ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. 

ರೈತ ಮೋರ್ಚಾ ವತಿಯಿಂದ ಮೊದಲ ಹಂತವಾಗಿ ಚಿತ್ರದುರ್ಗ ಸೇರಿದಂತೆ ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ವರದಿ ಸಿದ್ಧಪಡಿಸಲಾಗುತ್ತಿದೆ. ಮುಂದಿನ ಎರಡು ವಾರಗಳಲ್ಲಿ ಸಂಪೂರ್ಣ ವರದಿಯನ್ನು ಸಿದ್ಧಪಡಿಸಿ ರಾಜ್ಯಪಾಲರಿಗೆ ಸಲ್ಲಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ, ಚಳ್ಳಕೆರೆ ತಾಲ್ಲೂಕಿನ ಭುಟ್ಟಟ್ಮಿ ಸುತ್ತಲಿನ ಗ್ರಾಮ ಓಬಣ್ಣರವರ ಮನೆಗೆ ಭೇಟಿ ಹಾಗೂ ಮೊಳಕಾಲ್ಮೂರಿನ ಕಟ್ಟನಾಯಕನ ಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ರೈತರನ್ನು ಮಾತನಾಡಿಸಿದರು.

ಇದನ್ನೂ ಓದಿ: ತೋಟಗಾರಿಕೆ ಬೆಳೆ | ವಿಮಾ ನೋಂದಣಿ ಪ್ರಕ್ರಿಯೆ ಪ್ರಾರಂಭ 

ಈ ವೇಳೆ ಬಿಜೆಪಿ ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್, ಬಿಜೆಪಿ ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜನ್, ಕಾರ್ಯದರ್ಶಿ ರಾಜೇಶ್ ಆರ್ ಬುರುಡೆಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ವೆಂಕಟೇಶ್ ಯಾದವ್, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್, ವಕ್ತಾರ ನಾಗರಾಜ್ ಬೇದ್ರೇ, ಹೂಸದುರ್ಗ ತಾಲ್ಲೂಕು ರೈತ ಮೋರ್ಚಾದ ಅಧ್ಯಕ್ಷ ಮನುಕುಮಾರ್, ಕಾರ್ಯದರ್ಶಿ ಈಶ್ವರ್, ಪ್ರಧಾನ ಕಾರ್ಯದರ್ಶಿ ರವಿಕಿರಣ ಪಾಟೀಲ್, ಹಿರಿಯೂರು ತಾಲ್ಲೂಕು ರೈತ ಮೋರ್ಚಾದ ಅಧ್ಯಕ್ಷ ಮನೋಹರ್, ಜಿಲ್ಲಾ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕು ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJP Raitha Morcha teamChitradurgaChitradurga newsdrought situationಚಿತ್ರದುರ್ಗಚಿತ್ರದುರ್ಗ ನ್ಯೂಸ್ಬರ ಪರಿಸ್ಥಿತಿಬಿಜೆಪಿ ರೈತ ಮೋರ್ಚಾ ತಂಡ
Share This Article
Facebook Email Print
Previous Article ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
Next Article ಯೋಗೀಶ್ ಸಹ್ಯಾದ್ರಿ ಚಿತ್ರದುರ್ಗ ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಯೋಗೀಶ್ ಸಹ್ಯಾದ್ರಿ | ನಾಳೆ ಪದಗ್ರಹಣ
Leave a Comment

Leave a Reply Cancel reply

Your email address will not be published. Required fields are marked *

ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಇನ್ನಿಲ್ಲ
ನಿಧನವಾರ್ತೆ
ಮಾದಾರ ಚನ್ನಯ್ಯ ಸ್ವಾಮೀಜಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು
ಸರ್ಕಾರದಿಂದ ನೀಡುವ ಶಿಕ್ಷಣ ಸೌಲಭ್ಯ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಮಾದಾರ ಚನ್ನಯ್ಯ ಸ್ವಾಮೀಜಿ
ಮುಖ್ಯ ಸುದ್ದಿ
SSLC, PUC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
SSLC, PUC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 
ಮುಖ್ಯ ಸುದ್ದಿ
ಟಿಇಟಿ ಪರೀಕ್ಷೆ ರದ್ದುಪಡಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಂಸದ ಗೋವಿಂದ ಕಾರಜೋಳಗೆ ಮನವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up