
CHITRADURGA NEWS | 11 JULY 2026
ಹೊಳಲ್ಕೆರೆ: ಚಿತ್ರದುರ್ಗದಲ್ಲಿ ಜು.19 ರಂದು ನಡೆಯುವ ರಾಷ್ಟ್ರೀಯ ಭೋವಿ ಜನೋತ್ಸವ ಆಂದೋಲನ, ಹಬ್ಬದ ರೀತಿಯಲ್ಲಿ ಆಚರಿಸಿ ಗುರುಗಳಿಗೆ ಗೌರವ ತರೋಣ, ಅದಕ್ಕಾಗಿ ಭೋವಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಸಮಾಜದವರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: ಚಿತ್ರದುರ್ಗ ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಯೋಗೀಶ್ ಸಹ್ಯಾದ್ರಿ | ನಾಳೆ ಪದಗ್ರಹಣ
ಹೊಳಲ್ಕೆರೆ ಪ್ರವಾಸಿ ಮಂದಿರದಲ್ಲಿ ಶನಿವಾರ ಸಮಾಜದ ಮುಖಂಡರುಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಶಾಸಕರು, ನಮ್ಮ ಸಮಾಜ ಒಗ್ಗಟ್ಟಾಗಿ ಶಕ್ತಿ ಪ್ರದರ್ಶಿಸುವುದಕ್ಕಾಗಿ ಪ್ರತಿ ವರ್ಷವೂ ಗುರುಗಳು ಭೋವಿ ಜನನೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ನೆಪದಲ್ಲಾದರೂ ಭೋವಿ ಜನಾಂಗ ಸಂಘಟಿತರಾಗಬೇಕಿದೆ.
ರಾಜಕಾರಣಿಗಳನ್ನು ಕರೆಸಿ ನಮ್ಮ ಸಮಾಜದ ಸಮಸ್ಯೆಗಳನ್ನು ಗಮನಕ್ಕೆ ತರುವ ಮೂಲಕ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸುವುದು ಗುರುಗಳ ಉದ್ದೇಶ ಎಂದು ಹೇಳಿದರು.
ಸಿರಿಗೆರೆಯ ತರಳಬಾಳು ಜಗದ್ಗುರುಗಳು ಪ್ರತಿ ವರ್ಷವೂ ನಡೆಸುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಸಾಗರೋಪಾದಿಯಲ್ಲಿ ಹರಿದು ಬರುತ್ತಾರೆ. ಅದೇ ರೀತಿ ನಮ್ಮ ಸಮಾಜದ ಗುರುಗಳು ಪ್ರತಿ ವರ್ಷ ಆಚರಿಸುವ ಭೋವಿ ಜನೋತ್ಸವ ಐತಿಹಾಸಿಕ ಸಮ್ಮೇಳನವಾಗಬೇಕು. ಭೋವಿ ಸಮಾಜ ಒಂದಾಗಲು ಇದೊಂದು ದಾರಿ.
ಇದನ್ನೂ ಓದಿ: ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲೆಯಲ್ಲಿ ಬರ ಅಧ್ಯಯನ
ತಮಿಳುನಾಡಿನಿಂದ ವಡ್ಡರು ಬಂದು ನಮ್ಮ ರಾಜ್ಯದಲ್ಲಿ ಕನ್ನಂಬಾಡಿ ಕಟ್ಟೆ ಕಟ್ಟಿದ್ದರ ಫಲವಾಗಿ 1944-45 ರಲ್ಲಿ ಅಂದಿನ ಮೈಸೂರು ಮಹಾರಾಜರು ನಮ್ಮ ಸಮಾಜದವರನ್ನು ಗುರುತಿಸಿ, ಸನ್ಮಾನಿಸಿ, ಮೀಸಲಾತಿಯನ್ನು ಕೊಟ್ಟ ಕಾರಣದಿಂದ ನಾವುಗಳು ಈಗ ಪರಿಶಿಷ್ಟ ಜಾತಿಯಲ್ಲಿದ್ದೇವೆ.
ಮೊದಲು ಪಟ್ಟಿ ಸಿದ್ದಪಡಿಸಿ ಯಾವ್ಯಾವ ಊರಿಂದ ಎಷ್ಟು ಜನರನ್ನು ಜನೋತ್ಸವಕ್ಕೆ ಕರೆತರುತ್ತೇವೆಂದು ಹೇಳಿದರೆ ಬಸ್‍ಗಳ ವ್ಯವಸ್ಥೆ ಕಲ್ಪಿಸುವುದಾಗಿ ಶಾಸಕ ಡಾ.ಎಂ.ಚಂದ್ರಪ್ಪ ಮುಖಂಡರುಗಳಿಗೆ ಭರವಸೆ ನೀಡಿದರು.
ಮೀಸಲಾತಿಯಲ್ಲಿ ನಮಗೆ ಅನ್ಯಾಯವಾಗಿದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಇದೊಂದು ಅವಕಾಶ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಭೋವಿ ಜನೋತ್ಸವಕ್ಕೆ ಬರಲು ಒಪ್ಪಿಕೊಂಡಿದ್ದಾರೆ.
ಗುರುಗಳು ಅಹವಾಲುಗಳನ್ನು ಸಲ್ಲಿಸಿ ಭೋವಿ ಜನಾಂಗಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯ ಕೊಡಿಸುವುದು ಅವರ ಉದ್ದೇಶ. ಹಾಗಾಗಿ ಜನಾಂಗದವರು ಸ್ವಯಂ ಆಗಿ ಜನೋತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
ಭೋವಿ ಸಮಾಜದ ಅಧ್ಯಕ್ಷ ಕೃಷ್ಣಪ್ಪ, ಗೌರವಾಧ್ಯಕ್ಷ ತಿಪ್ಪೇಸ್ವಾಮಿ, ಹನುಮಂತಪ್ಪ, ಡಿ.ಸಿ.ಮೋಹನ್, ಮಂಜಣ್ಣ, ಅಣ್ಣಪ್ಪ, ಅಂಜನಿ, ನಟೇಶ್, ತಿಪ್ಪೇಸ್ವಾಮಿ, ಲಕ್ಷ್ಮಣ್, ನಾಗರಾಜ್, ದೇವಣ್ಣ ಹಾಗೂ ಭೋವಿ ಸಮಾಜದ ಮುಖಂಡರುಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

