
CHITRADURGA NEWS | 13 JULY 2026
ಚಿತ್ರದುರ್ಗ: ಸಾಂಪ್ರದಾಯಿಕ ಕಸುಬುಗಳಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದ ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ‘ಯಡಿ ನೋಂದಾಯಿತ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸಲು ಜಿಲ್ಲೆಯಾದ್ಯಂತ ವಿಶೇಷ ಸಾಲ ಸಂಪರ್ಕ ಶಿಬಿರ ಆಯೋಜಿಸಲಾಗಿದೆ.
ಇದನ್ನೂ ಓದಿ: ಡಿವೈಡರ್‌ಗೆ ಅಪ್ಪಳಿಸಿದ ಬಸ್ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆ, ಹಣಕಾಸು ಸಚಿವಾಲಯದ ನಿರ್ದೇಶನದಂತೆ, ಚಿತ್ರದುರ್ಗ ಜಿಲ್ಲೆಯ ಒಟ್ಟು 10 ಸ್ಥಳಗಳಲ್ಲಿ ಜುಲೈ 14 ರಿಂದ ಜುಲೈ 24 ರವರೆಗೆ ಈ ಶಿಬಿರಗಳು ನಡೆಯಲಿವೆ.
ಪ್ರಧಾನಮಂತ್ರಿಯವರಿಂದ 2023ರ ಸೆಪ್ಟೆಂಬರ್ 17 ರಂದು ಉದ್ಘಾಟನೆಗೊಂಡ ಈ ಯೋಜನೆಯಡಿ ಜಿಲ್ಲೆಯ ಹಲವು ಕುಶಲಕರ್ಮಿಗಳು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ. ಆದರೆ, ಬ್ಯಾಂಕ್ ಶಾಖೆಗಳು ಹಲವು ಬಾರಿ ಪ್ರಯತ್ನಿಸಿದರೂ ತಾಂತ್ರಿಕ ಕಾರಣಗಳಿಂದ ಕೆಲವು ಫಲಾನುಭವಿಗಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ.
ಈ ಸಂವಹನ ಅಂತರವನ್ನು ನಿವಾರಿಸಿ, ಅರ್ಹರಿಗೆ ಸಕಾಲದಲ್ಲಿ ಸಾಲ ಒದೊಗಿಸಲು ದೇಶದ ಆಯ್ದ 50 ಜಿಲ್ಲೆಗಳಲ್ಲಿ ಈ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕರ್ನಾಟಕದಲ್ಲಿ ರಾಜ್ಯ ಮಟ್ಟದ ಬ್ಯಾಂಕರ್‍ಗಳ ಸಮಿತಿ ಹಾಗೂ ಲೀಡ್ ಬ್ಯಾಂಕ್‍ಗಳ ಸಹಯೋಗದಲ್ಲಿ ಶಿಬಿರಗಳು ನಡೆಯುತ್ತಿವೆ.
ಇದನ್ನೂ ಓದಿ: ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ
ಶಿಬಿರಗಳ ವಿವರ ಇಂತಿದೆ. ಜುಲೈ 14ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಚೇರಿ, ಜುಲೈ 16ರಂದು ಬೆಳಿಗ್ಗೆ 11ಕ್ಕೆ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಚೇರಿ, ಮಧ್ಯಾಹ್ನ 3ಕ್ಕೆ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ಕಚೇರಿ, ಜುಲೈ 17ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿ, ಜುಲೈ 18ರಂದು ಬೆಳಿಗ್ಗೆ 11ಕ್ಕೆ ಹೊಸದುರ್ಗ ತಾಲ್ಲೂಕು ಪಂಚಾಯಿತಿ ಕಚೇರಿ, ಮಧ್ಯಾಹ್ನ 3ಕ್ಕೆ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಕಚೇರಿ, ಜುಲೈ 20ರಂದು ಬೆಳಿಗ್ಗೆ 11ಕ್ಕೆ ಚಳ್ಳಕೆರೆ ಶಾಖೆ ಕರ್ನಾಟಕ ಗ್ರಾಮೀಣ ಬ್ಯಾಂಕ್, ಜುಲೈ 21ರಂದು ಬೆಳಿಗ್ಗೆ 11ಕ್ಕೆ ಹಿರಿಯೂರು ತಾಲ್ಲೂಕು ಪಂಚಾಯಿತಿ ಕಚೇರಿ, ಜುಲೈ 23ರಂದು ಹೊಸದುರ್ಗ ಶಾಖೆ ಕರ್ನಾಟಕ ಗ್ರಾಮೀಣ ಬ್ಯಾಂಕ್, ಜುಲೈ 24ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಲೀಡ್ ಬ್ಯಾಂಕ್ ಕಚೇರಿಯಲ್ಲಿ ಶಿಬಿರ ನಡೆಯಲಿದೆ.
ಈ ಶಿಬಿರಗಳಲ್ಲಿ ಸ್ಥಳದಲ್ಲೇ ಸಾಲದ ಅರ್ಜಿಗಳ ಸ್ವೀಕಾರ ಮತ್ತು ದಾಖಲಾತಿಗಳ ಪರಿಶೀಲನೆ ನಡೆಯಲಿದೆ. ಯೋಜನೆಯಡಿ ಸಿಗುವ ರೂ.1 ಲಕ್ಷದಿಂದ ರೂ.2 ಲಕ್ಷದವರೆಗೆ ಸಾಲ ಸೌಲಭ್ಯ ಹಾಗೂ ರಿಯಾಯಿತಿ ಬಡ್ಡಿ ದರದ ಮಾಹಿತಿಯನ್ನು ನೀಡಲಾಗುವುದು. ಅರ್ಜಿ ಭರ್ತಿ ಮಾಡಲು ಬ್ಯಾಂಕ್ ಅಧಿಕಾರಿಗಳಿಂದ ನೇರ ನೆರವು ಸಿಗಲಿದ್ದು, ಎಲ್ಲಾ ಪ್ರಮುಖ ಬ್ಯಾಂಕ್‍ಗಳ ಪ್ರತಿನಿಧಿಗಳು ಒಂದೇ ಸೂರಿನಡಿ ಲಭ್ಯವಿರಲಿದ್ದಾರೆ.
ಜಿಲ್ಲೆಯ ಎಲ್ಲಾ ನೋಂದಾಯಿತ ಪಿಎಂ ವಿಶ್ವಕರ್ಮ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಮತ್ತು ಪಿಎಂ ವಿಶ್ವಕರ್ಮ ಐಡಿಯೊಂದಿಗೆ ತಮ್ಮ ತಾಲೂಕಿನ ಶಿಬಿರಕ್ಕೆ ಕಡ್ಡಾಯವಾಗಿ ಹಾಜರಾಗಲು ಕೋರಲಾಗಿದೆ.
ಇದನ್ನೂ ಓದಿ: ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್ ಪ್ರಸಾದ್ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗದ ಲೀಡ್ ಬ್ಯಾಂಕ್ ಕಚೇರಿ ದೂರವಾಣಿ ಸಂಖ್ಯೆ 08194-222014 ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ್ ಮತ್ತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಲೀಡ್ ಬ್ಯಾಂಕ್) ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

