CHITRADURGA NEWS | 17 JULY 2026
ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾಲಯವು 2025-26ನೇ ಸಾಲಿನ ಅಂತಿಮ ವರ್ಷದ ಬಿ.ಎ., ಬಿ.ಕಾಂ. ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ನಗರದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯಕ್ಕೆ ಪ್ರತಿ ಬಾರಿಯಂತೆ ಈ ವರ್ಷವೂ ಬಿ.ಎ. ವಿಭಾಗದಲ್ಲಿ ಶೇ.95% ಹಾಗೂ ಬಿ.ಕಾಂ. ವಿಭಾಗದಲ್ಲಿ 87.5% ಅತ್ಯುತ್ತಮವಾದ ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರಾದ ಡಾ.ಎಲ್.ಈಶ್ವರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರತಿಭಾ ಪುರಸ್ಕಾರ : ಕುಂಚಿಗ ವೀರಶೈವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಬಿ.ಎ. ಪದವಿ ಕನ್ನಡ ಐಚ್ಛಿಕ ವಿಷಯದಲ್ಲಿ ಹೆಚ್.ಭವ್ಯ 95%, ಟಿ.ಹೇಮಾವತಿ 93.42% ಶ್ರೇಣಿಯಲ್ಲಿ ಉತ್ತೀರ್ಣರಾದರೆ. ಬಿ.ಕಾಂ. ಪದವಿಯಲ್ಲಿ ಶಮಬಾನು 93%, ರುಖಿಯಾ ಅಜುಂ 91% ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಕಾಲೇಜಿಗೂ ಮತ್ತು ಶ್ರೀ ವಿದ್ಯಾಪೀಠಕ್ಕೆ ಹೆಮ್ಮೆ ತಂದಿದ್ದಾರೆ.
ಎಸ್.ಜೆ.ಎಂ. ಅಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ. ಸಿ. ಕಳಸದ, ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿ, ಡಾ.ಪಿ.ಎಸ್. ಶಂಕರ್, ಎಸ್.ಎನ್. ಚಂದ್ರಶೇಖರ್, ಕಾಲೇಜಿನ ಪ್ರಾಂಶುಪಾಲರಾದ ಡಾ.ಎಲ್. ಈಶ್ವರಪ್ಪ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಶುಭಹಾರೈಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

