
CHITRADURGA NEWS | 18 JULY 2026
ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಾಣದ ಹಂಗು ತೊರೆದು ಇತರರ ಪ್ರಾಣ ರಕ್ಷಣೆ ಮಾಡಿದ 6 ರಿಂದ 18 ವರ್ಷದೊಳಗಿನ ಸಾಹಸಿ ಮಕ್ಕಳಿಗೆ ‘ಹೊಯ್ಸಳ’ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಕೆಳದ ಚನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ
ಶೌರ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಮಕ್ಕಳು ತೋರಿದ ಸಾಹಸ ಘಟನೆಯು ದಿನಾಂಕ 01.08.2025 ರಿಂದ 31.07.2026 ರೊಳಗಿನ ಅವಧಿಯಲ್ಲಿ ನಡೆದಿರಬೇಕಾದುದು ಕಡ್ಡಾಯವಾಗಿದೆ. ಪ್ರಶಸ್ತಿಗೆ ಆಯ್ಕೆಯಾಗುವ ಶೌರ್ಯಶಾಲಿ ಮಕ್ಕಳಿಗೆ ತಲಾ ರೂ. 10,000/- ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ರೂ. 25,000/- ಗಳ ನಗದು ಬಹುಮಾನ, ಸಂಸ್ಥೆಗಳಿಗೆ ತಲಾ ರೂ. 1,00,000/- ನಗದು ಬಹುಮಾನ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಅರ್ಜಿ ನಮೂನೆಗಳನ್ನು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಂದ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ
ಆಸಕ್ತರು ಹಾಗೂ ಅರ್ಹರು ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯವಿರುವ ಎಲ್ಲಾ ಪೂರಕ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಗೆ ಆಗಸ್ಟ್ 20 ರ ಒಳಗಾಗಿ ಸಲ್ಲಿಸಬೇಕು. ವಿಶೇಷವಾಗಿ, ಪ್ರಶಸ್ತಿಗೆ ಸಲ್ಲಿಸುವ ಎಲ್ಲಾ ಅರ್ಜಿಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿಯೇ ಭರ್ತಿ ಮಾಡಬೇಕು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

