
CHITRADURGA NEWS | 19 JULY 2026
ಚಿತ್ರದುರ್ಗ: ತಾಲೂಕಿನಲ್ಲಿ ಜುಲೈ ತಿಂಗಳ ಮುಗಿಯುತ್ತಾ ಬಂದರು ಮುಂಗಾರು ಮಳೆ ಬಂದಿರುವುದಿಲ್ಲ. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ರಮವನ್ನು ಜರೂರಾಗಿ ಮಾಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಕೆ.ಎಸ್.ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತ ಸಂಘ ಮನವಿ ಮಾಡಿದರು.
ಇದನ್ನೂ ಓದಿ: ಗಾಣಿಗ ಸಮಾಜದ ಬ್ಯಾಂಕ್, ಸಮುದಾಯ ಭವನಕ್ಕೆ ಲಕ್ಷ್ಮಣ ಸವದಿ ನೆರವಿನ ಭರವಸೆ
ನಗರದಲ್ಲಿ ಶಾಸಕರನ್ನು ಭೇಟಿಯಾದ ರೈತ ಮುಖಂಡರು, ರೈತರು ಮಳೆ ಇಲ್ಲದೆ ಇದುವರೆಗೂ ಬಿತ್ತನೆ ಮಾಡಿಲ್ಲ, ಹಾಗೂ ಕೊಳವೆಬಾವಿ ನಂಬಿಕೊಂಡು ಅಡಿಕೆ, ಹೂ, ಹಣ್ಣು, ತರಕಾರಿಗಳನ್ನು ಹಾಕಿರುತ್ತಾರೆ. ಇದುವರೆಗೂ ಮಳೆ ಬಾರದ ಕಾರಣ ಕೊಳವೆಬಾವಿ ಬತ್ತಿ ಹೋಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ.
ಆದ್ದರಿಂದ ತಾವುಗಳು ಕೂಡಲೇ ಸರ್ಕಾರದ ಸಂಬಂಧಪಟ್ಟ ಇಲಾಖೆ ಸಚಿವರನ್ನು ಸಂಪರ್ಕಿಸಿ ಮೋಡ ಬಿತ್ತನೆ ಕಾರ್ಯಕ್ರಮ ಮಾಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಚಿತ್ರದುರ್ಗ ಜಿಲ್ಲೆ 3 ತಾಲ್ಲೂಕಿನ ಭದ್ರಾ ಮೇಲ್ದಂಡೆ ಯೋಜನೆಯ ಹುಣಸೆಕಟ್ಟೆ ಹಾಗೂ ಕುರುಮರಡಿಕೆರೆ ಕೆರೆಯನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಸೇರಿಸಿ, ಕೆರೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಬರ ನಿರ್ವಹಣೆಗೆ ಸಜ್ಜಾಗಿ | ಡಿಸಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಜಿಲ್ಲಾಧ್ಯಕ್ಷ ಧನಂಜಯ, ಬಸ್ತಿಹಳ್ಳಿ ಸುರೇಶ್ ಬಾಬು, ಕರಿಬಸವಯ್ಯ, ಬಸವರಾಜು, ಮಂಜುನಾಥ್, ಸತ್ಯಪ್ಪ, ಧರಣೇಂದ್ರ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ತಿಪ್ಪೇಸ್ವಾಮಿ, ಪಾಪಯ್ಯ ಬಚ್ಚಬೋರನಹಟ್ಟಿ ರಂಗೇಗೌಡ, ರಾಜಪ್ಪ ಕಿರಣ್ ಕುಮಾರ್ ಸೇತರಿದಂತೆ ಇತರರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

