
CHITRADURGA NEWS | 20 JULY 2026
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಪ್ಯಾಕೇಜ್-1ಕ್ಕೆ ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ನೀಡಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಇದನ್ನೂ ಓದಿ: ಅಪರೂಪಕ್ಕೆ ಸುರಿದ ಹದವಾದ ಮಳೆ | ಬಾಡಿ ಹೋಗಿದ್ದ ಬೆಳೆಗಳಿಗೆ ಗುಟುಕು ನೀರು
ಭದ್ರಾ ಮೇಲ್ದಂಡೆ ಯೋಜನೆಯನ್ನು ಎರಡು ಪ್ಯಾಕೇಜ್‌ಗಳನ್ನಾಗಿ ವಿಂಗಡಣೆ ಮಾಡಲಾಗಿದ್ದು, ಮೊದಲ ಪ್ಯಾಕೇಜ್‌ನಲ್ಲಿ ತುಂಗಾ ಜಲಾಶಯದಿಂದ 17.54 ಟಿ.ಎಂ.ಸಿ. ನೀರೆತ್ತಿ ಭದ್ರಾ ಜಲಾಶಯಕ್ಕೆ ತುಂಬಿಸುವುದು, ಎರಡನೇ ಪ್ಯಾಕೇಜ್‌ನಲ್ಲಿ ಭದ್ರಾ ಜಲಾಶಯದಿಂದ 2,25,515 ಹೆಕ್ಟೇರ್ ಪ್ರದೇಶಕ್ಕೆ ಭದ್ರಾ ಜಲಾಶಯದಿಂದ ನೀರು ಹರಿಸುವುದು ಎಂದು ಎರಡು ಪ್ಯಾಕೇಜ್‌ಗಳಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು.
1ನೇ ಪ್ಯಾಕೇಜ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಕಣಗಲಕೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಕಸಬಾ ಹೋಬಳಿಯ ಕೆ.ಕನಬೂರು ಹಾಗೂ ಮುತ್ತಿನಕೊಪ್ಪ ಗ್ರಾಮಗಳ ಸರ್ವೆ ನಂಬರುಗಳಲ್ಲಿ ಸುಮಾರು 7.53 ಹೆಕ್ಟೇರ್ ಅರಣ್ಯ ಭೂಮಿಯಲ್ಲಿ 220 ಕೆವಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಾಣ ಮಾಡಲು ಅರಣ್ಯ ಇಲಾಖೆಯಿಂದ ಅನುಮತಿ ಕೋರಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಗೆ ಪ್ರಸ್ಥಾವನೆ ಸಲ್ಲಿಸಲಾಗಿತ್ತು.
ಸದರಿ ಪ್ರಸ್ಥಾವನೆಗೆ ಮಾನ್ಯ ಸಂಸದರಾದ ಗೋವಿಂದ ಎಂ ಕಾರಜೋಳ್‌ರವರು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರಾದ ಭೂಪೇಂದ್ರ ಯಾದವ್‌ರವರಿಗೆ ಸತತ ಒತ್ತಡ ಹೇರಿದ್ದರ ಪರಿಣಾಮವಾಗಿ ದಿನಾಂಕ 10.07.2026 ರಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅಂತಿಮವಾಗಿ 7.53 ಎಕರೆ ಅರಣ್ಯ ಪ್ರದೇಶದಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ ನೀಡಿದೆ.
ಇದನ್ನೂ ಓದಿ: ಬರ ನಿರ್ವಹಣೆಗೆ ಸಜ್ಜಾಗಿ | ಡಿಸಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಪ್ರಾಥಮಿಕ ಬಳಕೆದಾರ ಸಂಸ್ಥೆಯಾದ ಕರ್ನಾಟಕ ನೀರಾವರಿ ನಿಗಮವು ಪಲ್ಲಟಗೊಳಿಸಲಾದ ಅರಣ್ಯ ಭೂಮಿಯಲ್ಲಿ ಕನಿಷ್ಟ ಸಂಖ್ಯೆಯ ಮರಗಳನ್ನು ಮಾತ್ರ ಕ್ತತರಿಸಬೇಕು, ಕೆಲಸದ ಅನುಷ್ಟಾನಕ್ಕಾಗಿ ಸಾಮಗ್ರಿಗಳನ್ನು ಸಾಗಿಸಲು ಅರಣ್ಯ ಪ್ರದೇಶದ ಒಳಗೆ ಯಾವುದೇ ಹೆಚ್ಚುವರಿ ಅಥವಾ ಹೊಸ ರಸ್ತೆ ಮಾರ್ಗಗಳನ್ನು ನಿರ್ಮಿಸಬಾರದು.
ಅರಣ್ಯ ಭೂಮಿಯನ್ನು ಯೋಜನೆಯ ಪ್ರಸ್ತಾವನೆಯಲ್ಲಿ ನಿರ್ದಿಷ್ಟಪಡಿಸಿದ ಉದ್ದೇಶವನ್ನು ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸಬಾರದು. ಯೋಜನೆಗೆ ಬಳಸಲಾದ ಒಟ್ಟು ಅರಣ್ಯ ಪ್ರದೇಶವು 7.53 ಹೆಕ್ಟೇರ್ ಪ್ರದೇಶವನ್ನು ಮೀರಬಾರದು ಎನ್ನುವ ನಿಬಂಧನೆಯನ್ನು ಸೇರಿ ಹಲವು ಷರತ್ತುಗಳನ್ನು ಕೇಂದ್ರ ಸರ್ಕಾರ ವಿಧಿಸಿ ತಾತ್ವಿಕ ಅನುಮೋದನೆ ನೀಡಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

