CHITRADURGA NEWS | 25 JULY 2026
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ವಿವಾಹವಾಗಿ ಇಚ್ಚೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ್ದ ಆಪಾದಿತನಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ: ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ 27 ವರ್ಷದ ಆರೋಪಿ ವಸಂತ ಕುಮಾರ ಎಂಬಾತ ಜುಲೈ 2020 ರಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬಲವಂತವಾಗಿ ಅಪಹರಣ ಮಾಡಿಕೊಂಡು ಹೋಗಿ ಬಾಲ್ಯವಿವಾಹ ಹಾಗೂ ಅತ್ಯಾಚಾರ ಮಾಡಿರುವ ಬಗ್ಗೆ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಇನ್ಸ್ಪೆಕ್ಟರ್ ಪಿ.ಪ್ರಸಾದ್ ಆರೋಪಿ ವಿರುದ್ಧ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಎರಡನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್ ಅವರು ವಿಚಾರಣೆ ನಡೆಸಿ ಆರೋಪಿಗೆ ಭಾರತೀಯ ದಂಡ ಸಂಹಿತೆ, ಪೋಕ್ಸೊ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಗಳ ಅಡಿಯಲ್ಲಿ 20 ವರ್ಷ ಕಠಿಣ ಸಜೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಇದನ್ನೂ ಓದಿ: ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ ಎಂ.ಚಂದ್ರಪ್ಪ
ಪ್ರಕರಣದಲ್ಲಿ ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ(ಪೋಕ್ಸೊ) ಎಚ್.ಆರ್.ಜಗದೀಶ್ ವಾದ ಮಂಡಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

