CHITRADURGA NEWS | 25 JULY 2026
ಚಿತ್ರದುರ್ಗ: ಅಭಿವೃದ್ದಿಯ ಹರಿಕಾರ, ಮೂರನೆ ಬಾರಿಗೆ ಸತತವಾಗಿ ಗೆಲುವು ಸಾಧಿಸಿರುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಟಿ.ರಘುಮೂರ್ತಿ ಯುವ ಸೇನೆಯಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಇದನ್ನೂ ಓದಿ: ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಟಿ.ರಘುಮೂರ್ತಿರವರ ಫೋಟೋವನ್ನು ಬರಗೇರಮ್ಮನವರ ಪಾದದಲ್ಲಿರಿಸಿ ಪೂಜೆ ಸಲ್ಲಿಸಿದರು.
ಈ ವೇಳೆ ರಘುಮೂರ್ತಿ ಯುವ ಸೇನೆ ರಾಜ್ಯಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಯಾಗಬೇಕಾದರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು.
ಚಳ್ಳಕೆರೆಯಲ್ಲಿ ರಸ್ತೆ, ಶಿಕ್ಷಣ ಸಂಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಜನರಿಗೆ ತಲುಪಿಸಿ ರಾಜ್ಯದ ಗಮನ ಸೆಳೆದಿರುವ ಟಿ.ರಘುಮೂರ್ತಿರವರಿಗೆ ಅಭಿವೃದ್ದಿಯ ದೂರದೃಷ್ಟಿಯಿರುವುದರಿಂದ, ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಂತ್ರಿ ಸ್ಥಾನ, ನೀಡಿ ಜಿಲ್ಲೆಯ ಜನರ ಆಶೋತ್ತರಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಕ್ಷೇತ್ರಾದ್ಯಂತ ಚಿರಪರಿಚಿತರಾಗಿರುವ ಶಾಸಕ ಟಿ.ರಘುಮೂರ್ತಿ ಎಲ್ಲಾ ಜಾತಿ ಜನಾಂಗದವರೊಡನೆ ಉತ್ತಮ ಬಾಂಧವ್ಯವಿಟ್ಟುಕೊಂಡಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ನೀಡದೆ ಕಡೆಗಣಿಸಿದಲ್ಲಿ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ: ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ ಎಂ.ಚಂದ್ರಪ್ಪ
ಬರಗೇರಮ್ಮ ದೇವಸ್ಥಾನದ ಅರ್ಚಕ ಮಂಜಣ್ಣ, ವೀಣಗೌರಣ್ಣ, ಪಾಂಡು ಬಿಳಿಗಿರಿ, ಮುಜಾಯಿದ್, ರಾಕೇಶ್, ವಿಠಲ್, ಧನರಾಜ್, ಮಣಿಕಂಠ, ದರ್ಶನ್ ಬೆಳಗಟ್ಟ, ಶಿವು ಸೇರಿದಂತೆ ಟಿ.ರಘುಮೂರ್ತಿ ಯುವಸೇನೆ ಪದಾಧಿಕಾರಿಗಳು, ಕಾರ್ಯಕರ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

