CHITRADURGA NEWS | 28 JULY 2026
ಚಿತ್ರದುರ್ಗ: ನಗರದ ಸರ್ಕಾರಿ ಕಲಾ ಕಾಲೇಜಿನ, ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ, ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ ಆಚರಿಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಇದನ್ನೂ ಓದಿ: ವಿದ್ಯಾರ್ಥಿಗಳ ಸುಧೀರ್ಘ ಹೋರಾಟಕ್ಕೆ ಸಂದ ಜಯ | ಎಎಪಿ ಜಿಲ್ಲಾಧ್ಯಕ್ಷ ಜಗದೀಶ್
ಈ ಕುರಿತು ಸೋಮವಾರ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದುಶ್ಚಟಗಳನ್ನೇ ಜೋಳಿಗೆಯಲ್ಲಿ ಪಡೆದು, ವ್ಯಸನಗಳನ್ನು ತೊರದು ಜೀವನ ನಡೆಸಲು ಸನ್ಮಾರ್ಗ ತೋರಿದ, ಇಲಕಲ್ ಮಠದ ಶ್ರೀ.ಡಾ.ಮಹಾಂತ ಶಿವಯೋಗಿಗಳ ಜನ್ಮದಿನಚಾರಣೆಯನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರದ ನಿರ್ದೇಶನವಿದೆ.
ಜಿಲ್ಲಾಡಳಿತ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ ದಿನಾಚರಣೆ ಸಿದ್ದತೆ ಕೈಗೊಳ್ಳಬೇಕು. ವ್ಯಸನ ವರ್ಜನೆ ಕುರಿತು ಸೂಕ್ತ ತಜ್ಞರನ್ನು ಕರೆಯಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುವಂತೆ ನಿರ್ದೇಶನ ನೀಡಿದರು.
ಇದನ್ನೂ ಓದಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಗೆ ಎಲ್ಲರ ಅಭಿಪ್ರಾಯ ಸಂಗ್ರಹ | ರಿಪಿನ್ ಬೊಹರಾ
ಪ್ರತಿಯೊಂದು ತಾಲ್ಲೂಕಿನ ತಹಶೀಲ್ದಾರರು ಸಹ ತಾಲ್ಲೂಕು ಕೇಂದ್ರಗಳಲ್ಲಿ ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ ಆಚರಿಸಬೇಕು. ಡಾ.ಮಹಾತಂ ಶಿವಯೋಗಿಗಳ ಭಾವಚಿತ್ರ ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು ಎಂದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.
ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

