By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Minister Muniyappa visits Rani Chennamma Residential School, Aimangala Kittur
    ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ
    2 hours ago
    Vishwamana Residential School becomes champion in Hobli level sports meet
    ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಶ್ವಮಾನವ ವಸತಿ ಶಾಲೆಗೆ ಚಾಂಪಿಯನ್ ಪಟ್ಟ
    4 hours ago
    Water and Sanitation Committee Meeting
    ಜೆಜೆಎಂ ಕಾಮಗಾರಿ ವಿಳಂಬ | 383 ಕಾಮಗಾರಿಗಳಿಗೆ ಕಾಲಾವಧಿ ವಿಸ್ತರಣೆ, ದಂಡ ವಿಧಿಸಲು ಪ್ರಸ್ತಾವನೆ | ಜಿ.ಪಂ. ಸಿಇಓ 
    4 hours ago
    Minister K.H. Muniyappa spoke at the press conference
    ಹಿರಿಯೂರಿನಲ್ಲಿ ಸಮುದಾಯ ಭವನ, ವಸತಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ | ಸಚಿವ ಕೆ.ಹೆಚ್.ಮುನಿಯಪ್ಪ
    5 hours ago
    ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಸೆ.24ಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಿತ್ರದುರ್ಗಕ್ಕೆ | ಗೋನೂರು ಕೆರೆಗೆ ಬಾಗೀನ
    6 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 day ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 week ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    9 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    7 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 week ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 day ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • Life Style
    Life StyleShow More
    Weeds
    ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
    15 hours ago
    Conch flower
    ಮುಖಕ್ಕೆ ನೈಸರ್ಗಿಕ ಹೊಳಪು ನೀಡಲು ಶಂಖಪುಷ್ಪ ಹೂಗಳ ಫೇಸ್ ಸೀರಮ್ ಹಚ್ಚಿ
    16 hours ago
    Back pain
    ಬೆನ್ನು ನೋವು ಇದ್ದರೆ ಯಾವ ಎಣ್ಣೆ ಹಚ್ಚಬೇಕು? ತಿಳಿಯಿರಿ
    2 days ago
    face wash
    ಫೇಸ್ ವಾಶ್‌ನಲ್ಲಿರುವ ಈ ಪದಾರ್ಥಗಳು ಮೊಡವೆಗಳಿಗೆ ಕಾರಣವಾಗಬಹುದು ಎಚ್ಚರ
    2 days ago
    Body inflammation
    ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
    3 days ago
Reading: ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ 

News Desk Chitradurga News
Last updated: 28 July 2026 18:33
News Desk Chitradurga News
2 months ago
Share
ಬೆಳೆ ಸಮೀಕ್ಷೆ ಕಾರ್ಯಕ್ರಮ ಅನುಷ್ಠಾನ ಕುರಿತು ಸಭೆ
ಬೆಳೆ ಸಮೀಕ್ಷೆ ಕಾರ್ಯಕ್ರಮ ಅನುಷ್ಠಾನ ಕುರಿತು ಸಭೆ
SHARE

CHITRADURGA NEWS | 28 JULY 2026

ಚಿತ್ರದುರ್ಗ: ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ಬೆಳೆ ಕಟಾವು ಪ್ರಯೋಗಗಳು ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು. ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜು ತೋರದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಮಂಗಳವಾರ 2026-27ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮ ಅನುಷ್ಠಾನ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಕೃಷಿ ಇಲಾಖೆ ವಿವಿಧ ಕಾರ್ಯಕ್ರಮಗಳ ಕುರಿತು ಜರುಗಿದ, ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳೆ ಸಮೀಕ್ಷೆಯಲ್ಲಿ ಲೋಪದೋಷಗಳಾಗದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಬೆಳೆ ಸಮೀಕ್ಷೆಯ ಪಾರದರ್ಶಕತೆ ಮತ್ತು ನಿಖರತೆ ಅತ್ಯಂತ ಮುಖ್ಯ. ಕೃಷಿ, ಕಂದಾಯ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು. ಬೆಳೆ ಸಮೀಕ್ಷೆಯ ಶೇಕಡಾವಾರು ದೋಷಗಳು ಕೆಲವು ಇಲಾಖೆಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಇದನ್ನು ತಕ್ಷಣವೇ ಸರಿಪಡಿಸಿಕೊಳ್ಳಬೇಕು. ಬೆಳೆ ಸಮೀಕ್ಷೆ ಕುರಿತು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮೀಕ್ಷೆ ತಾಕುಗಳಿಗೆ ಭೇಟಿ ನೀಡಿ ಭೌತಿಕವಾಗಿ ಪರಿಶೀಲನೆ ನಡೆಸಬೇಕು.

ತಾಲ್ಲೂಕು ಹಂತದಲ್ಲಿ ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳು ಬೆಳೆ ಸರ್ವೇ ಕಾರ್ಯದ ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಬೇಕು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಬೆಳೆ ಸಮೀಕ್ಷೆ ಕುರಿತು ಸಭೆಗಳನ್ನು ಯೋಜಿಸುವ ಮೂಲಕ ಕೆಳ ಹಂತದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕು. ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳೆ ಸಮೀಕ್ಷೆ ಪ್ರಗತಿ ಪರಿಶೀಲನೆ ನಡೆಸುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಸಂಗೀತದಿಂದ ಮಾನಸಿಕ ನೆಮ್ಮದಿ | ಆರ್.ವಿಶ್ವಸಾಗರ್

ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಬೆಳೆ ಸಮೀಕ್ಷೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಕಳೆದ ವರ್ಷದಿಂದ ಕೃತಕ ಬುದ್ಧಿಮತ್ತೆ ಆಧಾರಿತ ವೆರಿಫಿಕೇಶನ್ ತಂತ್ರಜ್ಞಾನವನ್ನು ಪರಿಚಯಿಸಲಾಗಿದ್ದು, ರೈತರು ಅಥವಾ ಜಮೀನು ಸಮೀಕ್ಷೆದಾರರು ಅಪ್‍ಲೋಡ್ ಮಾಡುವ ಫೋಟೋಗಳ ನೈಜತೆಯನ್ನು ತಂತ್ರಜ್ಞಾನವೇ ಪರಿಶೀಲಿಸುತ್ತದೆ. ರೈತರು ನೋಂದಾಯಿತ ಭೂಮಿಯಲ್ಲಿ ಸರಿಯಾದ ಬೆಳೆ ಮಾಹಿತಿ ನೀಡುವುದು ಹಾಗೂ ಜಮೀನಿಗೆ ಭೇಟಿ ನೀಡಿ ನಿಖರ ಫೋಟೋ ತೆಗೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಸ್ಯಾಟಲೈಟ್ ಹಾಗೂ ಸ್ಥಳೀಯ ಜಿಯೋ-ಫೆನ್ಸಿಂಗ್ ವ್ಯವಸ್ಥೆಯ ಮೂಲಕ ಯಾವುದೇ ದುರ್ಬಳಕೆಯಾಗದಂತೆ ತಡೆಯಲಾಗುತ್ತಿದೆ ಎಂದರು.

ರೈತರಿಗೆ ನ್ಯಾಯಯುತ ಪರಿಹಾರ ಸೌಲಭ್ಯ ದೊರಕಲಿ:  

ರೈತರು ಪಾವತಿಸುವ ಬೆಳೆವಿಮೆ ನೋಂದಣಿಗೆ ತಕ್ಕಂತೆ ಅವರಿಗೆ ನ್ಯಾಯಯುತ ಪರಿಹಾರ ಸೌಲಭ್ಯ ದೊರೆಯುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಮಳೆ ಕೊರತೆಯಿಂದ ಬಿತ್ತನೆ ವಿಫಲಗೊಂಡಲ್ಲಿ ರೈತರಿಗೆ ತೊಂದರೆಯಾಗಬಾರದು. 

ನಿಯಮಾವಳಿ ಪ್ರಕಾರ ಶೇ 25 ರಷ್ಟು ಪರಿಹಾರ ಮೊತ್ತ ದೊರೆಯುವಂತೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಬಿತ್ತಿದ ಬೆಳೆ ವಿಫಲಗೊಂಡಲ್ಲಿ, ಬೆಳೆ ಅಳಿಸಿ, ಬೇರೆ ಬೆಳೆ ಬಿತ್ತಿಲು ಮುಂದಾಗುವ ರೈತರಿಗೆ, ಕಡ್ಡಾಯವಾಗಿ ಬೆಳೆವಿಮೆ ನೊಂದಣಿಯಲ್ಲಿ ಕಡ್ಡಾಯವಾಗಿ ಬೆಳೆ ಹೆಸರು ಬದಲಾಯಿಸಲು ಜಾಗೃತಿ ಮೂಡಿಸಬೇಕು. ಬೆಳೆ ಸಮೀಕ್ಷೆ ಹಾಗೂ ವಿಮೆ ನೋಂದಣಿ ಮಧ್ಯೆ ವ್ಯತ್ಯಾಸ ಕಂಡುಬಂದರೆ, ಅದನ್ನು ತಾಲೂಕು ಮಟ್ಟದ ಸಮಿತಿ ಮೂಲಕ ಪರಿಶೀಲಿಸಿ ರೈತರ ಹಿತ ಕಾಯಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆ

ಬೆಳೆ ಕಟಾವು ಪ್ರಯೋಗ ನಡೆಸಲು ಪ್ಲಾಟ್ ಆಯ್ಕೆ ಮಾಡುವಾಗ ಅಧಿಕಾರಿಗಳು ಅತ್ಯಂತ ಎಚ್ಚರಿಕೆ ವಹಿಸಬೇಕು. ಕೇವಲ ನೀರಾವರಿ ಅಥವಾ ಸಮೃದ್ಧವಾಗಿ ಬೆಳೆದ ಪ್ಲಾಟ್‍ಗಳನ್ನು ಮಾತ್ರ ಆಯ್ಕೆ ಮಾಡದೆ, ಪ್ರಾಮಾಣಿಕ ಹಾಗೂ ಪಾರದರ್ಶಕ ರೀತಿಯಲ್ಲಿ ಸಮೀಕ್ಷೆ ನಡೆಸಬೇಕು. ಅಧಿಕಾರಿಗಳು ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಕನಿಷ್ಠ ಶೇ 10 ರಷ್ಟು ಕ್ಷೇತ್ರಗಳ ತಪಾಸಣೆ ನಡೆಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

1.40 ಲಕ್ಷಕ್ಕೂ ಹೆಚ್ಚು ರೈತರ ನೋಂದಣಿ ನಿರೀಕ್ಷೆ:

ಜಿಲ್ಲೆಯಲ್ಲಿ ಬೆಳೆವಿಮೆ ನೋಂದಣಿ ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದೆ. ಚಳ್ಳಕೆರೆ ತಾಲೂಕಿನಲ್ಲಿ ಇದುವರೆಗೆ 1.29 ಲಕ್ಷಕ್ಕೂ ಹೆಚ್ಚು ಅರ್ಜಿಗಳು ನೋಂದಣಿಯಾಗಿದ್ದು, ಕೃಷಿ ಸಂಘಟನೆಗಳ ಪೋರ್ಟಲ್ ನಲ್ಲಿ 1.02 ಲಕ್ಷಕ್ಕೂ ಹೆಚ್ಚು ರೈತರ ವಿವರ ದಾಖಲಾಗಿದೆ. ಕಳೆದ ವರ್ಷ 1.15 ಲಕ್ಷ ರೈತರು ನೋಂದಾಯಿಸಿಕೊಂಡಿದ್ದರು. ಈ ಬಾರಿ ಜುಲೈ 31ರ ಕೊನೆಯ ದಿನಾಂಕದ ವೇಳೆಗೆ ನೋಂದಣಿ ಸಂಖ್ಯೆ 1.40 ಲಕ್ಷ ದಾಟುವ ನಿರೀಕ್ಷೆಯಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದರು.

ಗೈರಾದ ವಿಮಾ ಕಂಪನಿ ಅಧಿಕಾರಿಗೆ ನೋಟಿಸ್ :

ಬೆಳೆವಿಮೆ ಕಂಪನಿಯ ಅಧಿಕಾರಿ ಸಭೆಗೆ ಗೈರು ಹಾಜರಿಯಾಗಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅಪರ ಜಿಲ್ಲಾಧಿಕಾರಿಗಳು, ಸಭೆಯ ನೋಟಿಸ್ ನೀಡಿದ್ದರೂ, ಗೈರುಹಾಜರಾಗುವುದು ಅಥವಾ ಸಭೆಗೆ ಮುನ್ನವೇ ನೆಪ ಹೇಳಿ ಮೇಲ್ ಕಳುಹಿಸುವುದು ಸರಿಯಾದ ನಡವಳಿಕೆಯಲ್ಲ. ಮೊದಲ ದಿನದಿಂದಲೇ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ವಿಮಾ ಕಂಪನಿ ಅಧಿಕಾರಿಯಿಂದ ನಡೆಯುತ್ತಿದೆ. ಇಂತಹ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ. ಗೈರು ಹಾಜರಾದ ಅಧಿಕಾರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ | ADC

ಬೆಳೆವಿಮೆ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ, ಲೋಪದೋಷ ಅಥವಾ ನಿಯಮಗಳ ಉಲ್ಲಂಘನೆಯನ್ನು ಸಹಿಸಲು ಸಾಧ್ಯವಿಲ್ಲ. ರೈತರ ಹಿತರಕ್ಷಣೆಗೆ ಧಕ್ಕೆಯುಂಟಾದರೆ ಸಂಬಂಧಿಸಿದ ವಿಮಾ ಸಂಸ್ಥೆಯ ವಿರುದ್ಧ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಎಚ್ಚರಿಸಿದರು.

ಕಳೆದ ಬಾರಿ ಸ್ಥಳೀಯ ವಿಕೋಪ ಹಾಗೂ ಬೆಳೆ ಹಾನಿಗೆ ಸಂಬಂಧಿಸಿದಂತೆ ಕೆಲವೆಡೆ ದುರುಪಯೋಗವಾಗಿರುವ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೃಷಿ ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಗಳು ಕಡ್ಡಾಯವಾಗಿ ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದರು.

ಎಣ್ಣೆಕಾಳು ವಿಸ್ತೀರ್ಣ ಹಾಗೂ ಉತ್ಪಾದನೆ ಹೆಚ್ಚಳಕ್ಕೆ ಯೋಜನೆ:

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ಎಣ್ಣೆಕಾಳು ಕಾರ್ಯಕ್ರಮದ ಅನುಷ್ಠಾನ ಮಾರ್ಗಸೂಚಿ ಸಭೆಯಲ್ಲಿ ಮಾಹಿತಿ ನೀಡಿದ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ದೇಶದಲ್ಲಿ ಎಣ್ಣೆಕಾಳುಗಳ ಕೊರತೆಯಿದ್ದು, ಹೊರದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಕೊರತೆ ನೀಗಿಸಲು ಸ್ಥಳೀಯವಾಗಿ ಎಣ್ಣೆಕಾಳು ಬೆಳೆಗಳ ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆ ಜಾರಿಗೆ ತರಲಾಗಿದೆ.

ಇದನ್ನೂ ಓದಿ: ಕಾರ್ಗಿಲ್ ವಿಜಯ ದಿವಸ್ | SRS ಹೆರಿಟೇಜ್ ಶಾಲೆ ವತಿಯಿಂದ ದೇಶಭಕ್ತಿ ಜಾಥಾ

ಜಿಲ್ಲೆಯಲ್ಲಿ ದಶಕಗಳಿಂದ ಖಿಒಗಿ-2 ತಳಿಯ ಶೇಂಗಾವನ್ನೇ ಹೆಚ್ಚಾಗಿ ಬಳಸಲಾಗುತ್ತಿದೆ. ಇದರ ಉತ್ಪಾದಕತೆ ಕಡಿಮೆಯಾಗುತ್ತಿದ್ದು, ಇದರ ಬದಲಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಊ-256 ನಂತಹ ಹೆಚ್ಚಿನ ಇಳುವರಿ ನೀಡುವ ಹೊಸ ತಳಿಗಳನ್ನು ಪರಿಚಯಿಸಲಾಗುತ್ತಿದೆ. ಮೌಲ್ಯವರ್ಧನೆ ಕ್ಲಸ್ಟರ್ ಯೋಜನೆಯಡಿ ಕೆಒಎಫ್ ಮತ್ತು ಕೆಎಸ್‍ಎಸ್‍ಸಿ ಸಂಸ್ಥೆಗಳನ್ನು ಪಾಲುದಾರರನ್ನಾಗಿ ಮಾಡಿಕೊಳ್ಳಲಾಗಿದೆ. ಶೇಂಗಾ, ಸೂರ್ಯಕಾಂತಿ, ಕುಸುಮೆ ಹಾಗೂ ಅರಳೆ ಬೆಳೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದರು.

ರೈತರನ್ನು ಎಣ್ಣೆಕಾಳು ಬೆಳೆಯಲು ಪ್ರೋತ್ಸಾಹಿಸಲು ಶೇ.90ರಷ್ಟು ರಿಯಾಯಿತಿ ದರದಲ್ಲಿ ಉತ್ತಮ ತಳಿಯ ಬಿತ್ತನೆ ಬೀಜಗಳನ್ನು ಪೂರೈಸಲಾಗುತ್ತಿದೆ. ಚಿತ್ರದುರ್ಗ ಹಾಗೂ ಹಿರಿಯೂರು ಭಾಗದಲ್ಲಿ ಶೇಂಗಾ ಮತ್ತು ಸೂರ್ಯಕಾಂತಿ ಬೆಳೆಗಳಿಗೆ ಉತ್ತಮ ವಾತಾವರಣವಿದ್ದು, ರೈತರಿಗೆ ಸೂಕ್ತ ಜಾಗೃತಿ ಮೂಡಿಸಿ ಎಣ್ಣೆಕಾಳು ಬೆಳೆಯಲು ಪ್ರೋತ್ಸಾಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ 2026-27ನೇ ಸಾಲಿನ ಹತ್ತಿ ಉತ್ಪಾದಕತೆ ಅಭಿಯಾನ, ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಪರ್ ಡ್ರಾಪ್ ಮೋರ್ ಕ್ರಾಪ್-ಸೂಕ್ಷ್ಮ ನೀರಾವರಿ, ದ್ವಿದಳ ಧಾನ್ಯಗಳಲ್ಲಿ ಆತ್ಮ ನಿರ್ಭರತಾ ಅಭಿಯಾನದ ಮಾರ್ಗಸೂಚಿಗಳ ಸಭೆ ನಡೆಯಿತು.

ಕೃಷಿ ಅಂಕಿ ಅಂಶಗಳ ತ್ರೈಮಾಸಿಕ ಸಮನ್ವಯ ಸಮಿತಿ ಸಭೆ:

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ 2026-27ನೇ ಸಾಲಿನ ಮೊದಲನೇ ಕೃಷಿ ಅಂಕಿ-ಅಂಶಗಳ ತ್ರೈಮಾಸಿಕ ಸಮನ್ವಯ ಸಮಿತಿ ಸಭೆ ನಡೆಯಿತು.

ಇದನ್ನೂ ಓದಿ: ಮಹಾಭಾರತದ ಭೀಷ್ಮನ ವ್ಯಕ್ತಿತ್ವ ಅತ್ಯಂತ ಕುತೂಹಲಕಾರಿ | ತಾರಿಣಿ ಶುಭದಾಯಿನಿ

ಬೆಳೆ ಕಟಾವು ಪ್ರಯೋಗದ ಮಹತ್ವದ ಬಗ್ಗೆ ಸೂಚನೆ ನೀಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಮೂಲ ಕಾರ್ಯಕರ್ತರು ಹೆಚ್ಚು ಗಮನವಿಟ್ಟು ಪ್ರಯೋಗಗಳನ್ನು ಕೈಗೊಳ್ಳಬೇಕು. ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಕೃಷಿ ಇಲಾಖೆ ಬೆಳೆಗಳಿಗೆ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತೋಟಗಾರಿಕೆ ಬೆಳೆಗಳ ಕಟಾವು ಪ್ರಯೋಗಗಳನ್ನು ಮೇಲ್ವಿಚಾರಣೆ ನಡೆಸಲು ಸೂಚಿಸಿದರು. ಇದೇ ಸಂದರ್ಭದಲ್ಲಿ ಜನನ-ಮರಣ ಜಿಲ್ಲಾಮಟ್ಟದ ನಾಗರೀಕ ನೋಂದಣಿ ಪದ್ಧತಿ ಸಮನ್ವಯ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಉಪ ಕಾರ್ಯದರ್ಶಿ ಎಂ.ಬಾಬು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್, ಸಹಾಯಕ ಸಾಂಖ್ಯಿಕ ಅಧಿಕಾರಿ ಅಶ್ವತ್ಥಾಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCrop SurveyFarmersಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೆಳೆ ಸಮೀಕ್ಷೆರೈತರು
Share This Article
Facebook Email Print
Previous Article ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article ಒತ್ತಡ ನಿರ್ವಹಣೆ ಕುರಿತ ಉಪನ್ಯಾಸ ಕಾರ್ಯಕ್ರಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಒತ್ತಡ ರಹಿತ ಕೆಲಸ ಅತ್ಯಂತ ಅವಶ್ಯಕ | ಹೆಚ್.ಟಿ.ಅಶೋಕ
Leave a Comment

Leave a Reply Cancel reply

Your email address will not be published. Required fields are marked *

Minister Muniyappa visits Rani Chennamma Residential School, Aimangala Kittur
ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ
ಮುಖ್ಯ ಸುದ್ದಿ
Vishwamana Residential School becomes champion in Hobli level sports meet
ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಶ್ವಮಾನವ ವಸತಿ ಶಾಲೆಗೆ ಚಾಂಪಿಯನ್ ಪಟ್ಟ
ಮುಖ್ಯ ಸುದ್ದಿ
Water and Sanitation Committee Meeting
ಜೆಜೆಎಂ ಕಾಮಗಾರಿ ವಿಳಂಬ | 383 ಕಾಮಗಾರಿಗಳಿಗೆ ಕಾಲಾವಧಿ ವಿಸ್ತರಣೆ, ದಂಡ ವಿಧಿಸಲು ಪ್ರಸ್ತಾವನೆ | ಜಿ.ಪಂ. ಸಿಇಓ 
ಮುಖ್ಯ ಸುದ್ದಿ
Minister K.H. Muniyappa spoke at the press conference
ಹಿರಿಯೂರಿನಲ್ಲಿ ಸಮುದಾಯ ಭವನ, ವಸತಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ | ಸಚಿವ ಕೆ.ಹೆಚ್.ಮುನಿಯಪ್ಪ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up