CHITRADURGA NEWS | 29 JULY 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಶೇ.19 ರಷ್ಟು ಮಾತ್ರ ಬಿತ್ತನೆಯಾಗಿದ್ದು, ಇನ್ನೂ ಶೇ.81 ರಷ್ಟು ಬಿತ್ತನೆ ಪ್ರದೇಶ ಖಾಲಿ ಉಳಿದುಕೊಂಡಿದೆ. ರಾಜ್ಯ ಸರ್ಕಾರ ಮೊದಲ ಆಧ್ಯತೆಯಲ್ಲಿ ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿತ್ತನೆಗಾಗಿ ರೈತರು ತಂದಿದ್ದ ಬಿತ್ತನೆ ಬೀಜವನ್ನು ವಾಪಾಸು ಪಡೆದು ಕೃಷಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿ ಮಾತನಾಡಿದರು.
ಕಳೆದ ಹತ್ತು ದಿನಗಳ ಹಿಂದೆ ಮೈಸೂರು ಭಾಗದಲ್ಲಿ ಬರ ಅಧ್ಯಯನ ಮಾಡಿದ್ದು, ಈಗ ಚಿತ್ರದುರ್ಗ ದಾವಣಗೆರೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದೇವೆ. ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಗೆ ಭೇಟಿ ನೀಡಿದ್ದು, ಅಲ್ಲಿನ ರೈತರೊಬ್ಬರು 13 ಎಕರೆಯಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡಿದ್ದು, ಮಳೆ ಇಲ್ಲದೆ ಸಂಪೂರ್ಣವಾಗಿ ಬಾಡಿ ಹೋಗಿದೆ.
ಬಿತ್ತನೆ ಮಾಡಿ 55 ದಿನವಾದರೂ ಹೂ ಕಂಡಿಲ್ಲ. ಮಳೆ ಇಲ್ಲದ ಕಾರಣಕ್ಕೆ ರೈತ ಜಮೀನಿಗೆ ಹೋಗಲು ಬೇಸರಪಟ್ಟುಕೊಂಡಿದ್ದಾರೆ. ಇದೇ ರೀತಿಯಲ್ಲಿ ಬಹುತೇಕ ಜಿಲ್ಲೆಯ ಸ್ಥಿತಿ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿಶೇ.19 ರಷ್ಟು ಮಾತ್ರ ಬಿತ್ತನೆ ಆಗಿದೆ. ಶೇ.81ರಷ್ಟು ಬಿತ್ತನೆ ಆಗಿಲ್ಲ ಎಂದರು.
ಇದನ್ನೂ ಓದಿ: ಸಿಕಂದರಾಬಾದ್ನಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ
ಅಧಿಕಾರಿಗಳ ಬಳಿ ಅಂದಾಜು ಮಾಹಿತಿ ಮಾತ್ರ ಇದೆ. ಸರಿಯಾದ ಅಂಕಿ ಅಂಶಗಳೇ ಇಲ್ಲದೆ ಕೇಂದ್ರದ ಮೇಲೆ ತಾರತಮ್ಯದ ಗೂಬೆ ಕೂರಿಸುತ್ತಿದ್ದಾರೆ ಎಂದರು.
ಕರ್ನಾಟಕದಲ್ಲಿ ರೈತರು ಬಿತ್ತನೆ ಬೀಜ ವಾಪಾಸು ಕೊಡುತ್ತಿದ್ದಾರೆ. ಮಳೆ ಇಲ್ಲದ ಕಾರಣಕ್ಕೆ ಬಿಲ್ ಸಹಿತ ಕೃಷಿ ಇಲಾಖೆ ಹಾಗೂ ಗೊಬ್ಬರದ ಅಂಗಡಿಗಳಿಎ ಹಿಂತಿರುಗಿಸುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯನ್ನು ಮೊದಲ ಆಧ್ಯತೆಯಲ್ಲಿ ಬರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎಚ್.ಮೋಹನ್, ಡಾ.ಮಂಜುನಾಥ್, ವೆಂಕಟೇಶ್ ಯಾದವ್ ಮತ್ತಿತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

