CHITRADURGA NEWS | 04 AUGUST 2026
ಚಿತ್ರದುರ್ಗ: ಭಾರತೀಯ ಸೇನೆಯ ಸಿಗ್ನಲ್ ರೆಜಿಮೆಂಟ್ನಲ್ಲಿ ಯುನಿಟ್ ಹೆಡ್ಕ್ವಾರ್ಟರ್ ಕೋಟಾ (UHQ) ಅಡಿಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿಗಾಗಿ ಆಯೋಜಿಸಲಾಗಿರುವ ರ್ಯಾಲಿಯಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ನಗರಸಭೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಟ್ರೇಡ್ಸ್ಮನ್, ಅಗ್ನಿವೀರ್ ಜನರಲ್ ಡ್ಯೂಟಿ ಹಾಗೂ ಅಗ್ನಿವೀರ್ ಟೆಕ್ನಿಕಲ್ (ತಾಂತ್ರಿಕ) ವಿಭಾಗದ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಗಸ್ಟ್ 18 ರಿಂದ 21 ರವರೆಗೆ ಪ್ರಕ್ರಿಯೆ ಜರುಗಲಿದೆ.
17 ವರ್ಷದಿಂದ 22 ವರ್ಷದೊಳಗಿನ ವೀರ ನಾರಿಯರು, ಸೈನಿಕರು, ಮಾಜಿ ಸೈನಿಕರ ಮಕ್ಕಳು ಮತ್ತು ಸೈನಿಕರ ಸ್ವಂತ ಸಹೋದರರು ಈ ಕೋಟಾದಡಿ ಭಾಗವಹಿಸಲು ಅವಕಾಶವಿದೆ.
ಇದನ್ನೂ ಓದಿ: ಬಿ.ಜಿ.ಗೋವಿಂದಪ್ಪಗೆ ಸಚಿವ ಸ್ಥಾನ ನೀಡಲು ಕುರುಬ ಸಮಾಜದಿಂದ ಒತ್ತಾಯ
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18 ರಂದು ಬೆಳಿಗ್ಗೆ 5 ಗಂಟೆಗೆ ಮಧ್ಯಪ್ರದೇಶದ ಜಬಲ್ಪುರ್ ರಸ್ತೆಯಲ್ಲಿರುವ ‘ಬಾಯ್ಸ್ ಸ್ಪೋಟ್ರ್ಸ್ ಕಂಪನಿ ಮೈದಾನ’ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಿರಬೇಕು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

