By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Free health check-up camp in Kengunte
    ಕೆಂಗುಂಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    7 hours ago
    Cultural researcher S. Karthik delivered a lecture
    ಅಶೋಕನ ಮೂರು ಶಾಸನ ಹೊಂದಿರುವ ಚಿತ್ರದುರ್ಗಕ್ಕೆ ವಿಶಿಷ್ಟ ಸ್ಥಾನ | ಎಸ್.ಕಾರ್ತಿಕ್
    7 hours ago
    ಹಿಂದೂ ಮಹಾಗಣಪತಿ ಮಹೋತ್ಸವ | ಅಕ್ಟೋಬರ್ 1ಕ್ಕೆ ಬೃಹತ್ ಬೈಕ್ ರ್ಯಾಲಿ | 3ಕ್ಕೆ ಶೋಭಾಯಾತ್ರೆ
    7 hours ago
    Appeal for ₹3 crore grant for construction of Jogi Community Hall
    ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹3 ಕೋಟಿ ಅನುದಾನಕ್ಕೆ ಮನವಿ
    19 hours ago
    Celebration of the Jayanti of Sharanas Hoogara Madayya and Hendaada Marayya
    ಮುರುಘಾ ಮಠದಲ್ಲಿ ಹೂಗಾರ ಮಾದಯ್ಯ, ಹೆಂಡದ ಮಾರಯ್ಯ ಶರಣರ ಜಯಂತಿ ಆಚರಣೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 day ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    2 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    19 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 day ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    bacteria
    ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಕಡಿಮೆಯಾದರೆ, ಈ ಬದಲಾವಣೆಗಳು ದೇಹದಲ್ಲಿ ಕಂಡುಬರುತ್ತವೆಯಂತೆ
    18 hours ago
    blood sugar
    ತಿಂದ ನಂತರ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ನಿಯಂತ್ರಿಸಲು ಈ ಒಂದು ಕೆಲಸ ಮಾಡಿದರೆ ಸಾಕಂತೆ
    19 hours ago
    Iodine
    ಅಯೋಡಿನ್ ಕೊರತೆಯಿಂದ ಬಳಲುತ್ತಿರುವವರು ಈ ಆಹಾರ ಸೇವಿಸಿ
    2 days ago
    Eat these 5 things for breakfast to improve gut health
    ಕರುಳಿನ ಆರೋಗ್ಯವನ್ನು ಸುಧಾರಿಸಲು ಉಪಾಹಾರದಲ್ಲಿ ಈ 5 ವಸ್ತುಗಳನ್ನು ಸೇವಿಸಿ
    2 days ago
    Herbal tea
    ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡಮೂಲಿಕೆ ಚಹಾ ಕುಡಿಯಿರಿ
    3 days ago
Reading: ಮಳೆ ಮಾಪಕಗಳ ದುರಸ್ಥಿಗೆ ಸಚಿವ ಟಿ.ರಘುಮೂರ್ತಿ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಳೆ ಮಾಪಕಗಳ ದುರಸ್ಥಿಗೆ ಸಚಿವ ಟಿ.ರಘುಮೂರ್ತಿ ಸೂಚನೆ

News Desk Chitradurga News
Last updated: 7 August 2026 07:58
News Desk Chitradurga News
2 months ago
Share
ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
SHARE

CHITRADURGA NEWS | 07 AUGUST 2026

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಲ್ಲಿ ಜನವರಿ ರಿಂದ ಆಗಸ್ಟ್ ತಿಂಗಳ ವರೆಗೆ 191.8 ಮಿ.ಮೀ. ವಾಡಿಕೆ ಮಳೆ ನಿರೀಕ್ಷೆ ಇದ್ದು, ಇದುವರೆಗೆ 190 ಮಿ.ಮೀ. ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡುತ್ತಿದ್ದೀರಿ. ಇದಕ್ಕೆ ವ್ಯತಿರಿಕ್ತವಾಗಿ ಜಿಲ್ಲೆಯಲ್ಲಿ ಶೇ.16.5 ರಷ್ಟು ಮಾತ್ರ ಬಿತ್ತನೆಯಾಗಿದೆ. ಸಮರ್ಪಕ ಮಳೆಯಾಗಿದ್ದರೆ, ಬಿತ್ತನೆ ಏಕೆ ಕುಂಠಿತವಾಗುತ್ತಿತ್ತು. ಮಳೆ ವರದಿ ಅಂಕಿ ಅಂಶಗಳು ನಿಖರವಾಗಿಲ್ಲ. ಕೂಡಲೇ ಟೆಲಿ ಮೆಟ್ರಿಕ್ ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇದನ್ನೂ ಓದಿ: ಚಳ್ಳಕೆರೆಯಲ್ಲಿ ತೀವ್ರ ಬರದ ಬರೆ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ

ಚಳ್ಳಕೆರೆ ನಗರದ ತಾ.ಪಂ. ಸಭಾಂಗಣದಲ್ಲಿ ಗುರುವಾರ ತಾಲ್ಲೂಕಿನ ವಿಪತ್ತು ನಿರ್ವಹಣೆ ವಿಷಯಗಳ ಕುರಿತು ಸಭೆ ನಡೆಸೆ ಅವರು ಮಾತನಾಡಿದರು. 

ಮುಂಬರುವ ದಿನಗಳಲ್ಲಿ ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಆಗಮಿಸಲಿದೆ. ಆಗ ಇದೇ ರೀತಿ ಮಳೆ ವರದಿಯನ್ನು ನೀಡಿದರೆ, ಕೇಂದ್ರ ತಂಡ ಬರಗಾಲ ಪರಿಸ್ಥಿತಿ ಇರುವುದನ್ನು ಒಪ್ಪುವುದೇ? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಸಚಿವ ಟಿ.ರಘುಮೂರ್ತಿ, ಮಳೆ ಹಾಗೂ ಬಿತ್ತನೆ ಕುರಿತಂತೆ ನಿಖರವಾದ ಅಂಕಿ ಅಂಶಗಳನ್ನು ಕ್ರೂಢಿಕರಿಸಬೇಕು. ಮಳೆ ಬಂದರೂ, ಹೇಗೆ ಬಿತ್ತನೆಗೆ ಸಹಕಾರಿಯಾಗಿಲ್ಲ ಎಂಬುದನ್ನು ಕೇಂದ್ರ ತಂಡ ಮುಂದೆ ವಿಷದ ಪಡಿಸಬೇಕು ಎಂದರು.

ಚಳ್ಳಕೆರೆ ತಾಲ್ಲೂಕಿನಲ್ಲಿ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರದಿಂದ ಸ್ಥಾಪಿತವಾಗಿರುವ 44 ಟೆಲೆ ಮೆಟ್ರಿಕ್ ಮಳೆ ಮಾಪನ ಕೇಂದ್ರಗಳು ಇವೆ. ಇದರಲ್ಲಿ 26 ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಉಳಿದ ಕೇಂದ್ರಗಳ ದುರಸ್ಥಿ ಪ್ರಾಧಿಕಾರ ಮುಂದಾಗಿದೆ. ತಾಲ್ಲೂಕಿನಲ್ಲಿ ವಾಡಿಕೆ ಮಳೆಯಾಗಿದ್ದರು, ಅದು ಬಿತ್ತನೆ ಸಮಯದಲ್ಲಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.

ವರ್ಗೀಕೃತ ರೈತರ ಮಾಹಿತಿ ಸಂಗ್ರಹಣಕ್ಕೆ ಸೂಚನೆ:

ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಪರಸ್ಪರ ತಾಳೆಯಾದ ಮಾಹಿತಿಯನ್ನು ನೀಡುತ್ತೀರಿ. ಬಿತ್ತನೆ ಕ್ಷೇತ್ರ, ರೈತರ ಸಂಖ್ಯೆ ಇವುಗಳಲ್ಲಿ ಹೊಂದಾಣಿಕೆಯಾಗುವುದಿಲ್ಲ. ಅಧಿಕಾರಿಗಳು ವರ್ಗೀಕೃತ ಮಾದರಿಯಲ್ಲಿ ತಾಲ್ಲೂಕುವಾರು ಕೃಷಿ, ತೋಟಗಾರಿಕೆ, ಕೃಷಿ ಮತ್ತು ತೋಟಗಾರಿಕೆ ಮಾಡುತ್ತಿರುವ ರೈತರ ಮಾಹಿತಿ ಸಂಗ್ರಹಿಸಬೇಕು. ಇದರೊಂದಿಗೆ ಮಳೆಯಾಶ್ರಿತ ಕೃಷಿ, ನೀರಾವರಿ ಕೃಷಿ, ಬೆಳೆವಾರು ರೈತರ ವಿವರಗಳನ್ನು ನೀಡುವಂತೆ ಸಚಿವ ಟಿ. ರಘುಮೂರ್ತಿ ಸೂಚಿಸಿದರು.

ಇದನ್ನೂ ಓದಿ: ಸಚಿವರಾಗಿ ದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ | ಮದಕರಿ ವೃತ್ತದಲ್ಲಿ ಅದ್ದೂರಿ ಸ್ವಾಗತ 

ಪ್ರಸಕ್ತ ವರ್ಷ ಹಾಗೂ ಮುಂಗಾರು ಹಂಗಾಮಿನಲ್ಲಿ ಚಳ್ಳಕೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆಯಾಗಿದೆ. ತಾಲ್ಲೂಕಿನ 1,50,082 ಹೆಕ್ಟೇರ್ ಬಿತ್ತನೆ ಕ್ಷೇತ್ರವಿದ್ದು, 65,810 ರೈತರು ಇದ್ದಾರೆ. ಒಟ್ಟು ಶೇ.16.5 ರಷ್ಟು ಬಿತ್ತನೆಯಾಗಿದ್ದು, 59,756 ರೈತರು ಫಸಲ್ ಭಿಮಾ ಯೋಜನೆಯಲ್ಲಿ ನೊಂದಣಿಯಾಗಿದ್ದಾರೆ ಎಂದು ಕೃಷಿ ಜಂಟಿ ನಿರ್ದೇಶಕ ಬಿ.ಮಂಜುನಾಥ್ ಮಾಹಿತಿ ನೀಡಿದರು.

ಚಳ್ಳಕೆರೆ ತಾಲ್ಲೂಕಿನಲ್ಲಿ 5,400 ತೋಟಗಾರಿಕೆ ಮಾಡುವ ರೈತರಿದ್ದು, ಈ ಪೈಕಿ 5068 ರೈತರು ಹವಮಾನ ಆಧಾರಿತ ಬೆಳೆ ವಿಮೆಯಡಿ ನೊಂದಣಿ ಮಾಡಿದ್ದಾರೆ. ತೋಟಗಾರಿಕೆ ಬೆಳೆಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆದ ಎಲ್ಲಾ ರೈತರು ಕಡ್ಡಾಯವಾಗಿ ವಿಮೆ ಮಾಡಿಸಬೇಕಾಗಿದೆ. ಇದಕ್ಕೆ ಆಗಸ್ಟ್ 15ರ ವರೆಗೆ ಕಾಲಾವಕಾಶವಿದ್ದು ಲೀಡ್ ಬ್ಯಾಂಕ್ ಮೂಲಕ ನೊಂದಣಿ ಕ್ರಮ ಕೈಗೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಸವಿತಾ ಮಾಹಿತಿ ನೀಡಿದರು.

ಓವರ್ ಹೆಡ್ ಟ್ಯಾಂಕುಗಳ ಭರ್ತಿ ಗಡುವು:

ತುಂಗಭದ್ರಾ ಡ್ಯಾಂ ಹಿನ್ನೀರಿನಿಂದ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲ್ಲೂಕುಗಳಿಗೆ ರೂಪಿಸಲಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಎಲ್ಲಾ ಓವರ್ ಹಡ್ ಟ್ಯಾಂಕ್‍ಗಳನ್ನು ಭರ್ತಿ ಮಾಡಿ, ಮನೆ ಮನೆ ನೀರು ಸರಬರಾಜು ಮಾಡಬೇಕು. ಯೋಜನೆ ಪೂರ್ಣಗೊಂಡರು, ಪೈಪ್ ಲೈನ್ ಕಾಮಗಾರಿ ಬಾಕಿ ಇರುವ ಕಾರಣ ಯೋಜನೆ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಿಲ್ಲ. ಆಗಸ್ಟ್ 30ರ ವೇಳೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಚಿವ ಟಿ.ರಘುಮೂರ್ತಿ ಗಡುವು ವಿಧಿಸಿದರು.

ಇದನ್ನೂ ಓದಿ: ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು |ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ

ಬರಗಾಲ ನಿರ್ವಹಣೆಗೆ ಅಧಿಕಾರಿಗಳು ಮೈಚಳಿ ಬಿಟ್ಟು ಕೆಲಸ ಮಾಡಬೇಕು. ಕಚೇರಿಗೆ ಸೀಮಿತವಾಗಬಾರದು. ಯಾವ ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡುವುದಿಲ್ಲವೋ ಅವರನ್ನು ಬದಲಾಯಿಸಲು ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಹೇಳಿದರು.

ತುಂಗಭದ್ರಾ ಅಣೆಕಟ್ಟಿನ ನೀರಿನ ಸಂಗ್ರಹಣೆ ಕಡಿಮೆಯಾಗಿದ್ದರಿಂದ ಎರಡು ತಿಂಗಳ ಕಾಲ ನೀರು ಸರಬರಾಜು ಆಗಿರಲಿಲ್ಲ. ಜುಲೈ 9 ರಿಂದ ನೀರು ಸರಬಾಜು ಆಗಿದ್ದು, 458 ಓವರ್ ಹೆಡ್ ಟ್ಯಾಂಕ್‍ಗಳ ಪೈಕಿ 360 ಅನ್ನು ಭರ್ತಿ ಮಾಡಲಾಗಿದೆ. ಹಂತ ಹಂತವಾಗಿ ಉಳಿದ 98 ಟ್ಯಾಂಕ್‍ಗಳನ್ನು ಭರ್ತಿ ಮಾಡುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.

ಕೆ.ಎಂ.ಇ.ಆರ್.ಸಿ ಅಡಿ ಆರ್.ಓ. ಘಟಕ ಸ್ಥಾಪನೆ:

ಆರ್.ಓ. ಘಕಗಳ ನಿರ್ವಹಣೆ ಹಾಗೂ ದುರಸ್ತಿ ಅಧಿಕಾರಿಗಳು ಗಮನ ಹರಿಸಬೇಕು. ಯಾವ ಜನವಸತಿ ಪ್ರದೇಶಗಳಲ್ಲಿ ಆರ್.ಓ. ಘಟಕಗಳು ಇಲ್ಲ, ಅಂತಹ ಕಡೆ ಕೆ.ಎಂ.ಇ.ಆರ್.ಸಿ ಅಡಿ ಹೊಸದಾಗಿ ಆರ್.ಓ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಟಿ.ರಘುಮೂರ್ತಿ ಸೂಚಿಸಿದರು.

ಇದನ್ನೂ ಓದಿ: ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ | ರೈತರ ನೆರವಿಗೆ ಸರ್ಕಾರ ಬದ್ಧ

ಚಳ್ಳಕೆರೆ ತಾಲ್ಲೂಕಿನ ಒಟ್ಟು 286 ಆರ್.ಓ. ಘಟಕಗಳಲ್ಲಿ 207 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 31 ದುರಸ್ತಿಯಲ್ಲಿದ್ದರೆ, 48 ಸ್ಕ್ರಾಫ್ ಆಗಿವೆ. ತಾಲ್ಲೂಕಿನಲ್ಲಿ 350 ಜನ ವಸತಿ ಪ್ರದೇಶಗಳಿವೆ. ಸದ್ಯ 286 ಪ್ರದೇಶಗಳಲ್ಲಿ ಆರ್.ಓ. ಘಟಕಗಳಿದ್ದು, 64 ಹೆಚ್ಚುವರಿ ಘಟಕಗಳ ಅವಶ್ಯಕತೆಯಿದೆ. ಚಳ್ಳಕೆರೆ ತಾಲ್ಲೂಕು ಸೇರಿ ಜಿಲ್ಲೆಯಾದ್ಯಂತ 1661 ಜನವಸತಿ ಪ್ರದೇಶಗಳಿದ್ದು, 1151 ಆರ್. ಓ ಘಟಕಗಳು ಇವೆ. ಇನ್ನೂ 510 ಆರ್.ಓ ಘಟಕಗಳ ಅವಶ್ಯಕತೆಯಿದೆ. ಈಗಾಗಲೇ 86 ಆರ್.ಓ.ಘಟಕಗಳ ದುರಸ್ಥಿಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನ ಕೇಳಲಾಗಿದೆ. 2ನೇ ಹಂತದಲ್ಲಿ ಹೊಸ ಆರ್.ಓ. ಘಟಕಗಳ ಸ್ಥಾಪನೆ ಯೋಜನೆ ರೂಪಿಸಿ ಅನುದಾನ ಬೇಡಿಕೆ ಇಡಲಾಗುವುದು ಎಂದು ಜಿ.ಪಂ.ಸಿಇಓ ಡಾ.ಆಕಾಶ್ ಮಾಹಿತಿ ನೀಡಿದರು.

ಮಾಧ್ಯಮಗಳ ವರದಿಗಳಿಗೆ ಅಧಿಕಾರಿಗಳು ಸ್ಪಷ್ಟನೆ ನೀಡಿ:

ಸಾರ್ವಜನಿಕ ಕುಂದು ಕೊರತೆಗಳ ಕುರಿತು ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳ ವರದಿಗಳಿಗೆ ಸ್ಪಂದಿಸಿ, ಅಧಿಕಾರಿಗಳು ತ್ವರಿತವಾಗಿ ಸ್ಪಷ್ಟನೆ ನೀಡಬೇಕು. ಲೋಕೋಪಯೋಗಿ ಇಲಾಖೆಯಿಂದ ತಿಂಗಳ ಒಳಗಾಗಿ ಜಿಲ್ಲೆಯ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಟೆಂಡರ್ ಕರೆಯಬೇಕು. ರಸ್ತೆ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚುವ ಕಾರ್ಯದ ಬಗ್ಗೆ ಗುತ್ತಿಗೆದಾರರಿಗೆ ಕಾರ್ಯಾಗಾರವನ್ನು ಏರ್ಪಡಿಸಬೇಕು. ಕಾಮಗಾರಿಯ ಗುಣಮಟ್ಟವನ್ನು ಖುದ್ದು ಪರಿಶೀಲಿಸುತ್ತೇನೆ. ಲೋಪದೋಷ ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸಚಿವ ಟಿ.ರಘುಮೂರ್ತಿ ಎಚ್ಚರಿಕೆ ನೀಡಿದರು.

ಬೀದಿನಾಯಿ ಹಾಗೂ ಬಿಡಾಡಿ ದನಗಳಿಗೆ ಕಡಿವಾಣಕ್ಕೆ ನಿರ್ದೇಶನ:

ಚಳ್ಳಕೆರೆ ನಗರದಲ್ಲಿ ಬೀದಿನಾಯಿ ಹಾಗೂ ಬಿಡಾಡಿ ದನಗಳ ಉಪಟಳ ಹೆಚ್ಚಾಗಿದೆ. ನಗರಸಭೆಯಿಂದ ತುರ್ತು ಕಾರ್ಯಚಾರಣೆ ನಡೆಸಿ, ಬೀದಿನಾಯಿ ಹಾವಳಿ ಹಾಗೂ ಬಿಡಾಡಿ ದನಗಳಿಗೆ ಕಡಿವಾಣ ಹಾಕಬೇಕು. ರಸ್ತೆ ದನಗಳನ್ನು ಬಿಡುವ ಮಾಲಿಕರಿಗೆ ದಂಡ ವಿಧಿಸಬೇಕು. ಮಾಲಿಕರು ಎಚ್ಚೆತ್ತುಕೊಳ್ಳದೇ ದನಗಳನ್ನು ಬೀದಿಗೆ ಬಿಡುವುದನ್ನು ಪುನರಾವರ್ತಿಸಿದರೆ, ಅಂತಹ ದನಗಳನ್ನು ಶಾಶ್ವತವಾಗಿ ಗೋಶಾಲೆ ದಾಳಿಸುವಂತೆ ಸಚಿವ ಟಿ.ರಘುಮೂರ್ತಿ ನಿರ್ದೇಶನ ನೀಡಿದರು. ಇದೇ ವೇಳೆ ದೇವರ ಎತ್ತುಗಳ ನಿರ್ವಹಣೆ ಟ್ರಸ್ಟ್ ರಚಿಸುವ ಕಾರ್ಯವನ್ನು ತಿಂಗಳಾಂತ್ಯಕ್ಕೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಇದನ್ನೂ ಓದಿ: ಆ.8ರಂದು ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದಲ್ಲಿ ಲಿಂ. ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ

ಸಭೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ರಾಮಪ್ಪ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ತಾಲ್ಲೂಕು ಗ್ಯಾರಂಟಿ ಪಾಧಿಕಾರದ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaChitradurga newsMinister T. RaghumurthyRain ReportTelemetric Rain Gaugeಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಟೆಲಿಮೆಟ್ರಿಕ್ ಮಳೆ ಮಾಪಕಮಳೆ ವರದಿಸಚಿವ ಟಿ.ರಘುಮೂರ್ತಿ
Share This Article
Facebook Email Print
Previous Article today bhavishya ದಿನ ಭವಿಷ್ಯ | ಆಗಸ್ಟ್ 07 | ವ್ಯಾಪಾರದಲ್ಲಿ ಲಾಭ, ಶುಭ ಸುದ್ದಿ
Next Article ಬುದ್ಧನ ಕಂಚಿನ ವಿಗ್ರಹಗಳ ವಿತರಣೆ ಬುದ್ಧನ ಕಂಚಿನ ವಿಗ್ರಹಗಳ ವಿತರಣೆ | ವಿದ್ಯಾರ್ಥಿಗಳಿಗೆ ಸಾಧನೆಯ ಸಂದೇಶ
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
Dina Bhavishya
Free health check-up camp in Kengunte
ಕೆಂಗುಂಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮುಖ್ಯ ಸುದ್ದಿ
Cultural researcher S. Karthik delivered a lecture
ಅಶೋಕನ ಮೂರು ಶಾಸನ ಹೊಂದಿರುವ ಚಿತ್ರದುರ್ಗಕ್ಕೆ ವಿಶಿಷ್ಟ ಸ್ಥಾನ | ಎಸ್.ಕಾರ್ತಿಕ್
ಮುಖ್ಯ ಸುದ್ದಿ
ಹಿಂದೂ ಮಹಾಗಣಪತಿ ಮಹೋತ್ಸವ | ಅಕ್ಟೋಬರ್ 1ಕ್ಕೆ ಬೃಹತ್ ಬೈಕ್ ರ್ಯಾಲಿ | 3ಕ್ಕೆ ಶೋಭಾಯಾತ್ರೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up