CHITRADURGA NEWS | 13 AUGUST 2026
ಹೊಸದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಸಬಾ ಹೋಬಳಿಯ ಪಾಳೇದಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದ ಪ್ರವೇಶ, ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಶಾರೋಹಣ ಮಹೋತ್ಸವ ಆ.15ರಿಂದ 17ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
ಶ್ರೀ ಆಂಜನೇಯಸ್ವಾಮಿ ದೇವಾಲಯ ಸೇವಾ ಟ್ರಸ್ಟ್, ಪಾಳೇದಹಳ್ಳಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳ ಸಹಯೋಗದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಆ.15ರಂದು ಸಂಜೆ 5 ಗಂಟೆಗೆ ಆಹ್ವಾನಿತ ದೇವರುಗಳ ‘ಕೂಡುಬೇಟಿ’ ಕಾರ್ಯಕ್ರಮ ನಡೆಯಲಿದೆ. ಹಳೇಕುಂದೂರಿನ ಶ್ರೀ ಆಂಜನೇಯಸ್ವಾಮಿ, ಪಾಳೇದಹಳ್ಳಿಯ ಶ್ರೀ ಗುಳ್ಳಮ್ಮದೇವಿ, ಬಾಗೂರಿನ ಶ್ರೀ ಮಸಿಯಮ್ಮದೇವಿ, ಕಲ್ಲೇರೆಯ ಶ್ರೀ ಕರಿಯಮ್ಮದೇವಿ ಹಾಗೂ ಅದ್ರಿಕಟ್ಟೆಯ ಶ್ರೀ ಹೊಲಮ್ಮದೇವಿ ಉತ್ಸವ ಮೂರ್ತಿಗಳು ಆಗಮಿಸಲಿದ್ದು, ಬಳಿಕ ವಿವಿಧ ಹೋಮ-ಹವನಗಳು ನಡೆಯಲಿವೆ.
ಆ.16ರಂದು ಬೆಳಗಿನ ಜಾವ ಗಂಗಾಪೂಜೆ, ಗಣಪತಿ ಪೂಜೆ, ಗೋಪೂಜೆ ಸೇರಿದಂತೆ ವಿವಿಧ ವೈದಿಕ ವಿಧಿವಿಧಾನಗಳು ನಂದೀಪುರ ಹಿರೇಮಠದ ಶ್ರೀ ಷಟ್ಸ್ಥಲ ಬ್ರಹ್ಮ ನಂದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಅಮೃತ ಹಸ್ತದಿಂದ ನೆರವೇರಲಿವೆ. ಬೆಳಿಗ್ಗೆ 5ರಿಂದ 6ರವರೆಗೆ ಶುಭ ಬ್ರಾಹ್ಮಿ ಮುಹೂರ್ತದಲ್ಲಿ ದೇವಾಲಯ ಪ್ರವೇಶ ಹಾಗೂ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದ್ದು, ಬೆಳಿಗ್ಗೆ 9ಕ್ಕೆ ಕುಂಭೋತ್ಸವ, 9.30ಕ್ಕೆ ಪೂರ್ಣಾಹುತಿ ಹಾಗೂ 10ರಿಂದ 11ರವರೆಗೆ ಕಳಶಾರೋಹಣ ನೆರವೇರಲಿದೆ.
ಇದನ್ನೂ ಓದಿ: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
ಅಂದು ಬೆಳಿಗ್ಗೆ 11ಕ್ಕೆ ಧಾರ್ಮಿಕ ಸಮಾರಂಭ ನಡೆಯಲಿದ್ದು, ಮುಷ್ಟೂರು ಶ್ರೀಶೈಲ ಶಾಖಾಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ನಂದೀಪುರದ ಶ್ರೀ ನಂದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಗೊಲ್ಲಹಳ್ಳಿಯ ಶ್ರೀ ವಿಭವ ವಿದ್ಯಾಶಂಕರ ದೇಶಿಕೇಂದ್ರ ಮಹಾಸ್ವಾಮಿಗಳು ಹಾಗೂ ಹಡ್ಲಿಯ ಶ್ರೀ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ಇರಲಿದೆ.
ಪಾಳೇದಹಳ್ಳಿಯ ಉದ್ಯಮಿ ಮಲ್ಲಿಕಾರ್ಜುನ್ ಪಿ.ಎಂ. ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎನ್. ನವೀನ್, ಮಾಜಿ ಶಾಸಕರಾದ ಗೂಳಿಹಟ್ಟಿ ಡಿ. ಶೇಖರ್, ಡಿ.ಎಸ್. ರಂಗನಾಥ್ ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ದೇಶಸೇವೆ ಸಲ್ಲಿಸಿದ ಮಾಜಿ ಸೈನಿಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವೂ ನಡೆಯಲಿದೆ.
ಇದನ್ನೂ ಓದಿ: HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ
ಆ.17ರಂದು ಸಂಜೆ 5.30ಕ್ಕೆ ನಡೆಯಲಿರುವ ‘ದೇವರುಗಳ ಹೂವಿನ ಉತ್ಸವ’ದೊಂದಿಗೆ ಮೂರು ದಿನಗಳ ಮಹೋತ್ಸವ ಸಂಪನ್ನಗೊಳ್ಳಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

