CHITRADURGA NEWS | 14 AUGUST 2026
ಚಿತ್ರದುರ್ಗ: ಹಿಂದೂ ಜಾಗರಣ ವೇದಿಕೆ ವತಿಯಿಂದ ನಗರದಾದ್ಯಂತ ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಯಿತು.
ಇದನ್ನೂ ಓದಿ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
ನಗರದ ಆನೆ ಬಾಗಿಲಿನಿಂದ ಆರಂಭವಾದ ಮೆರವಣಿಗೆಯನ್ನು ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಕಲ್ಲೇಶ್ ಹಾಗೂ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲೇಶ್, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹಿರಿಯರು ಹೋರಾಟ ನಡೆಸಿ ತ್ಯಾಗ ಮತ್ತು ಬಲಿದಾನ ಮಾಡಿದ್ದಾರೆ. ದೇಶಭಕ್ತರ ಇತಿಹಾಸವನ್ನು ಇಂದಿನ ಯುವಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು.
ಹಿಂದೂಗಳ ಸಂಘಟನೆಯಿಂದ ದೇಶ ಮತ್ತಷ್ಟು ಸದೃಢವಾಗಲು ಸಾಧ್ಯ. ಆರ್‌ಎಸ್‌ಎಸ್ ಬೆಳೆದು ಬಂದ ಹಾದಿ ಹಾಗೂ ದೇಶದ ಸೇವೆಯಲ್ಲಿ ತೊಡಗಿಸಿಕೊಂಡ ದೇಶಭಕ್ತರ ಕೊಡುಗೆಗಳನ್ನು ಯುವಕರು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.
ಇದನ್ನೂ ಓದಿ: ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
ಆನೆ ಬಾಗಿಲಿನಿಂದ ಆರಂಭವಾದ ಪಂಜಿನ ಮೆರವಣಿಗೆಯು ಗಾಂಧಿ ವೃತ್ತ, ಮರ್ಚೆಂಟ್ ಬ್ಯಾಂಕ್ ರಸ್ತೆ, ಬುರುಜನಹಟ್ಟಿ ಸರ್ಕಲ್, ಸಂಗೊಳ್ಳಿ ರಾಯಣ್ಣ ವೃತ್ತ, ಎಸ್‌ಬಿಎಂ ಸರ್ಕಲ್ ಹಾಗೂ ಪತಂಜಲಿ ಆಸ್ಪತ್ರೆ ರಸ್ತೆ ಮೂಲಕ ಸಾಗಿ ಮತ್ತೆ ಆನೆ ಬಾಗಿಲಿನಲ್ಲಿ ಮುಕ್ತಾಯಗೊಂಡಿತು.
ಮೆರವಣಿಗೆಯುದ್ದಕ್ಕೂ ‘ಭಾರತ್ ಮಾತಾ ಕಿ ಜೈ’, ‘ವಂದೇ ಮಾತರಂ’ ಘೋಷಣೆಗಳು ಮೊಳಗಿದವು.
ಮೆರವಣಿಗೆಯಲ್ಲಿ ಲೀಲಾಧರ ಠಾಕೂರ್, ಬಿಜೆಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಎ. ಮುರಳಿ, ಜಿತೇಂದ್ರ, ರುದ್ರೇಶ್, ಯರ್ರಿಸ್ವಾಮಿ, ಶ್ರೀನಿವಾಸ್, ಓಂಕಾರ್, ಶ್ರೀರಾಮ ಸೇನೆಯ ವೀಣಾ, ಬಿಜೆಪಿ ಕಾರ್ಯದರ್ಶಿ ಎ. ರೇಖಾ ಸೇರಿದಂತೆ ಹಲವರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

