CHITRADURGA NEWS | 17 AUGUST 2026
ಚಿತ್ರದುರ್ಗ: ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಪೊಲೀಸ್ ಕಲ್ಯಾಣಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ಪೊಲೀಸ್ ಮಕ್ಕಳಿಗೆ ಸನ್ಮಾನ ಸಮಾರಂಭ ನಡೆಯಿತು.
ಇದನ್ನೂ ಓದಿ: ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ
ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಭೀಮಾರೆಡ್ಡಿ ಧ್ವಜಾರೋಹಣ ನೆರವೇರಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ದೊರೆತಿಲ್ಲ. ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ ಬ್ರಿಟಿಷರ ಗುಂಡಿಗೆ ಎದೆಯೊಡ್ಡಿ ಹೋರಾಡಿದ್ದಾರೆ. ಅಂತಹ ಮಹಾನ್ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಸ್ಮರಿಸಿಕೊಳ್ಳಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಮುನ್ನಡೆಯಬೇಕು ಎಂದು ಹೇಳಿದರು.
ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿರುವ ಪೊಲೀಸ್ ಸಿಬ್ಬಂದಿಯ ಮಕ್ಕಳನ್ನು ಗೌರವಿಸುವುದರಿಂದ ಅವರಿಗೆ ಮತ್ತಷ್ಟು ಪ್ರೋತ್ಸಾಹ ದೊರೆಯಲಿದೆ. ಇದರಿಂದ ಅವರು ಉನ್ನತ ಶಿಕ್ಷಣದಲ್ಲಿಯೂ ಉತ್ತಮ ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಭೀಮಾರೆಡ್ಡಿ ತಿಳಿಸಿದರು.
ಇದನ್ನೂ ಓದಿ: ಹಸೆಮಣೆ ಏರಲು ಸಜ್ಜಾದ ಜ್ಯೋತಿರಾಜ್
ಸಂಘದ ಗೌರವ ಕಾರ್ಯದರ್ಶಿ ಯೂಸೂಫ್, ಕೋಶಾಧ್ಯಕ್ಷ ಹನುಮಂತರೆಡ್ಡಿ, ಸಹ ಕಾರ್ಯದರ್ಶಿ ನಾಗೇಂದ್ರಪ್ಪ, ನಿವೃತ್ತ ಡಿವೈಎಸ್ಪಿಗಳಾದ ಸೈಯದ್ ಇಸಾಕ್, ಮಹಾಂತರೆಡ್ಡಿ, ಬಸವರಾಜ್, ಅಬ್ದುಲ್ ರೆಹಮಾನ್, ನಿವೃತ್ತ ಸಬ್ಇನ್ಸ್ಪೆಕ್ಟರ್ ನಾಗರಾಜ್ ಸೇರಿದಂತೆ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

