CHITRADURGA NEWS | 19 AUGUST 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಅಭ್ಯರ್ಥಿಗಳಿಗಾಗಿ ‘ಟೂಲ್ ರೂಮ್ ಮಷಿನಿಸ್ಟ್’ ಕೋರ್ಸ್‍ನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬಕ್ಕೆ ಅವಕಾಶವಿಲ್ಲ | ಸಚಿವ ರಘುಮೂರ್ತಿ
AITT (SCP&TSP) ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಉಚಿತ ಕೋರ್ಸ್ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳ ವಯಸ್ಸು 16 ರಿಂದ 35 ವರ್ಷದೊಳಗಿರಬೇಕು.
ಇದರೊಂದಿಗೆ ಎಸ್‍ಎಸ್‍ಎಲ್‍ಸಿ ಪಾಸ್ ಅಥವಾ ಫೇಲ್ ಆದ ಎಲ್ಲಾ ವರ್ಗದ ಯುವಕ-ಯುವತಿಯರೂ ಸಹ ಕನಿಷ್ಠ ಶುಲ್ಕದೊಂದಿಗೆ ಈ ತರಬೇತಿಯನ್ನು ಪಡೆದುಕೊಳ್ಳಬಹುದು.
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ | ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ವೇ ನಂ. 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್, ಚಿತ್ರದುರ್ಗ – 577524, ಮೊಬೈಲ್ ಸಂಖ್ಯೆ 9738465834, 9481866855, 8660270535 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

