CHITRADURGA NEWS | 20 AUGUST 2026
ಚಿತ್ರದುರ್ಗ: ಯಾವುದೇ ಸಹಕಾರ ಸಂಘಗಳು ಆರ್ಥಿಕವಾಗಿ ಬೆಳೆದು ಅಭಿವೃದ್ಧಿ ಹೊಂದಬೇಕಾದರೆ ಇಂತಹ ತರಬೇತಿಗಳನ್ನು ಪಡೆಯುವುದು ಅತ್ಯಂತ ಅವಶ್ಯಕ. ಸಂಘಗಳಲ್ಲಿ ಯಾವುದೇ ಪಕ್ಷ, ಜಾತಿ, ಮತ ಹಾಗೂ ಧರ್ಮದ ಭೇದಭಾವವಿಲ್ಲದೆ ಹಣಕಾಸು ವ್ಯವಹಾರ ನಡೆಸಿದರೆ ಮಾತ್ರ ಅವು ಉತ್ತಮವಾಗಿ ಬೆಳೆಯಲು ಸಾಧ್ಯ ಎಂದು ಸಹಕಾರರತ್ನ ಪುರಸ್ಕøತ ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿ.ಇ. ಅಜ್ಜಪ್ಪ ಹೇಳಿದರು.
ಇದನ್ನೂ ಓದಿ: ಹರ್ ಘರ್ ಜಲ್ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 4 ದಿನಗಳ ಕಾಲಾವಕಾಶ | ಜಿ.ಪಂ. ಸಿಇಓ
ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ನಗರದ ಐಶ್ವರ್ಯ ನವೀನ್ ಹೋಟೆಲ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಬೆಂಗಳೂರು ವಿಭಾಗದ ಆಯ್ದ ಅಲ್ಪಸಂಖ್ಯಾತರ ಸಹಕಾರ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಒಂದು ದಿನದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂಸ್ಥೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಮಂಡಳಿ ಉತ್ತಮವಾಗಿ ಕೆಲಸ ನಿರ್ವಹಿಸಲು ಇಂತಹ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ಎನ್. ತಿಪ್ಪೇಸ್ವಾಮಿ ಮಾತನಾಡಿ, ಸಹಕಾರ ಕ್ಷೇತ್ರವು ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ ಮಹತ್ವದ ಹೆಬ್ಬಾಗಿಲಾಗಿದೆ ಎಂದರು.
ಸಹಕಾರ ಸಂಘಗಳ ಚುನಾವಣೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಮೀಸಲಾತಿ ನೀಡುವ ಕುರಿತು ಕಾನೂನು ತಿದ್ದುಪಡಿಯಾಗಿದೆ. ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯವರು ಕಾನೂನಾತ್ಮಕವಾಗಿ, ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿದರೆ ಯಾವುದೇ ರೀತಿಯ ಬಾಹ್ಯ ಹಸ್ತಕ್ಷೇಪಗಳು ಬರುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ಪತ್ರಕರ್ತರಿಗೆ ಮೀಡಿಯಾ ಕಿಟ್ | ಅರ್ಜಿ ಆಹ್ವಾನ
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಆರ್. ಮಲ್ಲೇಶಪ್ಪ ಮಾತನಾಡಿ, ಕರ್ನಾಟಕ ಸಹಕಾರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್ಗಳು ಮಾತೃ ಸಂಸ್ಥೆಗಳಾಗಿ ಎಲ್ಲಾ ಸಂಘಗಳಿಗೆ ತರಬೇತಿ ನೀಡುತ್ತ ಬಂದಿವೆ.
ಚಿತ್ರದುರ್ಗ, ಬೆಂಗಳೂರು, ದಾವಣಗೆರೆ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಸಹಕಾರ ಕಾಯ್ದೆ ಹಾಗೂ ಅಲ್ಪಸಂಖ್ಯಾತರ ನಿಗಮದ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದರು.
ಇನ್ನೊಬ್ಬ ನಿರ್ದೇಶಕ ಎಚ್.ಎಂ. ಮಂಜುನಾಥಪ್ಪ ಮಾತನಾಡಿ, ಚುನಾಯಿತ ಅಧ್ಯಕ್ಷರು ಹೆಚ್ಚಿನ ಜವಾಬ್ದಾರಿಯಿಂದ ಸಿಬ್ಬಂದಿಯಿಂದ ಕೆಲಸ ತೆಗೆದುಕೊಂಡು ಸಂಸ್ಥೆಯನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ತಿಪ್ಪೇಸ್ವಾಮಿಯವರ ಕಾಯಕ ತತ್ವ ಸಮಾಜಕ್ಕೆ ಮಾದರಿ
ಕಾರ್ಯಕ್ರಮದಲ್ಲಿ ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕ ಎಚ್.ಎಸ್. ನಾಗರಾಜಯ್ಯ ಅವರು ಸಹಕಾರ ಕಾಯ್ದೆಯ ತಿದ್ದುಪಡಿ ಹಾಗೂ ಮುಖ್ಯಾಂಶಗಳ ಕುರಿತು, ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ್ ಅವರು ಸಮಯ ಪ್ರಜ್ಞೆ ಮತ್ತು ಒತ್ತಡ ನಿರ್ವಹಣೆ ಕುರಿತು ಹಾಗೂ ಚಿತ್ರದುರ್ಗ ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕ ಮಹೆಬೂಬ್ ಅಲಿ ಅವರು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸೌಲಭ್ಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಯೂನಿಯನ್ ನಿರ್ದೇಶಕ ಜಿ.ವಿ. ಗಂಗಾಧರಪ್ಪ ಉಪಸ್ಥಿತರಿದ್ದರು. ಜಿಲ್ಲಾ ಸಹಕಾರ ಶಿಕ್ಷಕ ನಾಗರಾಜ್ ಪಾಟೀಲ್ ಸ್ವಾಗತಿಸಿದರು. ಯೂನಿಯನ್ ಸಿಇಒ ಜಯಶ್ರೀ ಪಿ. ಹುನಗುಂದ ನಿರೂಪಿಸಿದರು ಹಾಗೂ ವ್ಯವಸ್ಥಾಪಕಿ ಸೌಮ್ಯ ವಂದಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

