
CHITRADURGA NEWS | 28 August 2026
ಚಿತ್ರದುರ್ಗ: ಮಧ್ಯ ಕರ್ನಾಟಕ, ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿಗೆ ಆಗ್ರಹಿಸಿ ಸೆ.1 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ವಾಣಿವಿಲಾಸ ಸಾಗರ ಜಲಾಶಯದ ಬಳಿ ಬಯಲು ಸೀಮೆ ನೀರಾವರಿ ಹೋರಾಟ ಸಮಿತಿಯಿಂದ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಸಮಿತಿಯ ಪ್ರಧಾನ ಸಂಚಾಲಕ ಲಕ್ಷ್ಮಣ್ ಹೂಗಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಧರಣಿಯಲ್ಲಿ ರೈತ ಮುಖಂಡ ಈಚಘಟ್ಟದ ಸಿದ್ದವೀರಪ್ಪ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು. ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವರು. ವಿದ್ಯಾರ್ಥಿಗಳು, ಯುವಜನರು, ರೈತ ಮಹಿಳೆಯರು, ಪ್ರಗತಿಪರ ಚಿಂತಕರು, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಚಳ್ಳಕೆರೆ ಭಾಗದ ರೈತರು ಹಾಗೂ ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಧರಣಿ ಸತ್ಯಾಗ್ರಹವನ್ನು ಯಶಸ್ವಿಗೊಳಿಸುವಂತೆ ಲಕ್ಷ್ಮಣ್ ಹೂಗಾರ್ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

