CHITRADURGA NEWS | 01 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ಸ್ಥಳೀಯ ಹವಾಮಾನ ಸವಾಲುಗಳನ್ನು ಪರಿಹರಿಸುವ ನವೀನ ಮತ್ತು ಸಮುದಾಯ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಯುವ ಹವಾಮಾನ ಕಾರ್ಯ ನಿಧಿ’ ಯೋಜನೆಯಡಿ 15 ರಿಂದ 24 ವರ್ಷ ವಯಸ್ಸಿನ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
ಬ್ಲೂಮ್ಬರ್ಗ್ ಫಿಲಾಂತ್ರಪೀಸ್ ಬೆಂಬಲಿತ ಈ ಯೋಜನೆಯು ಹಸಿರು, ಆರೋಗ್ಯಕರ ಹಾಗೂ ಹವಾಮಾನ ಸ್ಥಿತಿಸ್ಥಾಪಕ ಚಿತ್ರದುರ್ಗ ನಿರ್ಮಾಣಕ್ಕೆ ಕೊಡುಗೆ ನೀಡುವ ಆಲೋಚನೆಗಳನ್ನು ಹವಾಮಾನ ಪರಿಹಾರಗಳಾಗಿ ರೂಪಿಸಲು ಯುವಜನರಿಗೆ ವೇದಿಕೆ ಕಲ್ಪಿಸಲಿದೆ. ಸಂಘ-ಸಂಸ್ಥೆಗಳು, ಎನ್ಜಿಒ ಹಾಗೂ ವಿದ್ಯಾರ್ಥಿ ಸಂಸ್ಥೆಗಳ ಸಹಯೋಗದೊಂದಿಗೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆಸಕ್ತರು ಅರ್ಜಿ ಸಲ್ಲಿಸಬಹುದು.
ಆಸಕ್ತರು 2026ರ ಅಕ್ಟೋಬರ್ 15 ರೊಳಗಾಗಿ ಪೌರಾಯುಕ್ತರು, ನಗರಸಭೆ, ಚಿತ್ರದುರ್ಗ ಇವರ ಹೆಸರಿಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಬಂದ್ಗೆ ತೀರ್ಮಾನ | ಬರ ಘೋಷಣೆ ತಾರತಮ್ಯ, ಗುಟ್ಕಾ ನಿಷೇಧಕ್ಕೆ ಖಂಡನೆ
ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿ ವೇಳೆಯಲ್ಲಿ ಲೆಕ್ಕಪತ್ರ ಶಾಖೆಯ ಜಿ.ಕೆ. ರಘುವೀರ ಹಾಗೂ ಸಮನ್ವಯಾಧಿಕಾರಿ ಕೆ. ಪುಟ್ಟಪ್ಪ ಅವರನ್ನು ನೇರವಾಗಿ ಭೇಟಿ ಮಾಡಬಹುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

