
CHITRADURGA NEWS | 02 SEPTEMBER 2026
ಚಿತ್ರದುರ್ಗ: ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ನಗರಗಳಿಗೆ ಗುಳೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲೇ ಉದ್ಯೋಗ ಪಡೆದು ಆರ್ಥಿಕವಾಗಿ ಸಬಲರಾಗಲು ‘ವಿಕಸಿತ ಭಾರತ -ಗ್ಯಾರಂಟಿ ಫಾರ್ ರೋಜಗಾರ್ & ಆಜೀವಿಕ ಮಿಷನ್‘ (‘ವಿಬಿ-ಜಿ ರಾಮ್ ಜಿ’) ಅತ್ಯಂತ ಪೂರಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
ಇಲ್ಲಿನ ಆಕಾಶವಾಣಿಯ ‘ಜ್ಞಾನ ವಾಹಿನಿ’ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಬುಧವಾರ ಭಾಗವಹಿಸಿ ಯೋಜನೆ ಕುರಿತು ಸಾರ್ವಜನಿಕರಿಗೆ ವಿಸ್ತøತ ಮಾಹಿತಿ ನೀಡಿದರು.
ವಿಬಿ-ಜಿ ರಾಮ್ ಜಿ ಯೋಜನೆಯಡಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪುರುಷ ಮತ್ತು ಮಹಿಳಾ ಕೂಲಿಗಾರರಿಗೆ ಯಾವುದೇ ತಾರತಮ್ಯವಿಲ್ಲದೆ ದಿನಕ್ಕೆ ರೂ. 382/- ಸಮಾನ ಕೂಲಿ ನಿಗದಿಪಡಿಸಲಾಗಿದೆ. ಉದ್ಯೋಗ ಕಾರ್ಡ್ ಇಲ್ಲದ ಗ್ರಾಮೀಣ ಜನರಿಗಾಗಿ ‘ಜಾಬ್ ಕಾರ್ಡ್ ಮೇಳ’ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೊಸದಾಗಿ ಕಾರ್ಡ್ ಪಡೆದು ಕೂಲಿ ಬೇಡಿಕೆ ಸಲ್ಲಿಸಬಹುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಬಯೋಜನೆ ಕುರಿತು ಮನೆ ಮನೆಗೆ ಕರಪತ್ರ, ಜಾಗೃತಿ ಜಾಥಾ ಹಾಗೂ ‘ಸ್ವಚ್ಛ ವಾಹಿನಿ’ ಮೂಲಕ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡಲಾಗುತ್ತಿದೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಯಾವುದೇ ದೂರು ಅಥವಾ ಸಮಸ್ಯೆಗಳಿದ್ದಲ್ಲಿ ಪರಿಹರಿಸಿಕೊಳ್ಳಲು ‘ಪ್ರಜಾಸೇವಾ ಗ್ರಾಮ ಫೋನ್’ ಉಚಿತ ಸಹಾಯವಾಣಿ ಸಂಖ್ಯೆ 1800 425 1978 ಗೆ ಕರೆ ಮಾಡಬಹುದು. ಯೋಜನೆಯ ಉಸ್ತುವಾರಿಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ‘ಪ್ರೋಗ್ರಾಮ್ ಮಾನಿಟರಿಂಗ್ ಯುನಿಟ್’ ಕಾರ್ಯನಿರ್ವಹಿಸುತ್ತಿದೆ ಎಂದರು.
ಇದನ್ನೂ ಓದಿ: ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಆರೋಪ | ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕೇಳಿದ ಪ್ರಶ್ನೆಗಳಿಗೆ ಸಿಇಒ ಸ್ಥಳದಲ್ಲೇ ಸೂಕ್ತ ಮಾಹಿತಿ ಹಾಗೂ ಪರಿಹಾರ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ. ಬಾಬು, ಎಡಿಪಿಸಿ ಮೋಹನ್ ಕುಮಾರ್, ಐಇಸಿ ಸಂಯೋಜಕ ರವೀಂದ್ರನಾಥ್, ಎಂಐಎಸ್ ಸಂಯೋಜಕಿ ಸಹನಾ ಹಾಗೂ ಆಕಾಶವಾಣಿ ನಿರ್ದೇಶಕರಾದ ಶಿವಪ್ರಕಾಶ್ ಮತ್ತು ಡಿ. ಕಾವ್ಯ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

