CHITRADURGA NEWS | 4 SEPTEMBER 2026
ಚಿತ್ರದುರ್ಗ: ದಶಕಗಳ ಕಾಯುವಿಕೆಗೆ ವಿರಾಮ ಹಾಕುವ ಸಮಯ ಹತ್ತಿರವಾಗುತ್ತಿದೆ. ಬರದ ನಾಡಿಗೆ ಭದ್ರೆ ಹರಿಯಲು ದಿನಾಂಕ ನಿಗಧಿಯಾಗಿದೆ.
ಸೆಪ್ಟಂಬರ್ 6 ಭಾನುವಾರವೇ ಜಿಲ್ಲೆಯತ್ತ ಭದ್ರೆ ಮುಖ ಮಾಡಲಿದ್ದು, ಒಂದು ವಾರದಲ್ಲಿ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ ತಾಲೂಕುಗಳಲ್ಲಿ ಭದ್ರಾ ನೀರು ಹರಿಯಲಿದೆ.
ಭದ್ರಾ ಮೇಲ್ದಂಡೆ ಯೋಜನೆಗೆ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಯ ಚೈ.೦ ಕಿ.ಮೀನಿಂದ ಚೈ.114.142 ಕಿ.ಮೀವರೆಗೆ ಗೋನೂರು ಕೆರೆವರೆಗೆ ಪ್ರಾಯೋಗಿಕವಾಗಿ ನೀರು ಹರಿಯಲಿದೆ.
ಗೋನೂರು ಕೆರೆಯಿಂದ ನೈಸರ್ಗಿಕ ಹಳ್ಳದ ಮೂಲಕ ಚಳ್ಳಕೆರೆ ತಾಲೂಕಿನ ರಾಣಿಕೆರೆವರೆಗೆ ಭದ್ರಾ ನೀರು ಹರಿಸಲಾಗುವುದು.
ಇದನ್ನೂ ಓದಿ:ಶಿಕ್ಷಕರಿಗೆ ಪ್ರಶಸ್ತಿ ಪ್ರಕಟ | 33 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ
ಸಾರ್ವಜನಿಕರು ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆಗೆ, ಕೆರೆಯ ಕೋಡಿ, ಹಳ್ಳದ ಪಾತ್ರಗಳಲ್ಲಿ ತಿರುಗಾಡುವುದು, ಜಾನುವಾರುಗಳನ್ನು ಕಾಲುವೆಗೆ ಇಳಿಸುವುದು, ಈಜಾಡುವುದು ಮಾಡಬಾರದು ಎಂದು ಭದ್ರಾ ಮೇಲ್ದಂಡೆ ಯೋಜನೆ ಅಧೀಕ್ಷಕ ಇಂಜಿನಿಯರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

