
CHITRADURGA NEWS | 07 SEPTEMBER 2026
ಚಿತ್ರದುರ್ಗ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ 2026–27ನೇ ಸಾಲಿನ ಜಿಲ್ಲೆಯ ವಿವಿಧ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಸೆಪ್ಟೆಂಬರ್ 8ರಿಂದ ಆಯೋಜಿಸಲಾಗಿದೆ.
ಇದನ್ನೂ ಓದಿ: ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಎಲ್ಲ ವಯೋಮಾನದ ಕ್ರೀಡಾಪಟುಗಳಿಗೂ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ಆಸಕ್ತರು https://dasaracmcup.in/ ವೆಬ್ಸೈಟ್ ಮೂಲಕ ಆನ್ಲೈನ್ ನೋಂದಣಿ (Online Registration) ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಾಯಿಸದ ಕ್ರೀಡಾಪಟುಗಳಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ.
ಹೊಸದುರ್ಗದ ತಾಲೂಕು ಕ್ರೀಡಾಂಗಣ ಸೆಪ್ಟೆಂಬರ್ 8 ರಂದು ಬೆಳಿಗ್ಗೆ 9 ಗಂಟೆಗೆ, ಚಳ್ಳಕೆರೆಯ ಬಿಸಿಲೂರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆ ಸೆಪ್ಟೆಂಬರ್ 13 ರಂದು ಬೆಳಿಗ್ಗೆ 9 ಗಂಟೆಗೆ, ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 17ರಂದು ಬೆಳಿಗ್ಗೆ 9 ಗಂಟೆಗೆ ಕ್ರೀಡೆಗಳು ನಡೆಯಲಿವೆ.
ಹೊಸದುರ್ಗಕ್ಕೆ ಸಂಬಂಧಿಸಿದಂತೆ ಮಹಾಂತಪ್ಪ 9901623062 ಚಳ್ಳಕೆರೆ ಸಂಬಂಧಿಸಿದಂತೆ ಶ್ರೀನಿವಾಸ್ -9620019405, ತಿಪ್ಪೇಸ್ವಾಮಿ 8618855957 ಹಾಗೂ ಚಿತ್ರದುರ್ಗ ಸಂಬಂಧಿಸಿದಂತೆ ಮಹಮ್ಮದ್ ಮುಹೀಬುಲ್ಲಾ – 9611673475 ಸಂಪರ್ಕಿಸಬಹುದು.
ಇದನ್ನೂ ಓದಿ: ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ಬಾಲ್, ಥ್ರೋಬಾಲ್ ಹಾಗೂ ಯೋಗಾಸನ ಸ್ಪರ್ಧೆಗಳು ಜರುಗಲಿವೆ.
ಆಥ್ಲೆಟಿಕ್ಸ್ ವಿಭಾಗ: 100 ಮೀ., 200 ಮೀ., 400 ಮೀ., 800 ಮೀ., 1500 ಮೀ., 5000 ಮೀ. ಓಟ (ಮಹಿಳೆಯರಿಗೆ 3000 ಮೀ.), ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 4×100 ಮೀ. ರಿಲೇ ಮತ್ತು 4×400 ಮೀ. ರಿಲೇ ಸ್ಪರ್ಧೆಗಳು ನಡೆಯಲಿವೆ.
ತಾಲೂಕು ಮಟ್ಟದ ಆಥ್ಲೆಟಿಕ್ಸ್ನಲ್ಲಿ ಪ್ರಥಮ, ದ್ವಿತೀಯ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುತ್ತವೆ. ಆಯಾ ತಾಲೂಕು ಮತ್ತು ಜಿಲ್ಲೆಯ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶವಿದ್ದು, ದೃಢೀಕರಣಕ್ಕಾಗಿ ಆಧಾರ್ ಕಾರ್ಡ್ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿ ಸಲ್ಲಿಸಬೇಕು. ಬೇರೆ ಜಿಲ್ಲೆಯವರು ಭಾಗವಹಿಸುವುದು ನಿಷೇಧಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
ಪೊಲೀಸ್, ಅಬಕಾರಿ, ಅರಣ್ಯ, ಅಗ್ನಿಶಾಮಕ, ರಕ್ಷಣಾಪಡೆ ಮತ್ತು ಅರೆರಕ್ಷಣಾಪಡೆಗೆ ಸೇರಿದ ಕ್ರೀಡಾಪಟುಗಳಿಗೆ ಈ ಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಸ್ಪರ್ಧೆಯಲ್ಲಿ ವಿಜೇತರಾದ ಕ್ರೀಡಾಪಟುಗಳು ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

