CHITRADURGA NEWS | 08 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಕಾಟಿಹಳ್ಳಿ ಕರಿಯಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಮೈಲಾರಪ್ಪ ಹಾಗೂ ಖಜಾಂಚಿಯಾಗಿ ಎಸ್.ಎಂ.ಎಲ್. ಪ್ರವೀಣ್ ಅವರು ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
ಜಾನುಕೊಂಡ ಸಮೀಪದ ರಂಗನಾಥಸ್ವಾಮಿ ಬೆಟ್ಟದಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥ್ ಅವರ ಸಮ್ಮುಖದಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ ಹಾಗೂ ಅನ್ವರ್‌ಭಾಷ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

