CHITRADURGA NEWS | 10 SEPTEMBER 2026
ಚಿತ್ರದುರ್ಗ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಸೇರಿದಂತೆ ಈ ನಿಗಮದ ವ್ಯಾಪ್ತಿಯ ವಿವಿಧ ನಿಗಮಗಳಲ್ಲಿ ಹಿಂದುಳಿದ ವರ್ಗಗಳ ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್ಗೆ ಅರ್ಜಿ ಆಹ್ವಾನ
ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಸಹಾಯಧನ ಹಾಗೂ ಸಾಲಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ
ಹೆಚ್ಚಿನ ಮಾಹಿತಿಗಾಗಿ ಆಯಾ ನಿಗಮದ ವೆಬ್ಸೈಟ್ ಹಾಗೂ ಚಿತ್ರದುರ್ಗ ನಗರದ ಅಪ್ಪಾಜಿ ಪರಿಸರ ಬಿಲ್ಡಿಂಗ್ ಎದುರು, ಸ್ಟೇಡಿಯಂ ರಸ್ತೆಯ 1ನೇ ಕ್ರಾಸ್, ಪ್ರಶಾಂತ ನಗರದ ಎನ್.ಲಿಂಗಣ್ಣ ಬಿಲ್ಡಿಂಗ್ನಲ್ಲಿರುವ ಜಿಲ್ಲಾ ವ್ಯವಸ್ಥಾಪಕರನ್ನು ಹಾಗೂ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

