CHITRADURGA NEWS | 11 SEPTEMBER 2026
ಚಿತ್ರದುರ್ಗ: ಜಿಲ್ಲಾಧಿಕಾರಿಗಳನ್ನು ಭೇಟಿಯಾಗುವ ಸಂದರ್ಭದಲ್ಲಿ ಹೂಗುಚ್ಛ, ಶಾಲು ಅಥವಾ ಹಾರಗಳನ್ನು ನೀಡುವ ಬದಲಾಗಿ ನೋಟ್ಬುಕ್ ಮತ್ತು ಪೆನ್ಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಎಸ್. ರಮ್ಯ ಅವರು ಸಾರ್ವಜನಿಕರು ಹಾಗೂ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಸೌಜನ್ಯದ ಭೇಟಿಯ ವೇಳೆ ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೂಗುಚ್ಛ ನೀಡಿ ಗೌರವಿಸುವುದು ವಾಡಿಕೆಯಾಗಿದೆ. ಆದರೆ ಹೂಗುಚ್ಛಗಳು ಅಲ್ಪಕಾಲಿಕವಾಗಿದ್ದು, ಪುನರ್ ಬಳಕೆಗೆ ಯೋಗ್ಯವಾಗಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ‘ಕಲಿಕೆಗೆ ಉಡುಗೊರೆ’ ಎಂಬ ಸದುದ್ದೇಶದಿಂದ ಈ ಹೊಸ ತೀರ್ಮಾನ ಕೈಗೊಳ್ಳಲಾಗಿದೆ. ಹೂಗುಚ್ಛದ ಬದಲು ಸಂಗ್ರಹವಾಗುವ ನೋಟ್ಬುಕ್ ಹಾಗೂ ಬರವಣಿಗೆ ಉಪಕರಣಗಳನ್ನು ಸರ್ಕಾರಿ ಶಾಲೆಗಳ ಮತ್ತು ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ.
ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ಮತ್ತು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ರಮ್ಯ ಅಭಿಪ್ರಾಯಪಟ್ಟಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

